Homeಮುಖಪುಟಯುಪಿ ಚುನಾವಣೆ: ಬಿಜೆಪಿಯಲ್ಲಿ ರಾಜೀನಾಮೆ ಪರ್ವ, ಕಚೇರಿಗೆ ಹಾಕಲು ಬೀಗ ಕಳುಹಿಸಿದ ಸಮಾಜವಾದಿ ಪಾರ್ಟಿ

ಯುಪಿ ಚುನಾವಣೆ: ಬಿಜೆಪಿಯಲ್ಲಿ ರಾಜೀನಾಮೆ ಪರ್ವ, ಕಚೇರಿಗೆ ಹಾಕಲು ಬೀಗ ಕಳುಹಿಸಿದ ಸಮಾಜವಾದಿ ಪಾರ್ಟಿ

- Advertisement -
- Advertisement -

ಉತ್ತರ ಪ್ರದೇಶದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಮತ್ತು ಇತರ ಮೂವರು ಬಿಜೆಪಿ ಶಾಸಕರು ಆಡಳಿತಾರೂಢ ಬಿಜೆಪಿಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಬಿಜೆಪಿ ಕೇಂದ್ರ ಕಚೇರಿಗೆ ಸಮಾಜವಾದಿ ಪಕ್ಷ ಬೀಗಗಳನ್ನು ಉಡುಗೊರೆಯಾಗಿ ಕಳುಹಿಸಿದೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣಾ ಫಲಿತಾಂಶಗಳು ಹೊರಬಂದ ನಂತರ ಲಕ್ನೋದಲ್ಲಿರುವ ಅವರ ಪಕ್ಷದ ಪ್ರಧಾನ ಕಚೇರಿಯನ್ನು ಮುಚ್ಚಲು ನೆರವಾಗುವಂತೆ ಈ ಬೀಗಗಳನ್ನು ಉಡುಗೊರೆಯಾಗಿ ನೀಡಿರುವುದಾಗಿ ಸಮಾಜವಾದಿ ಪಕ್ಷವು ಹೇಳಿಕೊಂಡಿದೆ.

ಸಮಾಜವಾದಿ ಪಕ್ಷದ ವಕ್ತಾರ ಐಪಿ ಸಿಂಗ್, ಯುಪಿ ಬಿಜೆಪಿ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಇತರ ಇಬ್ಬರು ಪಕ್ಷದ ನಾಯಕರಿಗೆ ಬೀಗವನ್ನು ಕಳುಹಿಸಿದ್ದಾರೆ.

“ಸ್ವತಂತ್ರ ದೇವ್ ಸಿಂಗ್ ಅವರಿಗೆ ಉಡುಗೊರೆಯಾಗಿ (ಯುಪಿ) ಬಿಜೆಪಿ ಪ್ರಧಾನ ಕಚೇರಿಗೆ ಬೀಗವನ್ನು ಕಳುಹಿಸಿದ್ದೇನೆ. ಮಾರ್ಚ್ 10 ರ ನಂತರ ಬೀಗ ಹಾಕಿ ಮನೆಗೆ ಹಿಂತಿರುಗಿ. ಈಗ, ರಾಜ್ಯದಲ್ಲಿ ಎಸ್‌ಪಿಯ ಬಿರುಗಾಳಿ ಬೀಸುತ್ತಿದೆ. ಬೇರೆ ಯಾವುದೇ ಅಲೆ ಇಲ್ಲ,” ಎಸ್‌ಪಿ ನಾಯಕ ಐಪಿ ಸಿಂಗ್ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: UPಯ 13 ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರಲಿದ್ದಾರೆ: NCP ಮುಖ್ಯಸ್ಥ ಶರದ್ ಪವಾರ್‌‌

ಯುಪಿ ಕಾರ್ಮಿಕ ಸಚಿವರಾಗಿದ್ದ ಸ್ವಾಮಿ ಪ್ರಸಾದ್ ಮೌರ್ಯ ಮಂಗಳವಾರ ಸಂಪುಟ ಮತ್ತು ಬಿಜೆಪಿಗೆ ರಾಜೀನಾಮೆ ನೀಡಿದ ಬೆನ್ನಿಗೆ, ರಾಜ್ಯದ ತಿಲ್ಹಾರ್ ಶಾಸಕ ರೋಷನ್ ಲಾಲ್ ವರ್ಮಾ, ಬಿಲ್ಹೌರ್ ಶಾಸಕ ಭಗವತಿ ಪ್ರಸಾದ್ ಸಾಗರ್ ಮತ್ತು ತಿಂದವಾರಿ ಶಾಸಕ ಬ್ರಜೇಶ್ ಪ್ರಜಾಪತಿ ಮೂವರು ಬಿಜೆಪಿ ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂದಿನ ತಿಂಗಳಲ್ಲಿ ಚುನಾವಣೆಗೆ ಸಜ್ಜಾಗಿರುವ ಯುಪಿ ಬಿಜೆಪಿ ಭಾರಿ ಮುಖಭಂಗ ಅನುಭವಿಸಿದೆ.

ಇನ್ನು, ಉತ್ತರ ಪ್ರದೇಶದಲ್ಲಿ ನಾವು ಸಮಾಜವಾದಿ ಪಕ್ಷ ಮತ್ತು ಇತರ ಸಣ್ಣ ಪಕ್ಷಗಳೊಂದಿಗೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇವೆ ಎಂದಿರುವ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಉತ್ತರ ಪ್ರದೇಶದ ಹದಿಮೂರು ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯು ಫೆಬ್ರವರಿ 7 ರಿಂದ ಏಳು ಹಂತಗಳಲ್ಲಿ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.


ಇದನ್ನೂ ಓದಿ: ಯುಪಿ ಬಿಜೆಪಿಗೆ ಬಿಗ್‌ ಶಾಕ್‌: ಸಚಿವರ ನಂತರ ಮತ್ತೆ ಮೂವರು ಶಾಸಕರ ರಾಜೀನಾಮೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...