Homeಮುಖಪುಟರೈತರ ಆಕ್ರೋಶ: ಪೊಲೀಸ್, ಅರೆಸೇನಾ ಸಿಬ್ಬಂದಿ ಬೆಂಗಾವಲಿನಲ್ಲಿ ಮತ ಚಲಾಯಿಸಿದ ಸಚಿವ ಅಜಯ್ ಮಿಶ್ರಾ

ರೈತರ ಆಕ್ರೋಶ: ಪೊಲೀಸ್, ಅರೆಸೇನಾ ಸಿಬ್ಬಂದಿ ಬೆಂಗಾವಲಿನಲ್ಲಿ ಮತ ಚಲಾಯಿಸಿದ ಸಚಿವ ಅಜಯ್ ಮಿಶ್ರಾ

- Advertisement -
- Advertisement -

ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಬುಧವಾರ (ಫೆ.23) ನಡೆಯುತ್ತಿದೆ. ಈ ಹಿನ್ನೆಲೆ ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ತೇನಿ ಅವರು ನೂರಾರು ಪೊಲೀಸರು ಮತ್ತು ಅರೆಸೇನಾ ಸಿಬ್ಬಂದಿ ಜೊತೆಗೆ ಲಖಿಂಪುರದ ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದಾರೆ.

ಈ ವೇಳೆ ಕಳೆದ ವರ್ಷ ಲಖಿಂಪುರ್‌ ಖೇರಿಯಲ್ಲಿ ರೈತರ ಹತ್ಯಾಕಾಂಡ ನಡೆಸಿರುವ ಪ್ರಕರಣದ ಪ್ರಮುಖ ಆರೋಪಿ ಅಜಯ್ ಮಿಶ್ರಾ ಮಗ  ಆಶಿಶ್ ಮಿಶ್ರಾ ಕುರಿತು ಪ್ರಶ್ನಿಸಿದ ಮಾಧ್ಯಮದವರಿಗೆ ಗೆಲುವಿನ ಚಿಹ್ನೆ ತೋರಿಸಿದ್ದಾರೆ.

ಕಳೆದ ವರ್ಷ ಅಕ್ಟೋಬರ್ 3 ರಂದು ನಾಲ್ವರು ರೈತರು ಸೇರಿದಂತೆ ಎಂಟು ಜನರ ಹತ್ಯಾಕಾಂಡಕ್ಕೆ ಕಾರಣವಾದ ಉತ್ತರ ಪ್ರದೇಶದ ಲಖಿಂಪುರ್‌ ಖೇರಿ ಹಿಂಸಾಚಾರದ ಪ್ರಮುಖ ಆರೋಪಿ ಆಶಿಶ್‌ ಮಿಶ್ರಾಗೆ ಜಾಮೀನು ನೀಡಲಾಗಿದೆ. ಕಳೆದ ವಾರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಬಿಜೆಪಿ ಮೇಲೆ ಈಗಾಗಲೇ ಆಕ್ರೋಶ ವ್ಯಕ್ತಪಡಿಸಿರುವ ಲಖಿಂಪುರ್‌ ಕೇರಿ ಜನರ ಮಧ್ಯೆ ಮತಹಾಕಲು ಸಚಿವ ಸಂಪೂರ್ಣ ಪೊಲೀಸ್ ಬಂದೋಬಸ್ತ್‌ನಲ್ಲಿ ಬಂದಿದ್ದಾರೆ. ಪೊಲೀಸರು ಮತ್ತು ಅರೆಸೇನಾ ಸಿಬ್ಬಂದಿ ತಡೆಗೊಡೆ ರಚಿಸಿಕೊಂಡು ಸಚಿವರನ್ನು ಮತಗಟ್ಟೆ ಕರೆತಂದು, ವಾಪಸ್ ಕರೆದುಕೊಂಡು ಹೋಗಿದ್ದಾರೆ.

ಇದನ್ನೂ ಓದಿ: ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡ: ಆರೋಪಿ ಆಶಿಶ್‌ ಮಿಶ್ರಾ ಜಾಮೀನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಕೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರದಲ್ಲಿ ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕರಾಗಿರುವ ಅಜಯ್ ಮಿಶ್ರಾ ಅವರು ಪೂರ್ವ ಯುಪಿಯಲ್ಲಿ ಅದರಲ್ಲೂ ವಿಶೇಷವಾಗಿ ಲಖಿಂಪುರದಲ್ಲಿ ಭಾರಿ ಪ್ರಭಾವವನ್ನು ಹೊಂದಿದ್ದರು. ಆದರೆ, ತಮ್ಮ ಕೊಲೆ ಆರೋಪಿ ಮಗನ ಕುರಿತ ಮಾಧ್ಯಮಗಳ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿಲ್ಲ. ಜೊತೆಗೆ ಕಳೆದ ವರ್ಷ ಪತ್ರಕರ್ತರ ಮೇಲೆ ಹಲ್ಲೆ ನಡೆಸುವುದು ಕೂಡ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಮತಗಟ್ಟೆಗೆ ಬರಲು ತನ್ನೊಂದಿಗೆ ಇಷ್ಟೊಂದು ಭದ್ರತೆಯನ್ನು ಪಡೆದುಕೊಂಡಿರವ ಸಚಿವ ಅಜಯ್‌ ಮಿಶ್ರಾ ತೆನಿ ಅವರ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

ಕಳೆದ ವರ್ಷದ ಅಕ್ಟೋಬರ್ 3 ರಂದು ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಅವರ ಮಗ ಆಶಿಶ್ ಮಿಶ್ರಾ ತೆನಿ, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಎಸ್‌ಯುವಿ ಹರಿಸಿ ನಾಲ್ವರ ರೈತರನ್ನು ಹತ್ಯೆ ಮಾಡಿದ್ದರು. ಹತ್ಯೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಸರ್ಕಾರ ಮತ್ತು ಪೊಲೀಸ್ ಇಲಾಖೆ ಮೇಲೆ ಒತ್ತಡ ಉಂಟಾದ ಬಳಿಕ ಆಶಿಶ್ ಮಿಶ್ರಾ ತೆನಿಯನ್ನು ಬಂಧಿಸಲಾಗಿತ್ತು. ಈಗ ಜಾಮೀನು ನೀಡಲಾಗಿದೆ.

ಉತ್ತರ ಪ್ರದೇಶದಲ್ಲಿ ಇಂದು  ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. ಇನ್ನೂ ಮೂರು ಹಂತದ ಬಾಕಿಯಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ಯುಪಿ 4ನೇ ಹಂತದ ಚುನಾವಣೆ: ಲಖಿಂಪುರ್‌ಖೇರಿ ಪ್ರಾಂತ್ಯ ಬಿಜೆಪಿಗೆ ಬಿಸಿತುಪ್ಪ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...