Homeಮುಖಪುಟಉತ್ತರ ಪ್ರದೇಶ: ನಿರುದ್ಯೋಗ ವಿರೋಧಿ ವಿದ್ಯಾರ್ಥಿ ಆಂದೋಲನ ಮುನ್ನಲೆಗೆ

ಉತ್ತರ ಪ್ರದೇಶ: ನಿರುದ್ಯೋಗ ವಿರೋಧಿ ವಿದ್ಯಾರ್ಥಿ ಆಂದೋಲನ ಮುನ್ನಲೆಗೆ

2022ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯನ್ನು ವಿಷಯಾಧಾರಿತ ಚರ್ಚೆಗೆ ತರುವ ನಿಟ್ಟಿನಲ್ಲಿ ನಿರುದ್ಯೋಗ ವಿರೋಧಿ ವಿದ್ಯಾರ್ಥಿ ಆಂದೋಲನ ಆರಂಭವಾಗಿದೆ.

- Advertisement -
- Advertisement -

2022ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯನ್ನು ವಿಷಯಾಧಾರಿತ ಚರ್ಚೆಗೆ ತರುವ ನಿಟ್ಟಿನಲ್ಲಿ ನಿರುದ್ಯೋಗ ವಿರೋಧಿ ವಿದ್ಯಾರ್ಥಿ ಆಂದೋಲನ ಆರಂಭವಾಗಿದೆ.

ಖಾಲಿ ಇರುವ 25 ಲಕ್ಷ ಉದ್ಯೋಗಗಳನ್ನು ಯೋಗಿ ಆದಿತ್ಯನಾಥ ಸರ್ಕಾರ ಭರ್ತಿ ಮಾಡಬೇಕು ಎಂದು ಆಗ್ರಹಿಸಿ ನಿರುದ್ಯೋಗ ವಿರೋಧಿ ವಿದ್ಯಾರ್ಥಿ ಆಂದೋಲನ ಶುಕ್ರವಾರ ಚಾಲನೆ ಪಡೆದಿದೆ.

‘ಛಾತ್ರ್ ಯುವ ರೋಜ್‌‌ಗಾರ್‌ ಅಧಿಕಾರ್‌ ಮೋರ್ಚಾ’ ಸಂಘಟನೆಯ ನೇತೃತ್ವದಲ್ಲಿ ಚಳವಳಿಗೆ ಚಾಲನೆ ನೀಡಲಾಗಿದ್ದು, ರಾಜ್ಯಾದ್ಯಂತ ಪ್ರತಿಭಟನೆಗಳನ್ನು ನಡೆಸಿ ಸರ್ಕಾರವನ್ನು ಎಚ್ಚರಿಸಲು ಪ್ರಭಾವ ಬೀರಲು ಸಂಘಟಕರು ಮುಂದಾಗಿದ್ದಾರೆ. ಲಕ್ನೋದಲ್ಲಿ ಸೆ. 24ರಂದು ‘ರೋಜ್‌ಗಾರ್‌ ಅಧಿಕಾರ್‌ ಸಮ್ಮೇಳನ’ ನಡೆದಿದೆ. ಈ ಸಮ್ಮೇಳನದಲ್ಲಿ ವಿರೋಧ ಪಕ್ಷಗಳ ಹಲವು ನಾಯಕರೂ ಪಾಲ್ಗೊಂಡಿದ್ದು, “ಘನತೆಯ ಜೊತೆಗೆ ಉದ್ಯೋಗ”, ಪ್ರತಿಯೊಬ್ಬ ಯುವಜನರಿಗೂ ಶಿಕ್ಷಣವೆಂಬುದು “ಮೂಲಭೂತ ಹಕ್ಕು” ಎಂದು ಬಿಜೆಪಿ ನೇತೃತ್ವದ ಸರ್ಕಾರ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: #NationalUnemploymentDay: ಮೋದಿ ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ- ಕಾಂಗ್ರೆಸ್

ಬಿಹಾರದ ಕಮ್ಯುನಿಸ್ಟ್‌ ಪಾರ್ಟಿ ಆಫ್‌ ಇಂಡಿಯಾದ ನಾಯಕ ಮನೋಜ್‌ ಮನ್ಜಿಲ್‌, ಸಾಮಾಜಿಕ ಚಳವಳಿಗಳನ್ನು ದಮನ ಮಾಡುವ ಉತ್ತರ ಪ್ರದೇಶದ ಸರ್ಕಾರದ ಪ್ರವೃತ್ತಿಯನ್ನು ಖಂಡಿಸಿದ್ದಾರೆ. “ದೇಶದ ಯುವಜನರ ನಿರುದ್ಯೋಗಕ್ಕೆ ಶೇ. 10ರಷ್ಟು ಕೊಡುಗೆ ಉತ್ತರ ಪ್ರದೇಶದ್ದಾಗಿದೆ. ಲಾಕ್‌ಡೌನ್‌ ಜಾರಿಯಿಂದಾಗಿ ದೊಡ್ಡ ಮಟ್ಟದ ಉದ್ಯೋಗ ನಷ್ಟ ಉಂಟಾಗಿದೆ” ಎಂದಿದ್ದಾರೆ.

ಅಖಿಲ ಭಾರತ ಮಹಿಳಾ ಕಾಂಗ್ರೆಸ್‌ ರಾಷ್ಟ್ರೀಯ ಸಂಯೋಜಕಿ ಸದಫ್‌ ಜಫಾರ್‌ ಚಳವಳಿಗೆ ಬೆಂಬಲ ವ್ಯಕ್ತಪಡಿಸಿದ್ದು, “ಯುವಜನರ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗದಿದ್ದರೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು” ಎಂದಿದ್ದಾರೆ.

ಮುಂದುವರಿದು, “ಸರ್ಕಾರ ಸಾರ್ವಜನಿಕ ಉದ್ದಿಮೆಗಳನ್ನು ಮಾರಿ ಹಣವನ್ನು ಹೊಂದಿಸಿಕೊಳ್ಳಲು ಸರ್ಕಾರ ಮುಂದಾಗಿದೆ. ಸೆಂಟ್ರಲ್‌ ವಿಸ್ತಾ ಥರದ ಅಪ್ರಯೋಜಕ ಯೋಜನೆಗಳಿಗೆ ಹಣವನ್ನು ವಿನಿಯೋಗಿಸುತ್ತಿದೆ” ಎಂದು ಕುಟುಕಿದ್ದಾರೆ.ಆಮ್‌ ಆದ್ಮಿ ಪಾರ್ಟಿಯ ಪ್ರೊ.ಡಿ.ಎನ್‌.ಎಸ್‌.ಯಾದವ್‌ ಅವರು, ಪ್ರಜೆಗಳ ಮೂಲಭೂತ ಹಕ್ಕುಗಳ ಕುರಿತು ಬೆಳಕು ಚೆಲ್ಲಿದ್ದಾರೆ. “ಜನರಿಂದ ಆಯ್ಕೆಯಾದ ಸರ್ಕಾರವನ್ನು ನಿರುದ್ಯೋಗದ ಕುರಿತು ಪ್ರಶ್ನಿಸುವುದು ದೇಶದ ಪ್ರತಿಯೊಬ್ಬ ಯುವಜನರ ಕರ್ತವ್ಯ” ಎಂದಿದ್ದಾರೆ. “ನಿರುದ್ಯೋಗ ಕುರಿತ ಅಂಕಿ-ಅಂಶಗಳನ್ನು ಸರ್ಕಾರ ಮುಚ್ಚಿಡುತ್ತಿದೆ. ಉದ್ಯೋಗ ಸರ್ವೇ ನಡೆಸುವುದನ್ನು ಕಾರ್ಮಿಕ ಸಚಿವಾಲಯ ನಿಲ್ಲಿಸಿದೆ. ದೇಶದಲ್ಲಿ ಉದ್ಯೋಗನಾಶದ ಕುರಿತು ಕುರುಹುಗಳನ್ನು ನಾಶಪಡಿಸಲು ಸರ್ಕಾರ ಮುಂದಾಗಿದೆ” ಎಂದು ಕಟುವಾಗಿ ಟೀಕಿಸಿದ್ದಾರೆ.

ಪ್ರಸಿದ್ಧ ವಿಮರ್ಶಕ ವೀರೇಂದ್ರ ಯಾದವ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ್ದು, “ನಿರುದ್ಯೋಗ ವಿರುದ್ಧದ ಚಳವಳಿ ದೇಶವನ್ನು ಕಾಪಾಡುವ ಹೋರಾಟವಾಗಿದೆ” ಎಂದು ಬಣ್ಣಿಸಿದ್ದಾರೆ.

ಮಾಜಿ ಐಎಎಸ್‌ ಅಧಿಕಾರಿ ಸೂರ್ಯ ಪ್ರತಾಪ್‌ ಮಾತನಾಡಿ, “ಈ ಚಳವಳಿ ಸರ್ಕಾರವನ್ನು ಬದಲಿಸುವುದಕ್ಕೆ ಸಂಬಂಧಿಸಿದ್ದಲ್ಲ. ಯುವಜನರ ಭವಿಷ್ಯಕ್ಕೆ ಸಂಬಂಧಿಸಿದ್ದು” ಎಂದು ಅಭಿಪ್ರಾಯಪಟ್ಟಿದ್ದಾರೆ.

ವರದಿ ಕೃಪೆ: ದಿ ವೈರ್‌

ಇದನ್ನೂ ಓದಿರಿ: ಆಗಸ್ಟ್‌ನಲ್ಲಿ 15 ಲಕ್ಷ ಭಾರತೀಯರ ಉದ್ಯೋಗ ನಷ್ಟ; ಶೇ. 8.32ಕ್ಕೇರಿದ ನಿರುದ್ಯೋಗ ಪ್ರಮಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...