Homeಮುಖಪುಟಕಾಸ್‌ಗಂಜ್ ಮುಸ್ಲಿಂ ಯುವಕನ ಲಾಕಪ್ ಡೆತ್: ಸರ್ಕಾರದಿಂದ ವರದಿ ಕೇಳಿದ ಅಲ್ಪಸಂಖ್ಯಾತರ ಆಯೋಗ

ಕಾಸ್‌ಗಂಜ್ ಮುಸ್ಲಿಂ ಯುವಕನ ಲಾಕಪ್ ಡೆತ್: ಸರ್ಕಾರದಿಂದ ವರದಿ ಕೇಳಿದ ಅಲ್ಪಸಂಖ್ಯಾತರ ಆಯೋಗ

- Advertisement -
- Advertisement -

ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ಪೊಲೀಸ್ ಠಾಣೆಯಲ್ಲಿ ಅನುಮಾನಸ್ಪದ ರೀತಿಯಲ್ಲಿ ಮುಸ್ಲಿಂ ಯುವಕ ಸಾವನ್ನಪ್ಪಿರುವುದರ ಕುರಿತು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗವು ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಂದ ವರದಿ ಕೇಳಿದೆ.

ಸರ್ಕಾರದಿಂದ ವರದಿ ಬಂದ ನಂತರ ಆಯೋಗದಿಂದ ತಂಡವೊಂದು ಸ್ಥಳಕ್ಕೆ ಭೇಟಿ ನೀಡಿ ಜಾತಿ ಅಥವಾ ಧರ್ಮದ ಆಧಾರದ ಮೇಲೆ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದು ಆಯೋಗದ ಮುಖ್ಯಸ್ಥ ಸರ್ದಾರ್ ಇಕ್ಬಾಲ್ ಸಿಂಗ್ ಲಾಲ್ಪುರ ಹೇಳಿದ್ದಾರೆ.

“ಘಟನೆ ಕುರಿತು ಯುಪಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿಯಿಂದ ನಾವು ವರದಿ ಕೇಳಿದ್ದೇವೆ. ವರದಿ ಪಡೆದ ನಂತರ, ನಾವು ಸ್ಥಳಕ್ಕೆ ಭೇಟಿ ನೀಡುತ್ತೇವೆ. ಒಬ್ಬ ವ್ಯಕ್ತಿಯ ಜಾತಿ ಮತ್ತು ಧರ್ಮದ ಆಧಾರದ ಮೇಲೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ” ಎಂದಿದ್ದಾರೆ ಎಂದು ಆಯೋಗದ ಮುಖ್ಯಸ್ಥರನ್ನು ಸುದ್ದಿ ಸಂಸ್ಥೆ ANI ಉಲ್ಲೇಖಿಸಿದೆ.

ಇದನ್ನೂ ಓದಿ: ಕನ್ಯಾಕುಮಾರಿಯಲ್ಲಿ ದಲಿತ ಯುವಕನ ಅನುಮಾನಸ್ಪದ ಸಾವು: ಮರ್ಯಾದೆಗೇಡು ಹತ್ಯೆ ಆರೋಪ

ಯುವಕ ಅಲ್ತಾಫ್‌ನ ವಿರುದ್ಧ ಅಪ್ರಾಪ್ತ ಹಿಂದೂ ಬಾಲಕಿಯನ್ನು ಅಪಹರಿಸಿದ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ತಾಫ್‌ರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. 22 ವರ್ಷದ ಯುವಕ ನವೆಂಬರ್ 8 ರಂದು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು. ಯುವಕ ಆತ್ಮಹತ್ಯೆ  ಮಾಡಿಕೊಂಡು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದರು. ಆದರೆ, ಪೊಲೀಸರು ನಮ್ಮ ಮಗನನ್ನು ಕೊಲೆ ಮಾಡಿದ್ದಾರೆ. ಕರ್ತವ್ಯ ನಿರತ ಸಿಬ್ಬಂದಿಯೇ ಆತನನ್ನು ಕೊಂದಿದ್ದಾರೆ ಎಂದು ಮೃತನ ಕುಟುಂಬ ಆರೋಪಿಸಿದೆ.

ಪೊಲೀಸ್ ಲಾಕಪ್‌ನ ವಾಶ್‌ರೂಮ್‌ನಲ್ಲಿ ಯುವಕ ತನ್ನ ಜಾಕೆಟ್ ಹುಡ್‌ನ ದಾರವನ್ನು ಬಳಸಿ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಘಟನೆಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಲ್ಲಿ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಲಾಕಪ್ ಡೆತ್‌ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ, ಅಖಿಲೇಶ್ ಯಾದವ್ ಸೇರಿದಂತೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ “ಉತ್ತರ ಪ್ರದೇಶದಲ್ಲಿ ಮಾನವ ಹಕ್ಕುಗಳು ಉಳಿದಿವೆಯೇ?” ಎಂದು ಟ್ವೀಟ್‌ ಮಾಡಿದ್ದರು.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಘಟನೆಯನ್ನು ಖಂಡಿಸಿದ್ದು, “ಕಾಸ್‌ಗಂಜ್‌ನಲ್ಲಿ ಅಲ್ತಾಫ್, ಆಗ್ರಾದಲ್ಲಿ ಅರುಣ್ ವಾಲ್ಮೀಕಿ, ಸುಲ್ತಾನ್‌ಪುರದಲ್ಲಿ ರಾಜೇಶ್ ಕೋರಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿರುವ ಘಟನೆಗಳಿಂದ ರಕ್ಷಕರು ಭಕ್ಷಕರಾಗಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಪೊಲೀಸ್ ಕಸ್ಟಡಿ ಸಾವುಗಳಲ್ಲಿ ಯುಪಿ ದೇಶದಲ್ಲಿ ಅಗ್ರಸ್ಥಾನದಲ್ಲಿದೆ. ಕಾನೂನು ಸುವ್ಯವಸ್ಥೆ ಬಿಜೆಪಿ ಆಡಳಿತದಲ್ಲಿ ಸಂಪೂರ್ಣ ಅಸ್ತವ್ಯಸ್ತವಾಗಿದೆ, ಇಲ್ಲಿ ಯಾರೂ ಸುರಕ್ಷಿತವಾಗಿಲ್ಲ” ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದರು.


ಇದನ್ನೂ ಓದಿ: ಲಾಕಪ್ ಡೆತ್: ’ಉತ್ತರ ಪ್ರದೇಶದಲ್ಲಿ ಮಾನವ ಹಕ್ಕುಗಳು ಉಳಿದಿವೆಯೇ?’- ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಶಶಿಕುಮಾರ್‌ಗೆ ಕೊಕ್; ಚೇತನ್ ಸಿಂಗ್ ರಾಥೋಡ್‌ಗೆ ತನಿಖೆಯ ಹೊಣೆ

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಎಸ್‌ಐಟಿ ಮುಖ್ಯಸ್ಥರಾಗಿದ್ದ ಐಜಿಪಿ ಎನ್. ಶಶಿಕುಮಾರ್...

ಇಸ್ರೇಲ್ ಚುನಾವಣೆ: ನೆತನ್ಯಾಹು, ಐಸೆನ್‌ಕೋಟ್ ಬಣಗಳಿಗೆ ಬಹುಮತದ ಕೊರತೆ; ಸರ್ಕಾರ ರಚನೆಯಲ್ಲಿ ಅರಬ್ ಪಕ್ಷಗಳೇ ನಿರ್ಣಾಯಕ!

ಇಸ್ರೇಲ್‌ನ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಆಡಳಿತಾರೂಢ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಮಾಜಿ ಸೇನಾ ಮುಖ್ಯಸ್ಥ ಗಡಿ ಐಸೆನ್‌ಕೋಟ್ ನೇತೃತ್ವದ ವಿರೋಧ ಪಕ್ಷದ ಬಣಗಳೆರಡಕ್ಕೂ ಭಾರಿ ಸವಾಲು ತಂದೊಡ್ಡಿದೆ. 120 ಸದಸ್ಯ ಬಲದ...

ನ.1ರ ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಬೆಂಬಲ ಘೋಷಿಸಿದ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’

ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಸಲಿರುವ ಬೃಹತ್ ರ‍್ಯಾಲಿಗೆ ಪೀಪಲ್ ಅಗೆನೆಸ್ಟ್ ಎಸ್‌ಐಆರ್‌ ಬೆಂಬಲ ಘೋಷಿಸಿದೆ. ಪ್ರಜಾಪ್ರಭುತ್ವವನ್ನು ಉಳಿಸಲು, ಎಸ್‌ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ...

‘ನುಸುಳುಕೋರರನ್ನು’ ಹೊರಹಾಕಲು SIR ಎಂದಿತ್ತು ಬಿಜೆಪಿ ಮತ್ತು ಚು. ಆಯೋಗ : ಆರು ರಾಜ್ಯಗಳಲ್ಲಿ ಪತ್ತೆಯಾಗಿದ್ದು ಕೇವಲ 1,600 ವಿದೇಶಿಯರು ಮಾತ್ರ

'ನುಸುಳುಕೋರರನ್ನು' ಪತ್ತೆ ಹಚ್ಚುವುದು ಅಥವಾ 'ವಿದೇಶಿ ಅಕ್ರಮ ವಲಸಿಗರನ್ನು' ಪತ್ತೆ ಹಚ್ಚುವುದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿತ್ತು....

ಸಂತ್ರಸ್ತೆ ಮತ್ತು ಆರೋಪಿ ನಡುವಿನ ‘ಒಪ್ಪಂದ’ವನ್ನಷ್ಟೇ ಆಧರಿಸಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಪಕ್ಷಕಾರರ (ಸಂತ್ರಸ್ತೆ ಮತ್ತು ಆರೋಪಿ) ನಡುವಿನ ರಾಜಿ ಸಂಧಾನದ ಆಧಾರದ ಮೇಲೆ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದ್ದ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೇವಲ ಒಪ್ಪಂದದ ಆಧಾರದ ಮೇಲೆ ಗಂಭೀರ ಅಪರಾಧಗಳನ್ನು...

DELHI SIR : 2026ರ ಮತದಾರರ ಪಟ್ಟಿಯಲ್ಲಿದ್ದರೂ ಕೂಡ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸುವಂತೆ ಸೂಚಿಸಿದ್ದು ಏಕೆ? ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ, 2026ರ ಮತದಾರರ ಪಟ್ಟಿಯಲ್ಲಿದ್ದರೂ ಸಹ ಗಣತಿ ನಮೂನೆಗಳನ್ನು (enumeration forms) ಭರ್ತಿ ಮಾಡದ ಕಾರಣಕ್ಕಾಗಿ ಕರಡು ಪಟ್ಟಿಯಿಂದ ಹೆಸರನ್ನು ಕಳೆದುಕೊಂಡಿರುವ ವ್ಯಕ್ತಿಗಳು,...

ಮರ್ಯಾದೆಗೇಡು ಹತ್ಯೆ ಶಂಕೆ: ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿಯ ಸಹೋದರ ಬಂಧನ

ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನನ್ನು ಇಟ್ಟಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಮರ್ಯಾದೆಗೇಡು ಹತ್ಯೆ ಶಂಕೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಪತ್ನಿಯ ಹಿರಿಯ...

Karnataka SIR | ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಿದ ಹೋರಾಟಗಾರರು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ಗೆ ಬಹಿರಂಗ ಸವಾಲು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಹೋರಾಟಗಾರರು ತಿರಸ್ಕರಿಸಿದ್ದು, ಹೋರಾಟ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಬುಧವಾರ (ಅ.28) ಬೆಂಗಳೂರಿನ ಶಾಸಕರ ಭವನದಲ್ಲಿ...

ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ; ಪ್ರತಿಭಟನಾ ಸ್ಥಳಕ್ಕೆ ರಾಹುಲ್ ಗಾಂಧಿ ಭೇಟಿ ಸಾಧ್ಯತೆ

ಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡುವ ನಿರೀಕ್ಷೆಯಿರುವ ಬೆನ್ನಲ್ಲೇ, ವಿದ್ಯಾರ್ಥಿಗಳ ಹೋರಾಟಕ್ಕೆ ಪಕ್ಷವು ಬೆಂಬಲ ವ್ಯಕ್ತಪಡಿಸಿದೆ. ವಿದ್ಯಾರ್ಥಿ ಸಂಘವನ್ನು (ಜೆಎಂಐಎಸ್‌ಯು)...

ಎಂಎಲ್‌ಸಿ ಚುನಾವಣೆ ಸೋಲಿನ ಹಿಂದಿರುವ ರಾಜಕೀಯ – ಸಂಘಟನಾತ್ಮಕ ಕಾರಣಗಳ ಕುರಿತು ಪರಾಮರ್ಶಿಸುತ್ತೇವೆ: ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್

ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ನಡೆದ ವಿಧಾನ ಪರಿಷತ್ ಚುನಾವಣೆಯ ಸೋಲಿನ ಹಿಂದಿರುವ ರಾಜಕೀಯ ಹಾಗೂ ಸಂಘಟನಾತ್ಮಕ ಕಾರಣಗಳ ಕುರಿತು ಸಮಗ್ರ ಪರಾಮರ್ಶೆ ನಡೆಸುತ್ತೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್...