Homeಮುಖಪುಟಯುಪಿ ಚುನಾವಣೆ: ಸಿಎಂ ಆದಿತ್ಯನಾಥ್ ವಿರುದ್ಧ ಗೋರಖ್‌ಪುರ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧ - ಡಾ. ಕಫೀಲ್...

ಯುಪಿ ಚುನಾವಣೆ: ಸಿಎಂ ಆದಿತ್ಯನಾಥ್ ವಿರುದ್ಧ ಗೋರಖ್‌ಪುರ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧ – ಡಾ. ಕಫೀಲ್ ಖಾನ್

- Advertisement -
- Advertisement -

’ಯಾವುದಾದರೂ ಪಕ್ಷ ಟಿಕೆಟ್ ನೀಡಿದರೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಗೋರಖ್‌ಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಸಿದ್ಧ’ ಎಂದು ಉತ್ತರ ಪ್ರದೇಶದ ವೈದ್ಯ ಡಾ. ಕಫೀಲ್ ಖಾನ್ ಮಂಗಳವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಗೋರಖ್‌ಪುರದ ಬಾಬಾ ರಾಘವ್ ದಾಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಕ್ಕಳ ತಜ್ಞ ಕಫೀಲ್ ಖಾನ್, “ನಾನು ಯೋಗಿ ಆದಿತ್ಯನಾಥ್ ವಿರುದ್ಧ ಗೋರಖ್‌ಪುರದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಯಾವುದೇ ಪಕ್ಷ ನನಗೆ ಟಿಕೆಟ್ ನೀಡಿದರೆ ನಾನು ಸಿದ್ಧ” ಎಂದು ಹೇಳಿದ್ದಾರೆ.

2017 ರಲ್ಲಿ ಗೋರಖ್‌ಪುರದ ಸರ್ಕಾರಿ ಬಾಬಾ ರಾಘವ್ ದಾಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ 63 ಮಕ್ಕಳು ಸಾವನ್ನಪ್ಪಿದ ನಂತರ ವೈದ್ಯ ಖಾನ್ ಅವರನ್ನು ಅಮಾನತುಗೊಳಿಸಲಾಗಿತ್ತು. ವೈದ್ಯಕೀಯ ನಿರ್ಲಕ್ಷ್ಯಕ್ಕಾಗಿ ಅವರನ್ನು ಜೈಲಿಗೆ ಹಾಕಲಾಯಿತು. ಆದರೆ ನ್ಯಾಯಾಲಯ ಅವರು ಅಮಾಯಕರು ಮತ್ತು ಉದ್ದೇಶಪೂರ್ವಕವಾಗಿ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿ ಪ್ರಕರಣ ಕೈಬಿಟ್ಟಿತ್ತು.

ಇದನ್ನೂ ಓದಿ: ಡಾ. ಕಫೀಲ್ ಖಾನ್ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ: ಯುಪಿ ಸರ್ಕಾರಕ್ಕೆ ಮುಖಭಂಗ

ನೀವು ಯಾವುದಾದರೂ ಪಕ್ಷದೊಂದಿಗೆ ಸಂಪರ್ಕದಲ್ಲಿದ್ದಾರೆಯೇ ಅಥವಾ ಯಾರನ್ನಾದರೂ ಸಂಪರ್ಕಿಸಿದ್ದೀರಾ ಎಂಬ ಪ್ರಶ್ನೆಗೆ, “ಹೌದು, ಮಾತುಕತೆ ನಡೆಯುತ್ತಿದೆ, ಎಲ್ಲವೂ ಸರಿಯಾಗಿ ನಡೆದರೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ” ಎಂದು ಹೇಳಿದ್ದಾರೆ. ಗೋರಖ್‌ಪುರದಲ್ಲಿ ಮಾರ್ಚ್ 3 ರಂದು ಆರನೇ ಹಂತದಲ್ಲಿ ಮತದಾನ ನಡೆಯಲಿದೆ.

ಆಗ ಡಾ.ಕಫೀಲ್ ಖಾನ್ ದೇಶಾದ್ಯಂತದ ಎಲ್ಲಾ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ನೀಗಿಸಲು ದೊಡ್ಡ ಮಟ್ಟದ ಸಂಗ್ರಹಕ್ಕೆ ಆಗ್ರಹಿಸಿದ್ದರು. ಅಲ್ಲದೇ ಜನಪರ ಆರೋಗ್ಯ ನೀತಿಗಾಗಿ ಒತ್ತಾಯಿಸಿದ್ದರು. ಆದರೆ ಸಿಎಎ ವಿರುದ್ಧ ಅವರು ಮಾತನಾಡಿದ್ದಕ್ಕಾಗಿ ಅವರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಅವರನ್ನು ಮತ್ತೊಮ್ಮೆ ಜೈಲಿಗೆ ಹಾಕಲಾಗಿತ್ತು. ತದನಂತರವು ಅವರು ನಿರಪರಾಧಿಯಾಗಿ ಬಿಡುಗಡೆಯಾಗಿದ್ದಾರೆ.

ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿರುವ ಅವರು, “ನಾನು ಫೇಸ್‌ಬುಕ್, ಟ್ವಿಟರ್, ಇತ್ಯಾದಿ ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯವಾಗಿದ್ದೇನೆ. ಅಲ್ಲಿ ನಾನು ಇರುವ ಸ್ಥಳದ ಬಗ್ಗೆ ಹೇಳುತ್ತೇನೆ. ಪ್ರಸ್ತುತ, ನಾನು ಮುಂಬೈನಲ್ಲಿದ್ದೇನೆ. ಇಲ್ಲಿಂದ ನಾನು ನನ್ನ ‘The Gorakhpur Hospital Tragedy- A Doctor’s Memoir of a Deadly Medical Crisis ಪುಸ್ತಕದ ಪ್ರಚಾರಕ್ಕಾಗಿ ಹೈದರಾಬಾದ್ ಮತ್ತು ಬೆಂಗಳೂರಿಗೆ ಹೋಗುತ್ತಿದ್ದೇನೆ. ಇದು 5000 ಕ್ಕೂ ಹೆಚ್ಚು ಪ್ರತಿಗಳು ಮಾರಾಟವಾಗುವುದರೊಂದಿಗೆ ಬೆಸ್ಟ್ ಸೆಲ್ಲರ್ ಆಗಿದೆ” ಎಂದು ಡಾ.ಕಫೀಲ್ ಖಾನ್ ಹೇಳಿದ್ದಾರೆ.


ಇದನ್ನೂ ಓದಿ: 2017ರಲ್ಲಿಯೇ ಆಕ್ಸಿಜನ್ ಕೊರತೆ ಬಗ್ಗೆ ದನಿಯೆತ್ತಿದ್ದೆ, ಆದರೆ ನನ್ನನ್ನು ಜೈಲಿಗೆ ಹಾಕಲಾಯಿತು: ಡಾ.ಕಫೀಲ್ ಖಾನ್ ಬೇಸರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇರಳ: ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿಗೆ ಹಲ್ಲೆ ನಡೆಸಿದ ಸ್ವಪಕ್ಷದ ಮುಖಂಡ

0
ಕೇರಳದ ಕೊಲ್ಲಂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ ಕೃಷ್ಣಕುಮಾರ್ ಅವರ ಕಣ್ಣಿಗೆ ತೀವ್ರ ಸ್ವರೂಪದ ಗಾಯವಾಗಿದ್ದು, ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಪಕ್ಷದ ಸ್ಥಳೀಯ ನಾಯಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಕೃಷ್ಣಕುಮಾರ್ ಇತ್ತೀಚೆಗೆ...