Homeಮುಖಪುಟಉತ್ತರ ಪ್ರದೇಶ ಚುನಾವಣೆ: ಜೈಲಿನಲ್ಲಿರುವ ಎಸ್‌ಪಿ ಅಭ್ಯರ್ಥಿ ಅಜಂ ಖಾನ್ ಭರ್ಜರಿ ಮುನ್ನಡೆ

ಉತ್ತರ ಪ್ರದೇಶ ಚುನಾವಣೆ: ಜೈಲಿನಲ್ಲಿರುವ ಎಸ್‌ಪಿ ಅಭ್ಯರ್ಥಿ ಅಜಂ ಖಾನ್ ಭರ್ಜರಿ ಮುನ್ನಡೆ

- Advertisement -
- Advertisement -

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮತ ಏಣಿಕೆ ನಡೆಯುತ್ತಿದ್ದು, ರಾಮ್‌ಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಮಾಜಿ ಸಚಿವ ಅಜಂ ಖಾನ್ ಮತ್ತು ಅವರ ಪುತ್ರ ಅಬ್ದುಲ್ಲಾ ತಮ್ಮ ತಮ್ಮ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಪ್ರಸ್ತುತ ಸೀತಾಪುರ ಜೈಲಿನಲ್ಲಿರುವ ಅಜಂ ಖಾನ್ ಅವರು ಯುಪಿಯ ರಾಮ್‌ಪುರ ವಿಧಾನಸಭಾ ಕ್ಷೇತ್ರದಿಂದ ಈವರೆಗೆ 41608 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಆಕಾಶ್ ಸಕ್ಸೆನಾ ವಿರುದ್ದ ಸುಮಾರು 36 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ, ಆರೆಸ್ಸೆಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ ಹಿರಿಯ ನಾಯಕ ಮತ್ತು ಸಂಸದ ಅಜಂ ಖಾನ್‌ಗೆ ಅಲಹಾಬಾದ್ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಆದರೂ ಅವರ ವಿರುದ್ಧ ದಾಖಲಾಗಿರುವ ಇನ್ನೆರಡು ಪ್ರಕರಣಗಳ ವಿಚಾರಣೆ ಬಾಕಿಯರುವ ಕಾರಣ ಅವರು ಜೈಲಿನಲ್ಲಿಯೇ ಇರಲಿದ್ದಾರೆ.

ಇದನ್ನೂ ಓದಿ: ಯುಪಿ: ಹಿಂದುತ್ವದೊಂದಿಗೆ ನಮಗೆ ಸಂಬಂಧವಿಲ್ಲ ಎಂದ BJPಯ ಮೈತ್ರಿ ಪಕ್ಷ ‘ಆಪ್ನಾ ದಳ (ಎಸ್)’

ಅಜಂ ಖಾನ್ ಪುತ್ರ ಮೊಹಮ್ಮದ್ ಅಬ್ದುಲ್ಲಾ ಅಜಂ ಖಾನ್‌ ಕೂಡ ಸುವಾರ್ ಸೀಟಿನಲ್ಲಿ ಮುನ್ನಡೆಯಲ್ಲಿದ್ದಾರೆ. ಸಮೀಪದ ಅಪ್ನಾ ದಳದ ಅಭ್ಯರ್ಥಿಗಿಂತ 22 ಸಾವಿರ ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಚುನಾವಣೆಗೂ ಮುನ್ನ ಬಿಜೆಪಿ ತೊರೆದು ಎಸ್‌ಪಿ ಸೇರಿದ್ದ ಸಮಾಜವಾದಿ ಪಕ್ಷದ ಮತ್ತೊಬ್ಬ ಅಭ್ಯರ್ಥಿ ಸ್ವಾಮಿ ಪ್ರಸಾದ್ ಮೌರ್ಯ ಅವರು ಫಾಜಿಲ್ ನಗರ ಕ್ಷೇತ್ರದಲ್ಲಿ ಹಿನ್ನಡೆಯಲ್ಲಿದ್ದಾರೆ.

ಜನಸಂಖ್ಯೆಯ ದೃಷ್ಟಿಯಿಂದ, ದೇಶದ ಅತಿದೊಡ್ಡ ರಾಜ್ಯವಾಗಿರುವ ಉತ್ತರ ಪ್ರದೇಶ ಮತ್ತೊಂದು ಬಾರಿಗೆ ಬಿಜೆಪಿಗೆ ದಕ್ಕಲಿದ್ದು, ಇದುವರೆಗೆ ರಾಜ್ಯದ 403 ಸ್ಥಾನಗಳಲ್ಲಿ ಬಿಜೆಪಿ 260ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇದು ಬಹುಮತಕ್ಕೆ ಬೇಕಾದ 202 ಸ್ಥಾನಗಳಿಗಿಂತ ಹೆಚ್ಚು. ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷ 125 ಸ್ಥಾನಗಳಲ್ಲಿ ಮುಂದಿದೆ. ಬಿಎಸ್‌ಪಿ ಏಳು ಮತ್ತು ಕಾಂಗ್ರೆಸ್ ಐದು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.


ಇದನ್ನೂ ಓದಿ: Uttar Pradesh Elections Result | ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಸೋಲಿನತ್ತ | Live

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಜಾಗತಿಕ ಮಾದ್ಯಮಗಳಲ್ಲಿ ಸುದ್ದಿಯಾದ ಪ್ರಧಾನಿಯ ದ್ವೇಷ ಭಾಷಣ: ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಟೀಕೆಗೆ ಗುರಿಯಾದ...

0
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜಸ್ಥಾನದ ಬನ್ಸ್ವಾರಾದಲ್ಲಿ ಮುಸ್ಲಿಮರ ವಿರುದ್ಧ ಮಾಡಿದ್ದ ದ್ವೇಷ ಭಾಷಣ ಜಾಗತಿಕ ಮಾದ್ಯಮಗಳಲ್ಲಿ ಭಾರೀ ಸುದ್ದಿಯಾಗಿದ್ದು, ಮೋದಿ ಮತ್ತೆ ಅಂತರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಗುರಿಯಾಗಿದ್ದಾರೆ. 'ಕೊಳಕು ಭಾಷಣ’ ಆದರೆ...