Homeಮುಖಪುಟಯುಪಿ ಚುನಾವಣೆ: ಮತಗಟ್ಟೆಯೊಳಗಿನ ಚಿತ್ರಗಳನ್ನು ಹಂಚಿಕೊಂಡ ಮೇಯರ್‌, FIR ದಾಖಲು

ಯುಪಿ ಚುನಾವಣೆ: ಮತಗಟ್ಟೆಯೊಳಗಿನ ಚಿತ್ರಗಳನ್ನು ಹಂಚಿಕೊಂಡ ಮೇಯರ್‌, FIR ದಾಖಲು

- Advertisement -
- Advertisement -

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ಮೇಯರ್‌ ಒಬ್ಬರು ಮತಗಟ್ಟೆಯೊಳಗಿನ ಫೋಟೋ ಮತ್ತು ವಿಡಿಯೋಗಳನ್ನು ತೆಗೆದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಕಾನ್ಪುರ ಮೇಯರ್‌ ಪ್ರಮೀಳಾ ಪಾಂಡೆ ಕಾನ್ಪುರದ ಹಡ್ಸನ್ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಈ ವೇಳೆ ಮತಗಟ್ಟೆಯೊಳಗೆ ತಾವು ಮತದಾನ ಮಾಡುತ್ತಿರುವ ಫೋಟೋ ಮತ್ತು ವೀಡಿಯೊಗಳನ್ನು ತೆಗೆದುಕೊಂಡು ಟ್ವಿಟರ್‌, ವಾಟ್ಸಾಪ್‌ ಸೇರಿದಂತೆ ಹಲವು ವೇದಿಕೆಗಳಲ್ಲಿ ಹಂಚಿಕೊಂಡು ವಿವಾದ ಸೃಷ್ಟಿಸಿದ್ದಾರೆ.  ವಿದ್ಯುನ್ಮಾನ ಮತಯಂತ್ರದ (ಇವಿಎಂ) ಫೋಟೋವನ್ನು  ಹಂಚಿಕೊಂಡಿದ್ದಾರೆ.

ಮೇಯರ್ ಪ್ರಮೀಳಾ ಪಾಂಡೆ ವಿರುದ್ಧ ಹಡ್ಸನ್ ಸ್ಕೂಲ್ ಮತಗಟ್ಟೆಯಲ್ಲಿ ಮತದಾನದ ಗೌಪ್ಯತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಎಫ್‌ಐಆರ್ ದಾಖಲಿಸಲಾಗುತ್ತಿದೆ ಎಂದು ಕಾನ್ಪುರ ನಗರದ ಜಿಲ್ಲಾ ಮ್ಯಾಜಿಸ್ಟ್ರೇಟ್ ಟ್ವಿಟರ್ ಮೂಲಕ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ದಲಿತ ಮಹಿಳೆಯನ್ನು ಪ್ರಾರ್ಥಿಸದಂತೆ ತಡೆದ ತಮಿಳುನಾಡಿನ ಚಿದಂಬರಂ ದೇವಸ್ಥಾನದ ಅರ್ಚಕರು

“ಹಡ್ಸನ್ ಸ್ಕೂಲ್ ಮತಗಟ್ಟೆಯಲ್ಲಿ ಮತದಾನದ ಗೌಪ್ಯತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಶ್ರೀಮತಿ ಪ್ರಮೀಳಾ ಪಾಂಡೆ ವಿರುದ್ಧ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಕಾನ್ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಉತ್ತರ ಪ್ರದೇಶದ 16 ಜಿಲ್ಲೆಗಳ 59 ವಿಧಾನಸಭಾ ಕ್ಷೇತ್ರಗಳಿಗೆ ಇಂದು (ಫೆ.20) ಮತದಾನ ನಡೆಯುತ್ತಿದೆ. ಈ ಹಂತದಲ್ಲಿ 627 ಅಭ್ಯರ್ಥಿಗಳು ಕಣದಲ್ಲಿದ್ದು, 2.15 ಕೋಟಿ ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ರಾಜ್ಯದಲ್ಲಿ ಇದು ಮೂರನೇ ಹಂತದ ಮತದಾನ ನಡೆಯುತ್ತಿದ್ದು, ಏಳು ಸುತ್ತುಗಳಲ್ಲಿ ಯುಪಿ  ಚುನಾವಣೆ ಎದುರಿಸುತ್ತಿದೆ.


ಇದನ್ನೂ ಓದಿ: ‘ಅಂಬೇಡ್ಕರ್‌ರಿಗೆ ಅವಮಾನವಾದರೆ ಶೋಷಿತ ಸಮುದಾಯ ಸುಮ್ಮನಿರುವುದಿಲ್ಲ’

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಇದರ ಬೆನ್ನಲ್ಲಿ ರಾಜ್ಯಪಾಲರು ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನಕ್ಕೆ ಪ್ರವೇಶಿಸದಂತೆ ನಿಷೇಧಿಸಿದ್ದಾರೆ, ಇದಲ್ಲದೆ...