Homeಮುಖಪುಟಲಾಕಪ್ ಡೆತ್: ’ಉತ್ತರ ಪ್ರದೇಶದಲ್ಲಿ ಮಾನವ ಹಕ್ಕುಗಳು ಉಳಿದಿವೆಯೇ?’- ರಾಹುಲ್ ಗಾಂಧಿ

ಲಾಕಪ್ ಡೆತ್: ’ಉತ್ತರ ಪ್ರದೇಶದಲ್ಲಿ ಮಾನವ ಹಕ್ಕುಗಳು ಉಳಿದಿವೆಯೇ?’- ರಾಹುಲ್ ಗಾಂಧಿ

- Advertisement -
- Advertisement -

ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ಪೊಲೀಸ್ ಠಾಣೆಯಲ್ಲಿ ಅನುಮಾನಸ್ಪದ ರೀತಿಯಲ್ಲಿ ಯುವಕ ಸಾವನ್ನಪ್ಪಿರುವುದನ್ನು ಖಂಡಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ, ಅಖಿಲೇಶ್ ಯಾದವ್ ಸೇರಿದಂತೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಸ್‌ಗಂಜ್‌ನಲ್ಲಿ 22 ವರ್ಷದ ಯುವಕ ನವೆಂಬರ್ 8 ರಂದು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು. ಯುವಕ ಆತ್ಮಹತ್ಯೆ  ಮಾಡಿಕೊಂಡು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದರು. ಆದರೆ, ಪೊಲೀಸರು ನಮ್ಮ ಮಗನನ್ನು ಕೊಲೆ ಮಾಡಿದ್ದಾರೆ ಎಂದು ಮೃತನ ಕುಟುಂಬ ಆರೋಪಿಸಿದೆ.’

ಯುವಕ ಅಲ್ತಾಫ್‌ನ ವಿರುದ್ಧ ಯುವತಿಯನ್ನು ಅಪಹರಿಸಿ ಬಲವಂತದ ಮದುವೆಗೆ ಸಂಬಂಧಿಸಿದಂತೆ ಕಳೆದ ವಾರ ಪ್ರಕರಣದ ದಾಖಲಾಗಿತ್ತು. ಮಂಗಳವಾರ ಬೆಳಗ್ಗೆ ಅಲ್ತಾಫ್‌ರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಅವರು ಠಾಣೆಯಲ್ಲೇ ಮೃತಪಟ್ಟಿದ್ದರು.

 ಇದನ್ನೂ ಓದಿ: ಉತ್ತರ ಪ್ರದೇಶ: ಠಾಣೆಯಲ್ಲಿ ಯುವಕನ ಅನುಮಾನಸ್ಪದ ಸಾವು, ಐವರು ಪೊಲೀಸರ ಅಮಾನತು

ಘಟನೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ “ಉತ್ತರ ಪ್ರದೇಶದಲ್ಲಿ ಮಾನವ ಹಕ್ಕುಗಳು ಉಳಿದಿವೆಯೇ?” ಎಂದು ಟ್ವೀಟ್‌ ಮಾಡಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಘಟನೆಯನ್ನು ಖಂಡಿಸಿದ್ದು, “ಕಾಸ್‌ಗಂಜ್‌ನಲ್ಲಿ ಅಲ್ತಾಫ್, ಆಗ್ರಾದಲ್ಲಿ ಅರುಣ್ ವಾಲ್ಮೀಕಿ, ಸುಲ್ತಾನ್‌ಪುರದಲ್ಲಿ ರಾಜೇಶ್ ಕೋರಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿರುವ ಘಟನೆಗಳಿಂದ ರಕ್ಷಕರು ಭಕ್ಷಕರಾಗಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಪೊಲೀಸ್ ಕಸ್ಟಡಿ ಸಾವುಗಳಲ್ಲಿ ಯುಪಿ ದೇಶದಲ್ಲಿ ಅಗ್ರಸ್ಥಾನದಲ್ಲಿದೆ. ಕಾನೂನು ಸುವ್ಯವಸ್ಥೆ ಬಿಜೆಪಿ ಆಡಳಿತದಲ್ಲಿ ಸಂಪೂರ್ಣ ಅಸ್ತವ್ಯಸ್ತವಾಗಿದೆ, ಇಲ್ಲಿ ಯಾರೂ ಸುರಕ್ಷಿತವಾಗಿಲ್ಲ” ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ಕನ್ಯಾಕುಮಾರಿಯಲ್ಲಿ ದಲಿತ ಯುವಕನ ಅನುಮಾನಸ್ಪದ ಸಾವು: ಮರ್ಯಾದೆಗೇಡು ಹತ್ಯೆ ಆರೋಪ

ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಕೂಡ ಲಾಕಪ್ ಡೆತ್ ಖಂಡಿಸಿ ಟ್ವೀಟ್ ಮಾಡಿದ್ದಾರೆ.”ಕಾಸ್‌ಗಂಜ್‌ನಲ್ಲಿ ವಿಚಾರಣೆಗೆಂದು ಕರೆತಂದಿದ್ದ ಯುವಕ ಪೊಲೀಸ್ ಠಾಣೆಯಲ್ಲಿ ಸಾವೀಗಿಡಾಗಿರುವ ಪ್ರಕರಣ ಅತ್ಯಂತ ಅನುಮಾನಾಸ್ಪದವಾಗಿದೆ. ನಿರ್ಲಕ್ಷ್ಯದ ಹೆಸರಲ್ಲಿ ಕೆಲ ಪೊಲೀಸರನ್ನು ಅಮಾನತು ಮಾಡಿರುವುದು ಕೇವಲ ನೆಪ ಮಾತ್ರ. ಬಿಜೆಪಿ ಆಡಳಿತದಲ್ಲಿ ಪೊಲೀಸರ ಮೇಲಿನ ನಂಬಿಕೆ ಮತ್ತು ನ್ಯಾಯಕ್ಕಾಗಿ ಈ ಪ್ರಕರಣದಲ್ಲಿ ನ್ಯಾಯಾಂಗ ತನಿಖೆಯಾಗಬೇಕು” ಎಂದು ಆಗ್ರಹಿಸಿದ್ದಾರೆ.

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ, “ಕಾಸ್‌ಗಂಜ್‌ನಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಮತ್ತೊಬ್ಬ ಯುವಕ ಸಾವನ್ನಪ್ಪಿರುವುದು ಅತ್ಯಂತ ದುಃಖಕರ ಮತ್ತು ನಾಚಿಕೆಗೇಡಿನ ಸಂಗತಿ. ಘಟನೆ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರಿಗೆ ಸರ್ಕಾರ ಕಠಿಣ ಶಿಕ್ಷೆ ನೀಡಬೇಕು. ಸಂತ್ರಸ್ತ ಕುಟುಂಬಕ್ಕೆ ನೆರವು ನೀಡಬೇಕು. ಲಾಕಪ್‌ ಡೆತ್ ತಡೆಯುವಲ್ಲಿ ಮತ್ತು ಪೊಲೀಸರನ್ನು ಸಾರ್ವಜನಿಕರ ರಕ್ಷಕರನ್ನಾಗಿ ಮಾಡುವಲ್ಲಿ ಯುಪಿ ಸರ್ಕಾರ ವಿಫಲವಾಗಿದೆ ಎಂದು ಸಾಬೀತುಪಡಿಸುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ” ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ಅಪ್ತಾಫ್‌ ಪೊಲೀಸ್ ಠಾಣೆಯಲ್ಲಿ ಶೌಚಾಲಯಕ್ಕೆ ಹೋಗಬೇಕು ಎಂದು ಕೇಳಿದ್ದರು. ಕೆಲವು ನಿಮಿಷಗಳಾದರೂ ಅವರು ಶೌಚಾಲಯದಿಂದ ಹಿಂತಿರುಗದಿದ್ದಾಗ, ಪೊಲೀಸರು ಒಳಗೆ ಹೋಗಿ ನೋಡಿದ್ದಾರೆ. ಅಲ್ಲಿ ಅವರು ಶವವಾಗಿ ಪತ್ತೆಯಾಗಿದ್ದಾರೆ” ಎಂದು ಇಟಾಹ್‌ನ ಪೊಲೀಸ್ ಮುಖ್ಯಸ್ಥ ರೋಹನ್ ಪ್ರಮೋದ್ ಬೋತ್ರೆ ಹೇಳಿಕೆ ನೀಡಿದ್ದರು.

ಆದರೆ, ಮೃತ ಅಲ್ತಾಫ್ ಅವರ ತಂದೆ ಚಾಂದ್ ಮಿಯಾನ್, “ನಾನು ನನ್ನ ಮಗನನ್ನು ಪೊಲೀಸರಿಗೆ ಒಪ್ಪಿಸಿದ್ದೇನೆ. ಆತನ ಸಾವಿನಲ್ಲಿ ಪೊಲೀಸರ ಕೈವಾಡವಿದೆ ಎಂಬ ಸಂಶಯವಿದೆ” ಎಂದು ಆರೋಪಿಸಿದ್ದಾರೆ. ಪ್ರಕರಣದಲ್ಲಿ ನಿರ್ಲಕ್ಷ್ಯದ ಆರೋಪದಲ್ಲಿ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಅಷ್ಟು ಚಿಕ್ಕ ಕೊಳಾಯಿಗೆ ನೇಣು ಹಾಕಿಕೊಳ್ಳಲು ಸಾಧ್ಯವೆ…? ಇದು ಪೊಲೀಸರು ಮಾಡಿರುವ ಕೊಲೆ ಎಂದು ಆರೋಪಿಸಲಾಗಿದ್ದು, #JusticeForAltaf ಹ್ಯಾಶ್‌ಟ್ಯಾಗ್ ಟ್ರೆಂಡ್ ಮಾಡಲಾಗುತ್ತಿದೆ.


ಇದನ್ನೂ ಓದಿ: ನೆರೆ ನೀರಿನಲ್ಲಿ ಫೋಟೋ ಶೂಟ್‌ ನಡೆಸಿ ನಟನೆ ಮಾಡಿದ ಅಣ್ಣಾಮಲೈ – ‘ಕೋಡಂಗಿ’ ಎಂದ ತಮಿಳರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...