Homeಮುಖಪುಟಚುನಾವಣಾ ನೀತಿ ಉಲ್ಲಂಘನೆ: ಯುಪಿಯಲ್ಲಿ ಬಿಜೆಪಿ ಶಾಸಕ ಸೇರಿ 28 ಮಂದಿ ವಿರುದ್ಧ ಎಫ್‌ಐಆರ್‌

ಚುನಾವಣಾ ನೀತಿ ಉಲ್ಲಂಘನೆ: ಯುಪಿಯಲ್ಲಿ ಬಿಜೆಪಿ ಶಾಸಕ ಸೇರಿ 28 ಮಂದಿ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಉತ್ತರ ಪ್ರದೇಶದ ಪುರ್ಖಾಜಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಪ್ರಮೋದ್ ಉತ್ವಾಲ್ ಮತ್ತು ಅವರ 27 ಬೆಂಬಲಿಗರ ವಿರುದ್ಧ ಚುನಾವಣಾ ನೀತಿ ಸಂಹಿತೆ ಮತ್ತು ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರರು ಸಲ್ಲಿಸಿದ ಎಫ್‌ಐಆರ್ ಪ್ರಕಾರ, ಶಾಸಕ ಪ್ರಮೋದ್ ಉತ್ವಾಲ್ ಅವರು ಮೇಘನಾ ಚಂದನ್ ಗ್ರಾಮದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಖಿಚಡಿ (khichdi) ವಿತರಣೆ ಮಾಡಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆ, ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಶಾಸಕ ಮತ್ತು ಅವರ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪುರ್ಖಾಜಿ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಲೋಕೇಶ್ ಸಿಂಗ್ ತಿಳಿಸಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ: ಹೋರಾಟಗಾರರು, ಸಂತ್ರಸ್ತರು ಸೇರಿ 40% ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಮಾರ್ಚ್ 7 ರ ನಡುವೆ ಏಳು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ಕೊರೊನಾ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚಾಗುತ್ತಿದ್ದಂತೆ ಐದು ರಾಜ್ಯಗಳಲ್ಲಿ ಚುನಾವಣೆ ಪ್ರಚಾರಕ್ಕಾಗಿ ನಡೆಯುವ ಚುನಾವಣಾ ರ್‍ಯಾಲಿಗಳು ಮತ್ತು ರೋಡ್‌ಶೋಗಳ ಮೇಲೆ ನಿಷೇಧ ಹೇರಲಾಗಿತ್ತು. ಇದೀಗ ಈ ನಿಷೇಧವನ್ನು ಜನವರಿ 22 ರವರೆಗೆ ವಿಸ್ತರಿಸಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ (ಜ.15) ತಿಳಿಸಿದೆ.

“ಅಭ್ಯರ್ಥಿಗಳು ಸಾಧ್ಯವಾದಷ್ಟು ಆನ್‌ಲೈನ್‌‌ ಮೂಲಕ ಪ್ರಚಾರ ನಡೆಸಬೇಕು… ಸಾರ್ವಜನಿಕ ರಸ್ತೆಗಳಲ್ಲಿ ಸಭೆಗಳು ಇರುವುದಿಲ್ಲ ಮತ್ತು ಮತ ಎಣಿಕೆಯ ನಂತರ ವಿಜಯೋತ್ಸವದ ಮೆರವಣಿಗೆ ಇರುವುದಿಲ್ಲ” ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಕಳೆದ ವಾರ ಹೇಳಿದ್ದರು.

ಉತ್ತರ ಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ ಮತ್ತು ಮಣಿಪುರದಲ್ಲಿ ಸಾಧ್ಯವಾದಷ್ಟು ಸುರಕ್ಷಿತವಾಗಿ ಚುನಾವಣೆಗಳನ್ನು ನಡೆಸುವ ಗುರಿಯನ್ನು ಹೊಂದಿರುವ ಕ್ರಮಗಳ ಭಾಗವಾಗಿ ರ್‍ಯಾಲಿಗಳು ಮತ್ತು ರೋಡ್‌ಶೋಗಳನ್ನು ನಿಷೇಧಿಸುವ ಆದೇಶವನ್ನು ಅಂಗೀಕರಿಸಲಾಗಿದೆ.


ಇದನ್ನೂ ಓದಿ: ಪಂಚರಾಜ್ಯ ಚುನಾವಣೆ: ಜನವರಿ 22 ವರೆಗೆ ರ್‍ಯಾಲಿ ಮತ್ತು ರೋಡ್‌ಶೋಗಳು ನಿಷೇಧ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...