Homeದಲಿತ್ ಫೈಲ್ಸ್ಉತ್ತರಪ್ರದೇಶ: ಮಲಗುಂಡಿಗೆ ಸಿಲುಕಿ ಒಂದೇ ಕುಟುಂಬ ನಾಲ್ವರು ನಿಧನ

ಉತ್ತರಪ್ರದೇಶ: ಮಲಗುಂಡಿಗೆ ಸಿಲುಕಿ ಒಂದೇ ಕುಟುಂಬ ನಾಲ್ವರು ನಿಧನ

- Advertisement -
- Advertisement -

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ರಾಮನಗರ ಗ್ರಾಮದಲ್ಲಿ ಮಲದ ಗುಂಡಿಯೊಳಗೆ ಇಳಿದ ಕಾರಣ ವಿಷಕಾರಿ ಅನಿಲಗಳನ್ನು ಸೇವಿಸಿ ಒಂದೇ ಕುಟುಂಬದ ನಾಲ್ವರು ಭಾನುವಾರ ಸಾವನ್ನಪ್ಪಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಮೃತರನ್ನು ನಂದಕುಮಾರ್ (45), ನಿತೇಶ್ (25), ದಿನೇಶ್ (40), ಆನಂದ್ (22) ಎಂದು ಗುರುತಿಸಲಾಗಿದೆ.

ಗ್ರಾಮದಲ್ಲಿನ ಮಲದ ಗುಂಡಿಯನ್ನು ಸ್ವಚ್ಛಗೊಳಿಸಲು ನಂದಕುಮಾರ್ ಅವರನ್ನು ಕೆಲಸಕ್ಕೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಸ್ವಚ್ಛಗೊಳಿಸುವ ವೇಳೆ ಬಿದ್ದು ಒಳಗೆ ಸಿಲುಕಿಕೊಂಡರು. ಅವರ ಮಗ ನಿತೇಶ್, ತನ್ನ ತಂದೆಗೆ ಸಹಾಯ ಮುಂದಾಗಿ ಅವರೂ ಕೂಡ ಸಿಲುಕಿಕೊಂಡರು.

ಈಗಾಗಲೇ ಸಿಲುಕಿಕೊಂಡಿರುವ ಇಬ್ಬರನ್ನು ರಕ್ಷಿಸಲು ಇವರ ಸಂಬಂಧಿಕರಾದ ದಿನೇಶ್, ಆನಂದ್ ಅವರು ನೆರೆಹೊರೆಯವರಾದ ರಾಜಕುಮಾರ್ ಜೊತೆಯಲ್ಲಿ ಮುಂದಾದರು. ತಮ್ಮವರನ್ನು ಉಳಿಸಲು ಮಲದ ಗುಂಡಿಯೊಳಗೆ ಇಳಿದು ಪ್ರಜ್ಞೆ ತಪ್ಪಿ ಬಿದ್ದಿರು. ನಂತರ ಸ್ಥಳೀಯರು ಪೊಲೀಸ್ ಮತ್ತು ಜಿಲ್ಲಾ ಅಧಿಕಾರಿಗಳಿಗೆ ಕರೆ ಮಾಡಿದರು. ಸೆಪ್ಟಿಕ್ ಟ್ಯಾಂಕ್ ಅನ್ನು ಸ್ವಚ್ಛಗೊಳಿಸಲು ಇವರನ್ನು ಅಧಿಕಾರಿಶಾಹಿ ವರ್ಗ ಮಲದ ಗುಂಡಿಯೊಳಗೆ ಇಳಿಸಿತ್ತು ಎಂಬ ಆರೋಪ ಕೇಳಿಬಂದಿದೆ.

“ಐವರನ್ನು ಕೊಟ್ವಾ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು, ಅಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಚಿಂತಾಜನಕ ಸ್ಥಿತಿಯಲ್ಲಿರುವ ರಾಜ್‌ಕುಮಾರ್ ಅವರನ್ನು ಡಿಯೋರಿಯಾ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ” ಎಂದು ‘ಈಟಿವಿ ಭಾರತ್’ ವರದಿ ತಿಳಿಸಿದೆ.

ಇದನ್ನೂ ಓದಿರಿ: ಮೈಸೂರು: ಭೀಕರ ಅಪಘಾತದಲ್ಲಿ ಹತ್ತು ಮಂದಿ ದಾರುಣ ಸಾವು

ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಮೃತರ ಕುಟುಂಬಗಳಿಗೆ 4 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಅಥವಾ ಒಳಚರಂಡಿ ಒಳಗೆ ಇಳಿದು ಕೈಗಳಿಂದ ಶುಚಿಗೊಳಿಸುವುದನ್ನು ಕಾನೂನಿನ ಮೂಲಕ ನಿಷೇಧಿಸಲಾಗಿದೆ. ಮ್ಯಾನುಯಲ್ ಸ್ಕ್ಯಾವೆಂಜರ್‌ ನಿಷೇಧ ಮತ್ತು ಅವರ ಪುನರ್ವಸತಿ ಕಾಯಿದೆ, 2013ರ ಅಡಿಯಲ್ಲಿ ಇದು ಶಿಕ್ಷಾರ್ಹ ಅಪರಾಧವಾಗಿದೆ. ಆದರೂ ಭಾರತದ ಹಲವು ಭಾಗಗಳಲ್ಲಿ ಈ ಅನಿಷ್ಠ ಪದ್ಧತಿ ಮಾತ್ರ ಜೀವಂತವಾಗಿಯೇ ಇದೆ.

1993ರಿಂದ ಇಲ್ಲಿಯವರೆಗೆ ಒಳಚರಂಡಿ ಮತ್ತು ಮಲದಗುಂಡಿಗಳನ್ನು ಶುಚಿಗೊಳಿಸಲು ಹೋಗಿ 1,035 ಜನರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ತಿಳಿಸಿತ್ತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...