Homeಮುಖಪುಟಯುಪಿ ಚುನಾವಣೆ: ಕಾಂಗ್ರೆಸ್, ಎಸ್‌ಪಿ ಮೈತ್ರಿಯಾಗಿದ್ದರೇ ಮತವಿಭಜನೆ ತಡೆಯಬಹುದಿತ್ತು- ಮಮತಾ ಬ್ಯಾನರ್ಜಿ

ಯುಪಿ ಚುನಾವಣೆ: ಕಾಂಗ್ರೆಸ್, ಎಸ್‌ಪಿ ಮೈತ್ರಿಯಾಗಿದ್ದರೇ ಮತವಿಭಜನೆ ತಡೆಯಬಹುದಿತ್ತು- ಮಮತಾ ಬ್ಯಾನರ್ಜಿ

’ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಾರ್ಟಿ ಗೆಲ್ಲಬೇಕು, ಬಿಜೆಪಿ ಸೋಲಬೇಕೆಂದು ನಾನು ಬಯಸುತ್ತೇನೆ’

- Advertisement -
- Advertisement -

ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಪರ ನಾಳೆ ಪ್ರಚಾರ ಆರಂಭಿಸಲಿದ್ದಾರೆ. ಯುಪಿಗೆ ಎರಡು ದಿನಗಳ ಪ್ರವಾಸದಲ್ಲಿರುವ ಅವರು ಈ ಎರಡು ದಿನಗಳು ಎಸ್‌ಪಿ ಪರ ಪ್ರಚಾರ ನಡೆಸಲಿದ್ದಾರೆ.

ಲಕ್ನೋಗೆ ಹೊರಟಿದ್ದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ,’ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ನಡುವೆ ಮೈತ್ರಿಯಾಗಿದ್ದರೇ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ವಿರೋಧಿ ಮತಗಳ ವಿಭಜನೆಯನ್ನು ನಿಲ್ಲಿಸಬಹುದಿತ್ತು. ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳು ಒಗ್ಗಟ್ಟಿನಿಂದ ಹೋರಾಡಿದರೆ ಒಳ್ಳೆಯದು. ಮತಗಳು ವಿಭಜನೆಯಾಗುತ್ತಿರಲಿಲ್ಲ. ನಾವು ಅವರನ್ನು ವಿನಂತಿಸಿದ್ದೇವೆ ಆದರೆ, ಅವರು (ಕಾಂಗ್ರೆಸ್) ಕೇಳಲಿಲ್ಲ” ಎಂದು ಸೋಮವಾರ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಹೇಳಿದ್ದಾರೆ.

“ನಾನು ಅಖಿಲೇಶ್ ಯಾದವ್ ಪರ ಪ್ರಚಾರ ಮಾಡುತ್ತಿದ್ದೇನೆ. ಅವರು ನನ್ನನ್ನು ಪ್ರಚಾರ ಮಾಡಲು ಆಹ್ವಾನಿಸಿದ್ದಾರೆ. ಅವರು ಗೆಲ್ಲಬೇಕೆಂದೂ, ಬಿಜೆಪಿ ಸೋಲಬೇಕೆಂದು ನಾನು ಬಯಸುತ್ತೇನೆ” ಎಂದು ಬ್ಯಾನರ್ಜಿ ತಿಳಿಸಿದ್ದಾರೆ.

ಇದನ್ನೂ ಓದಿ: ಯುಪಿ-2022: ಅಖಿಲೇಶ್‌ ವಿರುದ್ಧ ಅಭ್ಯರ್ಥಿಗಳನ್ನು ಕಣಕ್ಕಿಳಿಸದ ಕಾಂಗ್ರೆಸ್!

ಇದರ ಜೊತೆಗೆ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷವು ಉತ್ತರ ಪ್ರದೇಶದಲ್ಲಿ ಕೆಲವು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಮಾಹಿತಿ ನೀಡಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಟಿಎಂಸಿ ಪಂಜಾಬ್‌ನಿಂದ ಸ್ಪರ್ಧಿಸಲಿದೆ ಎಂದೂ ತಿಳಿಸಿದ್ದಾರೆ.

ಇತ್ತ, ರಾಜಕೀಯ ಸೌಜನ್ಯವನ್ನು ಉಲ್ಲೇಖಿಸಿರುವ ಕಾಂಗ್ರೆಸ್‌ ಪಕ್ಷವು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಪ್ರಗತಿಶೀಲ ಸಮಾಜವಾದಿ ಪಕ್ಷದ ಅಧ್ಯಕ್ಷ ಶಿವಪಾಲ್ ಯಾದವ್ ಸ್ಪರ್ಧಿಸುತ್ತಿರುವ ಯುಪಿಯ ಕರ್ಹಾಲ್ (ಮೈನ್‌ಪುರಿ) ಮತ್ತು ಜಸ್ವಂತ್ ನಗರ (ಇಟಾವಾ) ಕ್ಷೇತ್ರಗಳಿಂದ ಯಾವುದೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ.

ಕರ್ಹಾಲ್ ಕ್ಷೇತ್ರದಿಂದ ಜ್ಞಾನವತಿ ಯಾದವ್ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸುವುದಾಗಿ ಪಕ್ಷವು ಈ ಹಿಂದೆ ಘೋಷಿಸಿತ್ತು. ಆದರೆ ಅಖಿಲೇಶ್‌ ಯಾದವ್ ಅಲ್ಲಿಂದ ಸ್ಪರ್ಧಿಸುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷವು ಘೋಷಿಸಿದ ನಂತರ ಕಾಂಗ್ರೆಸ್‌ ತನ್ನ ಸ್ಪರ್ಧಿಯನ್ನು ಹಿಂದೆ ಸರಿಸಿದೆ. ಕಾಂಗ್ರೆಸ್ ಜಸ್ವಂತ್ ನಗರದಿಂದ ಯಾವುದೇ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ, ಈ ಕ್ಷೇತ್ರದಲ್ಲಿ ಅಲ್ಲಿ ಶಿವಪಾಲ್ ಎಸ್‌ಪಿ ಟಿಕೆಟ್‌ನಲ್ಲಿ ಸ್ಪರ್ಧಿಸಲಿದ್ದಾರೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಮತದಾನ ಆರಂಭವಾಗಲಿದ್ದು, ಮಾರ್ಚ್ 10ಕ್ಕೆ ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ಯುಪಿ ಚುನಾವಣೆ: ಬದಲಾವಣೆ ಎದುರು ನೋಡುತ್ತಿರುವ ‘ದಲಿತ ರಾಜಧಾನಿ’ ಆಗ್ರಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಹಾರದಲ್ಲಿ ಜೆಡಿಯು ಮುಖಂಡನ ಗುಂಡಿಟ್ಟು ಹತ್ಯೆ: ಭುಗಿಲೆದ್ದ ಪ್ರತಿಭಟನೆ

0
ಜೆಡಿಯು ಯುವ ಮುಖಂಡನನ್ನು ಅಪರಿಚಿತ ದಾಳಿಕೋರರು ಗುಂಡಿಕ್ಕಿ  ಹತ್ಯೆ ಮಾಡಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಬೀದಿಗಿಳಿದು ಪ್ರತಿಭಟನೆಯನ್ನು ನಡೆಸಿದ್ದಾರೆ. ಸೌರಭ್ ಕುಮಾರ್ ಹತ್ಯೆಗೀಡಾದ ಜೆಡಿಯು ಯುವ ಮುಖಂಡ....