ಹದಿಹರೆಯದ ಅಪ್ರಾಪ್ತ ಬಾಲಕಿಯ ಮೇಲೆ ಸ್ವಂತ ಅಜ್ಜ, ತಂದೆ ಮತ್ತು ಚಿಕ್ಕಪ್ಪ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಉತ್ತರ ಪ್ರದೇಶದ ಔರೆಯಾ ಜಿಲ್ಲೆಯಲ್ಲಿ ನಡೆದಿದೆ. ಅತ್ಯಾಚಾರದ ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿದ್ದು, ಮೂವರು ದುಷ್ಕರ್ಮಿಗಳನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಉತ್ತರ ಪ್ರದೇಶ
ಸಂತ್ರಸ್ತೆ ಬಾಲಕಿಯು ತನ್ನ ಸಂಬಂಧಿಯೊಬ್ಬರೊಂದಿಗೆ ತೆರಳಿ ಗುರುವಾರ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸಿದ್ದಾರೆ ಪೊಲೀಸರು ಹೇಳಿದ್ದಾರೆ. ಮೂವರು ಆರೋಪಿಗಳಾದ ತನ್ನ ಅಜ್ಜ, ತಂದೆ ಮತ್ತು ಚಿಕ್ಕಪ್ಪ ಕಳೆದ ಕೆಲವು ತಿಂಗಳುಗಳಿಂದ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಉತ್ತರ ಪ್ರದೇಶ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ಬಾಲಕಿ ತಾನು ಸುಮಾರು ಎರಡು ತಿಂಗಳ ಗರ್ಭಿಣಿಯಾಗಿದ್ದು, ವೈದ್ಯಕೀಯ ಪರೀಕ್ಷೆ ನಡೆಯುತ್ತಿದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಅತ್ಯಾಚಾರ ಸೇರಿದಂತೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ಮೂವರು ಆರೋಪಿಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯನ್ನೂ ಸಹ ಅನ್ವಯಿಸಲಾಗಿದೆ” ಎಂದು ಔರೆಯಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಲೋಕ್ ಮಿಶ್ರಾ ಹೇಳಿದ್ದಾರೆ.
ಕುಟುಂಬ ಸದಸ್ಯರು ತನ್ನ ಮೇಲೆ ಆಗ್ಗಾಗ್ಗೆ ಎಸಗುತ್ತಿದ್ದ ಕಿರುಕುಳದಿಂದಾಗಿ, ತಾನು ಮತ್ತು ತನ್ನ ತಾಯಿ ಕೆಲವು ತಿಂಗಳ ಹಿಂದೆ ಮನೆಯನ್ನು ತೊರೆದಿದ್ದಾಗಿ ಬಾಲಕಿ ಪೊಲೀಸರಿಗೆ ಹೇಳಿದ್ದಾರೆ. ಅಲ್ಲಿಂದ ತೆರಳಿದ್ದ ಅವರು ಬೇರೆ ರಾಜ್ಯಕ್ಕೆ ತೆರಳಿ ಅಲ್ಲಿಯೇ ನೆಲೆಸಿದ್ದರು ಎಂದು ಪೊಲೀಸರಿಗೆ ತಿಳಿಸಿದ್ದಾರೆ.
ಆದಾಗ್ಯೂ, ಸ್ವಲ್ಪ ಸಮಯದ ಹಿಂದೆ, ಸಂತ್ರಸ್ತೆಯ ತಂದೆ ಮತ್ತು ಚಿಕ್ಕಪ್ಪ ಅವರಿದ್ದಲ್ಲಿಗೆ ತೆರಳಿ ಇಬ್ಬರನ್ನೂ ತಮ್ಮೊಂದಿಗೆ ಕರೆತಂದರು. ಅವರನ್ನು ತಮ್ಮ ಗ್ರಾಮಕ್ಕೆ ಕರೆತಂದ ಕೆಲವೇ ದಿನಗಳಲ್ಲಿ ಬಾಲಕಿಯ ತಾಯಿ ಸಾವನ್ನಪ್ಪಿದ್ದಾರೆ, ಅವರ ಸಾವಿನ ಕಾರಣಗಳನ್ನು ಪರಿಶೀಲಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
10-12 ವರ್ಷಗಳ ಹಿಂದೆ ತನ್ನ ಪೋಷಕರಿಗೆ ಜಗಳವಾಗಿತ್ತು ಮತ್ತು ಆರೋಪಿಗಳು ತನ್ನ ತಾಯಿಯ ಮೇಲೂ ಲೈಂಗಿಕ ಶೋಷಣೆ ಮಾಡುತ್ತಿದ್ದರು ಎಂದು ಬಾಲಕಿ ಆರೋಪಿಸಿದ್ದಾರೆ. ಡಿಸೆಂಬರ್ 22 ರಂದು, ಮೂವರು ಅವರನ್ನು ಕೊಲ್ಲಲು ಸಂಚು ರೂಪಿಸಿದ್ದು, ಆದರೆ ಅವರು ದಿಬಿಯಾಪುರ ಪ್ರದೇಶದ ಹಳ್ಳಿಯೊಂದಕ್ಕೆ ತನ್ನ ಚಿಕ್ಕಮ್ಮನ ಮನೆಗೆ ಹೋಗಿ ತನ್ನ ಕಷ್ಟವನ್ನು ವಿವರಿಸಿದ್ದರು. ನಂತರ ದೂರು ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ತೀವ್ರಗೊಂಡ ಬಿಹಾರ ನಾಗರಿಕ ಸೇವಾ ಪರೀಕ್ಷೆಯ ವಿರುದ್ಧದ ಪ್ರತಿಭಟನೆ


