Homeಮುಖಪುಟಯುಪಿ ಚುನಾವಣೆ: ರೈತ ಆಕ್ರೋಶದ ಜಿಲ್ಲೆ ಲಖಿಂಪುರ್‌ ಖೇರಿಯಲ್ಲಿ ಪ್ರಚಾರ ನಡೆಸಲಿರುವ ರಾಜನಾಥ್ ಸಿಂಗ್

ಯುಪಿ ಚುನಾವಣೆ: ರೈತ ಆಕ್ರೋಶದ ಜಿಲ್ಲೆ ಲಖಿಂಪುರ್‌ ಖೇರಿಯಲ್ಲಿ ಪ್ರಚಾರ ನಡೆಸಲಿರುವ ರಾಜನಾಥ್ ಸಿಂಗ್

- Advertisement -
- Advertisement -

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಬಿಜೆಪಿಯ ಸ್ಟಾರ್ ಪ್ರಚಾರಕ ಮತ್ತು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು (ಫೆಬ್ರವರಿ 2) ಲಖಿಂಪುರ್‌ ಖೇರಿ ಮತ್ತು ಪಿಲಿಭಿತ್‌ನಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಲಿದ್ದಾರೆ.

ಕಳೆದ ವರ್ಷದ ಅಕ್ಟೋಬರ್ 3 ರಂದು ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಅವರ ಮಗ ಆಶಿಶ್ ಮಿಶ್ರಾ ತೆನಿ, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಎಸ್‌ಯುವಿ ಹರಿಸಿ ನಾಲ್ವರ ರೈತರನ್ನು ಹತ್ಯೆ ಮಾಡಿದ್ದರು. ಅಂದಿನಿಂದ ಬಿಜೆಪಿ ಮತ್ತು ಇತರ ರಾಜಕೀಯ ಪಕ್ಷಗಳ ನಾಯಕರ ಮೇಲೆ ರೈತರು ಆಕ್ರೋಶಗೊಂಡಿದ್ದಾರೆ.

ರೈತ ಸಂಘಟನೆಗಳ ಒತ್ತಡಗಳ ಬಳಿಕ ರೈತ ಹತ್ಯಾಕಾಂಡ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ತೆನಿಯನ್ನು ಬಂಧಿಸಲಾಗಿದೆ. ಆದರೆ, ಸಚಿವ ಅಜಯ್ ಮಿಶ್ರಾ ತೆನಿಯನ್ನು ಸಂಪುಟ ಸಚಿವ ಸ್ಥಾನದಿಂದ ಕೈ ಬಿಡಬೇಕು ಎಂಬ ರೈತರ ಬೇಡಿಕೆಗೆ ಬಿಜೆಪಿ ಸರ್ಕಾರ ಸ್ಪಂದಿಸಿಲ್ಲ. ಇದರ ಬಗ್ಗೆ ರೈತರಲ್ಲಿ ತೀವ್ರ ಆಕ್ರೋಶವಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಯಾವ ಪಕ್ಷಕ್ಕೂ ಇಲ್ಲ ರೈತರ ಮತ, ನೋಟಾದತ್ತ ಎಲ್ಲರ ಚಿತ್ತ

ಇಂತಹ ಸಮಯದಲ್ಲಿ ರಕ್ಷಣಾ ಮುಖ್ಯಮಂತ್ರಿ ಲಖಿಂಪುರ ಖೇರಿ ಮತ್ತು ಪಿಲಿಭಿತ್ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದೇನೆ ಮತ್ತು  ಮತದಾರರೊಂದಿಗೆ ಸಂವಾದ ನಡೆಸಲಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

 

“ನಾಳೆ, ಫೆಬ್ರವರಿ 2 ರಂದು, ನಾನು ಉತ್ತರ ಪ್ರದೇಶದ ಲಖಿಂಪುರ ಖೇರಿ ಮತ್ತು ಪಿಲಿಭಿತ್‌ನಲ್ಲಿ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಮತದಾರರೊಂದಿಗೆ ಸಂವಾದ ನಡೆಸುತ್ತೇನೆ” ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಈಗಾಗಲೇ ಲಖೀಂಪುರ್‌ ಖೇರಿಯ ರೈತರು ವಿಧಾನಸಭಾ ಚುನಾವಣೆಯಲ್ಲಿ ‘ನೋಟಾ’ ಬಟನ್ ಒತ್ತಲು ಮನಸ್ಸು ಮಾಡಿದ್ದಾರೆ. ರಾಜ್ಯ ಬಿಜೆಪಿ ಮತ್ತು ಎಸ್‌ಪಿಯ ಎರಡು ದೊಡ್ಡ ಪಕ್ಷಗಳು ನಮಗೆ ದ್ರೋಹ ಬಗೆದಿವೆ ಎಂದು ಆರೋಪಿಸಿರುವ ರೈತರು, ನಾವು ಬಿಜೆಪಿಗೆ ಅಥವಾ ಎಸ್‌ಪಿಗೆ ಮತ ಹಾಕುವುದಿಲ್ಲ ಎಂದಿದ್ದಾರೆ.

ಇನ್ನು, ಪಶ್ಚಿಮ ಉತ್ತರ ಪ್ರದೇಶದ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ತೆರಳುವ ಬಿಜೆಪಿ ನಾಯಕರಿಗೆ ರೈತರು ಘೇರಾವ್ ಹಾಕಿರುವ, ಅವರನ್ನು ಪ್ರಚಾರ ಸ್ಥಳಗಳಿಂದ ವಾಪಸ್‌ ಕಳುಹಿಸಿರುವ ಘಟನೆಗಳು ವರದಿಯಾಗಿವೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ನಾಲ್ಕನೇ ಹಂತದಲ್ಲಿ ಫೆಬ್ರವರಿ 23 ರಂದು ಲಖಿಂಪುರ್ ಖೇರಿಯಲ್ಲಿ ಮತದಾನ ನಡೆಯಲಿದೆ. ಆದರೆ, ಫೆಬ್ರವರಿ 3 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.


ಇದನ್ನೂ ಓದಿ: ಲಖಿಂಪುರ್‌ ಖೇರಿ: ಬಿಜೆಪಿ ಕಾರ್ಯಕರ್ತರ ಹತ್ಯೆ- ಚಾರ್ಜ್‌ಶೀಟ್‌ನಲ್ಲಿ ರೈತರ ಹೆಸರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...