Homeಮುಖಪುಟಉತ್ತರ ಪ್ರದೇಶ | ತಂದೆ, ಅಜ್ಜ, ಚಿಕ್ಕಪ್ಪನಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ಉತ್ತರ ಪ್ರದೇಶ | ತಂದೆ, ಅಜ್ಜ, ಚಿಕ್ಕಪ್ಪನಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

- Advertisement -
- Advertisement -

ಹದಿಹರೆಯದ ಅಪ್ರಾಪ್ತ ಬಾಲಕಿಯ ಮೇಲೆ ಸ್ವಂತ ಅಜ್ಜ, ತಂದೆ ಮತ್ತು ಚಿಕ್ಕಪ್ಪ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಉತ್ತರ ಪ್ರದೇಶದ ಔರೆಯಾ ಜಿಲ್ಲೆಯಲ್ಲಿ ನಡೆದಿದೆ. ಅತ್ಯಾಚಾರದ ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿದ್ದು, ಮೂವರು ದುಷ್ಕರ್ಮಿಗಳನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಉತ್ತರ ಪ್ರದೇಶ

ಸಂತ್ರಸ್ತೆ ಬಾಲಕಿಯು ತನ್ನ ಸಂಬಂಧಿಯೊಬ್ಬರೊಂದಿಗೆ ತೆರಳಿ ಗುರುವಾರ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸಿದ್ದಾರೆ ಪೊಲೀಸರು ಹೇಳಿದ್ದಾರೆ. ಮೂವರು ಆರೋಪಿಗಳಾದ ತನ್ನ ಅಜ್ಜ, ತಂದೆ ಮತ್ತು ಚಿಕ್ಕಪ್ಪ ಕಳೆದ ಕೆಲವು ತಿಂಗಳುಗಳಿಂದ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಉತ್ತರ ಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಬಾಲಕಿ ತಾನು ಸುಮಾರು ಎರಡು ತಿಂಗಳ ಗರ್ಭಿಣಿಯಾಗಿದ್ದು, ವೈದ್ಯಕೀಯ ಪರೀಕ್ಷೆ ನಡೆಯುತ್ತಿದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಅತ್ಯಾಚಾರ ಸೇರಿದಂತೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ಮೂವರು ಆರೋಪಿಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯನ್ನೂ ಸಹ ಅನ್ವಯಿಸಲಾಗಿದೆ” ಎಂದು ಔರೆಯಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಲೋಕ್ ಮಿಶ್ರಾ ಹೇಳಿದ್ದಾರೆ.

ಕುಟುಂಬ ಸದಸ್ಯರು ತನ್ನ ಮೇಲೆ ಆಗ್ಗಾಗ್ಗೆ ಎಸಗುತ್ತಿದ್ದ ಕಿರುಕುಳದಿಂದಾಗಿ, ತಾನು ಮತ್ತು ತನ್ನ ತಾಯಿ ಕೆಲವು ತಿಂಗಳ ಹಿಂದೆ ಮನೆಯನ್ನು ತೊರೆದಿದ್ದಾಗಿ ಬಾಲಕಿ ಪೊಲೀಸರಿಗೆ ಹೇಳಿದ್ದಾರೆ. ಅಲ್ಲಿಂದ ತೆರಳಿದ್ದ ಅವರು ಬೇರೆ ರಾಜ್ಯಕ್ಕೆ ತೆರಳಿ ಅಲ್ಲಿಯೇ ನೆಲೆಸಿದ್ದರು ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಆದಾಗ್ಯೂ, ಸ್ವಲ್ಪ ಸಮಯದ ಹಿಂದೆ, ಸಂತ್ರಸ್ತೆಯ ತಂದೆ ಮತ್ತು ಚಿಕ್ಕಪ್ಪ ಅವರಿದ್ದಲ್ಲಿಗೆ ತೆರಳಿ ಇಬ್ಬರನ್ನೂ ತಮ್ಮೊಂದಿಗೆ ಕರೆತಂದರು. ಅವರನ್ನು ತಮ್ಮ ಗ್ರಾಮಕ್ಕೆ ಕರೆತಂದ ಕೆಲವೇ ದಿನಗಳಲ್ಲಿ ಬಾಲಕಿಯ ತಾಯಿ ಸಾವನ್ನಪ್ಪಿದ್ದಾರೆ, ಅವರ ಸಾವಿನ ಕಾರಣಗಳನ್ನು ಪರಿಶೀಲಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

10-12 ವರ್ಷಗಳ ಹಿಂದೆ ತನ್ನ ಪೋಷಕರಿಗೆ ಜಗಳವಾಗಿತ್ತು ಮತ್ತು ಆರೋಪಿಗಳು ತನ್ನ ತಾಯಿಯ ಮೇಲೂ ಲೈಂಗಿಕ ಶೋಷಣೆ ಮಾಡುತ್ತಿದ್ದರು ಎಂದು ಬಾಲಕಿ ಆರೋಪಿಸಿದ್ದಾರೆ. ಡಿಸೆಂಬರ್ 22 ರಂದು, ಮೂವರು ಅವರನ್ನು ಕೊಲ್ಲಲು ಸಂಚು ರೂಪಿಸಿದ್ದು, ಆದರೆ ಅವರು ದಿಬಿಯಾಪುರ ಪ್ರದೇಶದ ಹಳ್ಳಿಯೊಂದಕ್ಕೆ ತನ್ನ ಚಿಕ್ಕಮ್ಮನ ಮನೆಗೆ ಹೋಗಿ ತನ್ನ ಕಷ್ಟವನ್ನು ವಿವರಿಸಿದ್ದರು. ನಂತರ ದೂರು ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ತೀವ್ರಗೊಂಡ ಬಿಹಾರ ನಾಗರಿಕ ಸೇವಾ ಪರೀಕ್ಷೆಯ ವಿರುದ್ಧದ ಪ್ರತಿಭಟನೆ

ತೀವ್ರಗೊಂಡ ಬಿಹಾರ ನಾಗರಿಕ ಸೇವಾ ಪರೀಕ್ಷೆಯ ವಿರುದ್ಧದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...