Homeಮುಖಪುಟಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

- Advertisement -
- Advertisement -

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ ನಡೆದಿದೆ.

ಸತ್ರಾಣ ಪ್ರದೇಶದ ದೇವ್ಲಿ ಖೇಡಾ ಗ್ರಾಮದ ನಿವಾಸಿ ಕಯೀಮ್ ಎಂಬುವರ ಮಗ ಮೊಹಮ್ಮದ್ ಮುಂತಾಜಿರ್ ಸಂತ್ರಸ್ತ ವಿದ್ಯಾರ್ಥಿ. ಈತ ಪ್ರಸ್ತುತ ಸಹಾರನ್‌ಪುರ ಜಿಲ್ಲೆಯ ದಾರುಲ್ ಉಲೂಮ್ ದೇವ್‌ಬಂದ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.

ಖತೌಲಿ ಪೊಲೀಸ್ ಠಾಣೆಯಲ್ಲಿ ಸಲ್ಲಿಸಲಾದ ಲಿಖಿತ ದೂರಿನ ಪ್ರಕಾರ, ಈ ಘಟನೆಯು ಮೀರತ್ ಕ್ಯಾಂಟ್‌ನಿಂದ ದೇವ್‌ಬಂದ್‌ಗೆ ಹೋಗುವ ಪ್ಯಾಸೆಂಜರ್ ರೈಲಿನಲ್ಲಿ ನಡೆದಿದೆ.

ಮುಂತಾಜಿರ್ ಶನಿವಾರ ಸಂಜೆ ಮೀರತ್ ಕ್ಯಾಂಟ್‌ನಲ್ಲಿ ರೈಲು ಹತ್ತಿದ್ದನು. ಆಗಲೇ ಬೋಗಿಯಲ್ಲಿ 10-12 ಯುವಕರು ಇದ್ದರು. ಅವರು ಬಹಿರಂಗವಾಗಿ ಮದ್ಯ ಸೇವಿಸುತ್ತಿದ್ದರು ಎಂದು ಆತ ತಿಳಿಸಿದ್ದಾನೆ. (ಇದು ಭಾರತೀಯ ರೈಲ್ವೆ ಕಾಯ್ದೆ 1989 ರ ಸೆಕ್ಷನ್ 145 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ).

ದೂರಿನ ಪ್ರಕಾರ, ರೈಲು ದೌರಾಲಾ ಮತ್ತು ಸಕೌತಿ ನಿಲ್ದಾಣಗಳ ನಡುವೆ ಚಲಿಸುತ್ತಿದ್ದಾಗ, ಯುವಕರು ಮುಂತಾಜಿರ್‌ನ ಸಾಂಪ್ರದಾಯಿಕ ಉಡುಪು ಮತ್ತು ಗಡ್ಡವನ್ನು ನೋಡಿ ಆತನೊಂದಿಗೆ ದುರ್ವರ್ತನೆ ತೋರಲು ಪ್ರಾರಂಭಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಮದ್ಯದ ಮತ್ತಿನಲ್ಲಿದ್ದ ಯುವಕರು ಆತನ ಗಡ್ಡವನ್ನು ಹಿಡಿದು ಕೋಮು ನಿಂದನೆ ಮಾಡಿದ್ದಾರೆ. “ಅವರು ನನಗೆ ಬಲವಂತವಾಗಿ ಮದ್ಯ ಕುಡಿಸಲು ಯತ್ನಿಸಿದರು. ನಾನು ಪ್ರತಿರೋಧಿಸಿದಾಗ ನನ್ನ ಮೇಲೆ ಹಲ್ಲೆ ನಡೆಸಿದರು” ಎಂದು ಮುಂತಾಜಿರ್ ದೂರಿನಲ್ಲಿ ತಿಳಿಸಿದ್ದಾನೆ.

ವಿದ್ಯಾರ್ಥಿ ಸುರಕ್ಷತೆಗಾಗಿ ಮತ್ತೊಂದು ಬೋಗಿಗೆ ಹೋಗಲು ಯತ್ನಿಸಿದಾಗ, ಯುವಕರು ಆತನನ್ನು ತಡೆದು ಆತನ ಬ್ಯಾಗ್‌ ಕಸಿದುಕೊಂಡಿದ್ದಾರೆ. ನಂತರ ಇಬ್ಬರು ಆರೋಪಿಗಳು ಆತನನ್ನು ಚಲಿಸುತ್ತಿದ್ದ ರೈಲಿನ ಕಿಟಕಿಯತ್ತ ಎಳೆದು ಹೊರಗೆ ಎಸೆಯಲು ಯತ್ನಿಸಿದ್ದಾರೆ.

ಮುಂತಾಜಿರ್ ಕೂಗಾಡಿದಾಗ ಬೋಗಿಯಲ್ಲಿದ್ದ ಇತರ ಪ್ರಯಾಣಿಕರು ಮಧ್ಯಪ್ರವೇಶಿಸಿ ಆತನನ್ನು ರಕ್ಷಿಸಿದ್ದಾರೆ. ಆರೋಪಿಗಳು ಸಕೌತಿ ನಿಲ್ದಾಣದಲ್ಲಿ ಇಳಿಯುವ ಮುನ್ನ ಜೀವ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ.

ಸಂತ್ರಸ್ತ ವಿದ್ಯಾರ್ಥಿ ಮುಂದಿನ ನಿಲ್ದಾಣವಾದ ಮುಜಫರ್‌ನಗರ ಜಿಲ್ಲೆಯ ಖತೌಲಿ ನಿಲ್ದಾಣದಲ್ಲಿ ಇಳಿದು ರೈಲ್ವೆ ಪೊಲೀಸ್ (ಜಿಆರ್‌ಪಿ) ಮತ್ತು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

ದೂರು ಬಂದಿರುವುದನ್ನು ಖತೌಲಿ ಪೊಲೀಸ್ ಇನ್ಸ್‌ಪೆಕ್ಟರ್ ದಿನೇಶ್ ಬಘೇಲ್ ಖಚಿತಪಡಿಸಿದ್ದು, ಪ್ರಾಥಮಿಕ ತನಿಖೆಯ ಪ್ರಕಾರ ಖತೌಲಿ ವೃತ್ತದ ಸಕೌತಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.

“ವಿದ್ಯಾರ್ಥಿಯ ದೂರು ಸ್ವೀಕರಿಸಲಾಗಿದೆ. ನಾವು ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿದ್ದೇವೆ, ಸಕೌತಿ ಮತ್ತು ಖತೌಲಿ ನಿಲ್ದಾಣಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ ಹಾಗೂ ಆರೋಪಿಗಳನ್ನು ಗುರುತಿಸಲು ಯತ್ನಿಸುತ್ತಿದ್ದೇವೆ. ತನಿಖೆಯ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು” ಎಂದು ಬಘೇಲ್ ಹೇಳಿದ್ದಾರೆ.

ಈ ವರದಿ ತಯಾರಾಗುವವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಸಾರ್ವಜನಿಕರಿಗೆ ಗಾಯಗೊಳಿಸುವುದು, ಅಕ್ರಮ ಬಂಧನ, ಕಳವು ಮತ್ತು ಕ್ರಿಮಿನಲ್ ಬೆದರಿಕೆಗಾಗಿ ಭಾರತಿಯ ನ್ಯಾಯ ಸಂಹಿತೆಯ (BNS) ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಹಾಗೂ ರೈಲ್ವೆ ಆವರಣದಲ್ಲಿ ಮದ್ಯ ಸೇವಿಸಿದ್ದಕ್ಕಾಗಿ ರೈಲ್ವೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಕೋರರ ಉದ್ದೇಶ ಮತ್ತು ಗುರುತು ಇನ್ನೂ ತಿಳಿದುಬಂದಿಲ್ಲ.

ರೈಲಿನಲ್ಲಿ ಭದ್ರತಾ ಲೋಪ

ಸಂಜೆ ವೇಳೆ ವಿಪರೀತ ಜನಸಂದಣಿ ಇರುವ ರೈಲಾಗಿದ್ದರೂ ಬೋಗಿಯಲ್ಲಿ ಯಾವುದೇ ಜಿಆರ್‌ಪಿ ಅಥವಾ ಆರ್‌ಪಿಎಫ್ ಗಸ್ತು ಸಿಬ್ಬಂದಿ ಇರಲಿಲ್ಲ ಎಂಬ ಗಂಭೀರ ಭದ್ರತಾ ಲೋಪವನ್ನು ಸಂತ್ರಸ್ತ ಬೆಟ್ಟುಮಾಡಿದ್ದಾನೆ. ರೈಲಿನಲ್ಲಿ ಅನೇಕ ಪ್ರಯಾಣಿಕರಿದ್ದರೂ ಆರೋಪಿಗಳು ಬಹಿರಂಗವಾಗಿ ಮದ್ಯ ಸೇವಿಸುತ್ತಿದ್ದರು ಎನ್ನಲಾಗಿದೆ.

ಈ ಘಟನೆಯು ಮೀರತ್-ಮುಜಫರ್‌ನಗರ-ಸಹಾರನ್‌ಪುರ ಮಾರ್ಗದಲ್ಲಿ ಪ್ರಯಾಣಿಸುವ ಮದರಸಾ ವಿದ್ಯಾರ್ಥಿಗಳ ಭದ್ರತೆಯ ಬಗ್ಗೆ ಹೊಸ ಕಳವಳವನ್ನು ಹುಟ್ಟುಹಾಕಿದೆ. ದಾರುಲ್ ಉಲೂಮ್ ದೇವ್‌ಬಂದ್ ಅಧಿಕಾರಿಗಳು ಈ ಹಿಂದೆಯೂ ದೇವ್‌ಬಂದ್ ವಿದ್ಯಾರ್ಥಿಗಳ ಮೇಲಿನ ಇಂತಹ ದಾಳಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

ಹಿಂದೆಯೂ ಈ ಸಂಸ್ಥೆಯ ವಿದ್ಯಾರ್ಥಿಗಳು ಧಾರ್ಮಿಕ ಉಡುಪಿನಲ್ಲಿ ಪ್ರಯಾಣಿಸುವಾಗ ಕಿರುಕುಳಕ್ಕೆ ಒಳಗಾಗಿದ್ದಾಗಿ ವರದಿ ಮಾಡಿದ್ದರು. ಹೀಗಾಗಿ ರೈಲು ಪ್ರಯಾಣದ ಸಮಯದಲ್ಲಿ ಎಚ್ಚರಿಕೆಯಿಂದ ಇರುವಂತೆ ಸಂಸ್ಥೆಯ ಆಡಳಿತ ಮಂಡಳಿಯು ವಿದ್ಯಾರ್ಥಿಗಳಿಗೆ ಸಲಹೆ ನೀಡಿತ್ತು.

ಹಲ್ಲೆಯ ಸುದ್ದಿ ಹರಡುತ್ತಿದ್ದಂತೆ, ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತಿಹಾದುಲ್ ಮುಸ್ಲಿಮೀನ್ (AIMIM) ಜಿಲ್ಲಾಧ್ಯಕ್ಷ ಇಮ್ರಾನ್ ಖಾಸಿಮಿ ತಮ್ಮ ಬೆಂಬಲಿಗರೊಂದಿಗೆ ಖತೌಲಿ ನಿಲ್ದಾಣಕ್ಕೆ ಆಗಮಿಸಿ, ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಮತ್ತು ರೈಲುಗಳಲ್ಲಿ ಭದ್ರತೆಯನ್ನು ಹೆಚ್ಚಿಸುವಂತೆ ಆಗ್ರಹಿಸಿದರು. ಗಸ್ತು ಹೆಚ್ಚಿಸುವಂತೆ ಮುಜಫರ್‌ನಗರ ಜಿಆರ್‌ಪಿ ಘಟಕಕ್ಕೆ ಸೂಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...

Karnataka SIR : ಇಂದು ಕರಡು ಪಟ್ಟಿ ಪ್ರಕಟ; 43.80 ಲಕ್ಷ ಮತದಾರರಿಗೆ ದಾಖಲೆ ಕೇಳಿ ನೋಟಿಸ್

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಮನೆ ಮನೆ ಗಣತಿಯ (ಎನ್ಯುಮರೇಷನ್ ಫಾರಂ ಹಂತ) ಬಳಿಕ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಇಂದು (ಆ.24, ಸೋಮವಾರ) ಪ್ರಕಟಿಸಲಿದೆ....

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...