Homeಮುಖಪುಟದೆಹಲಿ ಮಾಲಿನ್ಯಕ್ಕೆ ಪಾಕ್ ಕಾರಣ ಎಂದ ಯುಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ

ದೆಹಲಿ ಮಾಲಿನ್ಯಕ್ಕೆ ಪಾಕ್ ಕಾರಣ ಎಂದ ಯುಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ

- Advertisement -
- Advertisement -

ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್‌ಸಿಆರ್‌‌) ಹೆಚ್ಚುತ್ತಿರುವ ಮಾಲಿನ್ಯದಲ್ಲಿ ಉತ್ತರ ಪ್ರದೇಶದ ಕೈಗಾರಿಕೆಗಳ ಪಾತ್ರವಿಲ್ಲ ಮತ್ತು ಪಾಕಿಸ್ತಾನದ ಕಲುಷಿತ ಗಾಳಿಯು ರಾಜಧಾನಿಯ ಗಾಳಿಯ ಗುಣಮಟ್ಟವನ್ನು ಹದಗೆಡಿಸುತ್ತಿದೆ ಎಂದು ಉತ್ತರ ಪ್ರದೇಶ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ‘ಹಾಗಾದರೆ ನೀವು ಪಾಕಿಸ್ತಾನದಲ್ಲಿ ಕೈಗಾರಿಕೆಗಳನ್ನು ನಿಷೇಧಿಸಲು ಬಯಸುತ್ತೀರಾ?’ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ರಂಜಿತ್ ಕುಮಾರ್ ಅವರು ಪಾಕಿಸ್ತಾನದಿಂದ ಬರುವ ಮಾಲಿನ್ಯಕಾರಕ ಗಾಳಿಯಿಂದ ದೆಹಲಿಯ ಗಾಳಿಯ ಗುಣಮಟ್ಟವು ಹದಗೆಟ್ಟಿದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು. ಎಂಟು ಗಂಟೆಗಳ ಕಾರ್ಯಾಚರಣೆಯು ಉತ್ತರ ಪ್ರದೇಶದ ಕಬ್ಬು ಮತ್ತು ಹಾಲಿನ ಉದ್ಯಮಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದು ಅವರು ಹೇಳಿದರು. ಸಿಜೆಐ ನೇತೃತ್ವದ ಪೀಠವು ವಕೀಲರನ್ನು ತರಾಟೆಗೆ ತೆಗೆದುಕೊಂಡು ಆಯೋಗದ ಮೊರೆ ಹೋಗುವಂತೆ ಮತ್ತು ಸಮಸ್ಯೆಗಳ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲು ಸೂಚಿಸಿತು.

ವಾಯು ಮಾಲಿನ್ಯವು ತೀವ್ರವಾಗಿ ದೆಹಲಿಯನ್ನು ಆವರಿಸಿದೆ. ಉಸಿರಾಟದ ತೊಂದರೆ ಹೆಚ್ಚಳವಾಗಿದೆ ಎಂದು ದೆಹಲಿಯಲ್ಲಿನ ಆಸ್ಪತ್ರೆಗಳು ವರದಿ ಮಾಡಿವೆ. ಹೆಚ್ಚುತ್ತಿರುವ ಮಾಲಿನ್ಯದ ಮಟ್ಟವನ್ನು ಎದುರಿಸಲು ಕೆಲವು ಕ್ರಮಗಳಿಗೆ ಸುಪ್ರೀಂ ಕೋರ್ಟ್ ಪೀಠವು 24 ಗಂಟೆಗಳ ಗಡುವನ್ನು ನೀಡಿದ ಒಂದು ದಿನದ ನಂತರ, ಎನ್‌ಸಿಆರ್‌ನಲ್ಲಿನ ಮಾಲಿನ್ಯ ಪರಿಸ್ಥಿತಿಯನ್ನು ಪರಿಶೀಲಿಸಲು ವಾಯು ಗುಣಮಟ್ಟ ನಿರ್ವಹಣೆಯ ಆಯೋಗವು ಕಾರ್ಯಪಡೆಯನ್ನು ರಚಿಸಿದೆ.


ಇದನ್ನೂ ಓದಿರಿ: ಎನ್‌‌ಇಪಿ: ಅವೈಜ್ಞಾನಿವಾಗಿ ಪಠ್ಯಕ್ರಮ ದಿಢೀರ್ ಬದಲು, ಮಹಾರಾಜ ವಿದ್ಯಾರ್ಥಿಗಳಿಂದ ಭಾರೀ ಪ್ರತಿಭಟನೆ


ಕಳೆದ 24 ಗಂಟೆಗಳಲ್ಲಿ ತೆಗೆದುಕೊಂಡ ಕ್ರಮಗಳನ್ನು ಆಲಿಸಿದ ನ್ಯಾಯಾಲಯವು ಆಸ್ಪತ್ರೆಗಳ ನಿರ್ಮಾಣ ಕಾರ್ಯವನ್ನು ಮುಂದುವರಿಸಲು ದೆಹಲಿ ಸರ್ಕಾರಕ್ಕೆ ಅನುಮತಿ ನೀಡಿದೆ. ದೆಹಲಿ ಮತ್ತು ಎನ್‌ಸಿಆರ್‌ನಲ್ಲಿ ವಾಯು ಮಾಲಿನ್ಯವನ್ನು ತಡೆಗಟ್ಟಲು ಐದು ಸದಸ್ಯರ ಜಾರಿ ಕಾರ್ಯಪಡೆಯನ್ನು ರಚಿಸಲಾಗಿದೆ ಎಂದು ಆಯೋಗವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಅಂತಹ ಸುಮಾರು 40 ಸ್ಕ್ವಾಡ್‌ಗಳು ಮಾಲಿನ್ಯವನ್ನು ಎದುರಿಸಲು ಸೂಚಿಸಿದ ಕ್ರಮಗಳ ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡುತ್ತವೆ ಎಂದು ಸಮಿತಿ ಹೇಳಿದೆ.

ನ್ಯಾಯಾಲಯ ಮತ್ತು ಸಮಿತಿಯು ಕಡ್ಡಾಯಗೊಳಿಸಿದ ವಿವಿಧ ಕ್ರಮಗಳ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಹದಿನೇಳು ಫ್ಲೈಯಿಂಗ್ ಸ್ಕ್ವಾಡ್‌ಗಳನ್ನು ರಚಿಸಲಾಗಿದೆ. 24 ಗಂಟೆಗಳಲ್ಲಿ ಈ ಸಂಖ್ಯೆಯನ್ನು 40ಕ್ಕೆ ಏರಿಸಲಾಗುವುದು ಎಂದು ಅಫಿಡವಿಟ್ ಹೇಳಿದೆ.

ಪರಿಸರ ಹೋರಾಟಗಾರ ಆದಿತ್ಯ ದುಬೆ ಮತ್ತು ಕಾನೂನು ವಿದ್ಯಾರ್ಥಿ ಅಮನ್ ಬಂಕಾ ಅವರು ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಉಚಿತವಾಗಿ ಹುಲ್ಲು ತೆಗೆಯುವ ಯಂತ್ರಗಳನ್ನು ಒದಗಿಸಲು ನಿರ್ದೇಶನ ನೀಡುವಂತೆ ಸುಪ್ರೀಂಕೋರ್ಟ್‌‌ನಲ್ಲಿ ಕೋರಿಕೆ ಸಲ್ಲಿಸಲಾಗಿದೆ.


ಇದನ್ನೂ ಓದಿರಿ: ವಾಯು ಮಾಲಿನ್ಯ: ಸುಪ್ರೀಂಕೋರ್ಟ್ ಛೀಮಾರಿ ಹಾಕಿದ ನಂತರ ಶಾಲೆಗಳನ್ನು ಮುಚ್ಚಲು ನಿರ್ಧರಿಸಿದ ದೆಹಲಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...