Homeಮುಖಪುಟಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

- Advertisement -
- Advertisement -

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ಆರು ಮಂದಿ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕುಟುಂಬಸ್ಥರು ನೀಡಿದ ಮಾಹಿತಿಯಂತೆ, ಕಳ್ಳತನ ಪ್ರಕರಣದಲ್ಲಿ ಗೌರವ್ ಎಂಬಾತನನ್ನು ಬಂಧಿಸಲು ಸಬ್‌ಇನ್ಸ್‌ಪೆಕ್ಟರ್ ಧರ್ಮಪಾಲ್ ಸಿಂಗ್ ನೇತೃತ್ವದ ಪೊಲೀಸ್ ತಂಡ ಭಾನುವಾರ ರಾತ್ರಿ ಸುಮಾರು 11.45ಕ್ಕೆ ಲಭೌವಾ ಗ್ರಾಮದಲ್ಲಿರುವ ಆತನ ಮನೆಗೆ ತಲುಪಿತ್ತು.

ತನ್ನ ಗಂಡನನ್ನು ಕರೆದುಕೊಂಡು ಹೋಗದಂತೆ ಗೌರವ್‌ನ ಗರ್ಭಿಣಿ ಪತ್ನಿ ಅಂಜಲಿ (28) ವಿನಂತಿಸಿಕೊಂಡಾಗ, ಸಬ್‌ಇನ್ಸ್‌ಪೆಕ್ಟರ್ ಸಿಂಗ್ ಆಕೆಯ ಹೊರಟ್ಟೆಗೆ ಒದ್ದಿದ್ದರಿಂದ ಆಕೆ ಕೆಳಗೆ ಬಿದ್ದಳು ಎಂದು ಕುಟುಂಬದವರು ಆರೋಪಿಸಿದ್ದಾರೆ.

ಪೊಲೀಸರು ಗೌರವ್‌ನನ್ನು (32) ಕರೆದುಕೊಂಡು ಹೋದ ನಂತರ ಅಂಜಲಿ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿತು. ತಕ್ಷಣ ಅವರನ್ನು ಶಿಕೋಹಾಬಾದ್‌ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋಮವಾರ ಬೆಳಿಗ್ಗೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಹೆರಿಗೆಯ ನಂತರ ಅವರ ಸ್ಥಿತಿ ಮತ್ತಷ್ಟು ಗಂಭೀರಗೊಂಡಿದ್ದರಿಂದ ಅವರನ್ನು ಫಿರೋಜಾಬಾದ್‌ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಲ್ಲಿ ಪರೀಕ್ಷಿಸಿದ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು. ಅಂಜಲಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಗೌರವ್‌ನನ್ನು ಬಿಡುಗಡೆ ಮಾಡಿದ್ದಾರೆ ಎಂದು ಕುಟುಂಬದವರು ಹೇಳಿದ್ದಾರೆ.

ಆಕೆಯ ಸಾವಿನ ನಂತರ ಗ್ರಾಮಸ್ಥರು ಪೊಲೀಸ್ ಠಾಣೆಯ ಮುಂದೆ ಗಲಾಟೆ ನಡೆಸಿ, ಪೊಲೀಸರ ನಡವಳಿಕೆಯನ್ನು ಪ್ರಶ್ನಿಸಿದರು. ನವಜಾತ ಶಿಶುವಿನ ಸ್ಥಿತಿಯೂ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಗ್ರಾಕ್ಕೆ ರವಾನಿಸಲಾಗಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ನಿರ್ಲಕ್ಷ್ಯದ ಆರೋಪದ ಮೇಲೆ ಸಬ್‌ಇನ್ಸ್‌ಪೆಕ್ಟರ್‌ಗಳಾದ ಧರ್ಮಪಾಲ್ ಸಿಂಗ್, ಹೆಡ್ ಕಾನ್‌ಸ್ಟೇಬಲ್‌ಗಳಾದ ಮೋಹನ್ ಸಿಂಗ್ ಮತ್ತು ಅರವಿಂದ್ ಕುಮಾರ್ ಹಾಗೂ ಕಾನ್‌ಸ್ಟೇಬಲ್‌ಗಳಾದ ಭವತೋಷ್ ಕುಮಾರ್ ಮತ್ತು ಕುಲದೀಪ್ ಕುಮಾರ್ ಅವರನ್ನು ಸೂಪರಿಂಟೆಂಡೆಂಟ್ ಆಫ್ ಪೊಲೀಸ್ (ಎಸ್‌ಪಿ) ಆದಿತ್ಯ ಲಾಂಗೇ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಸೋಮವಾರ ಅಮಾನತುಗೊಳಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್ (ನಗರ) ರವಿ ಶಂಕರ್ ಪ್ರಸಾದ್ ತಿಳಿಸಿದ್ದಾರೆ.

ಮಹಿಳೆಯ ಮರಣೋತ್ತರ ಪರೀಕ್ಷೆಯನ್ನು ತಡರಾತ್ರಿ ನಡೆಸಲಾಗಿದ್ದು, ಅದೇ ರಾತ್ರಿ ಅಂತಿಮ ಸಂಸ್ಕಾರ ನೆರವೇರಿಸಲಾಗಿದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಭಾರಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...