Homeಮುಖಪುಟಉತ್ತರ ಪ್ರದೇಶ: ಮುಸುಕುಧಾರಿಗಳಿಂದ ಖಾಸಗಿ ಶಾಲಾ ವ್ಯಾನ್ ಮೇಲೆ ಗುಂಡಿನ ದಾಳಿ, ಅಪಾಯದಿಂದ ಪಾರಾದ ಮಕ್ಕಳು

ಉತ್ತರ ಪ್ರದೇಶ: ಮುಸುಕುಧಾರಿಗಳಿಂದ ಖಾಸಗಿ ಶಾಲಾ ವ್ಯಾನ್ ಮೇಲೆ ಗುಂಡಿನ ದಾಳಿ, ಅಪಾಯದಿಂದ ಪಾರಾದ ಮಕ್ಕಳು

- Advertisement -
- Advertisement -

ಉತ್ತರ ಪ್ರದೇಶದ ಅಮ್ರೋಹಾದಲ್ಲಿ 28 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಶಾಲಾ ವ್ಯಾನ್ ಮೇಲೆ ಶುಕ್ರವಾರ ಅಪರಿಚಿತ ಮುಸುಕುಧಾರಿಗಳು ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳ ಮಾಹಿತಿ ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಎಸ್ ಆರ್ ಎಸ್ ಇಂಟರ್ ನ್ಯಾಷನಲ್ ಶಾಲಾ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ವ್ಯಾನ್ ಮೇಲೆ ಮುಸುಕುಧಾರಿಗಳು ಮನಬಂದಂತೆ ಗುಂಡು ಹಾರಿಸಿದ ಘಟನೆ ಗಜ್ರೌಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮೂವರು ಶಂಕಿತರ ವಿರುದ್ಧ ಗಜರೌಲಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಒಬ್ಬರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಶ್ವೇತಾಭ್ ಭಾಸ್ಕರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. “ವ್ಯಾನ್ ಚಾಲಕನೇ ದಾಳಿಕೋರರ ಗುರಿಯಾಗಿದ್ದಾನೆ ಎಂದು ನಂಬಲಾಗಿದೆ. ಅದೃಷ್ಟವಶಾತ್ ಚಾಲಕ ಮತ್ತು ಶಾಲಾ ಮಕ್ಕಳು ಸುರಕ್ಷಿತವಾಗಿದ್ದಾರೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಮ್ರೋಹಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕುನ್ವರ್ ಅನುಪಮ್ ಸಿಂಗ್ ಅವರು ಬೆಳಿಗ್ಗೆ ಶಾಲೆಗೆ ಹೋಗುತ್ತಿದ್ದಾಗ ಇಬ್ಬರು-ಮೂರು ವ್ಯಕ್ತಿಗಳು ಬಸ್‌ಗೆ ಹೊಂಚು ಹಾಕಿದ್ದಾರೆ ಎಂದು ಹೇಳಿದ್ದಾರೆ. ಅವರು ಮೊದಲು ಚಾಲಕನ ಕಿಟಕಿಯ ಕೆಳಗೆ ಗುಂಡು ಹಾರಿಸಲು ಪ್ರಾರಂಭಿಸಿದ್ದು, ಚಾಲಕನ್ನೇ ಗುರಿಯಾಗಿಸಿಕೊಂಡಿದ್ದಾರೆ ಎಂದರು.

ನಾಲ್ಕು ದಿನಗಳ ಹಿಂದೆ ಸ್ಕೂಟಿಯೊಂದು ಬಸ್ಸಿನ ಬದಿಗೆ ಢಿಕ್ಕಿ ಹೊಡೆದು ವ್ಯಾನ್ ಚಾಲಕ ಮತ್ತು ಸ್ಕೂಟಿ ಮಾಲೀಕರ ನಡುವೆ ಜಗಳಕ್ಕೆ ಕಾರಣವಾಗಿ ನಾಲ್ಕು ದಿನಗಳ ಹಿಂದೆ ನಡೆದ ಜಗಳದಿಂದಾಗಿ ಬೈಕ್‌ನಲ್ಲಿ ಬಂದ ವ್ಯಕ್ತಿಗಳು ತನ್ನನ್ನು ಟಾರ್ಗೆಟ್ ಮಾಡಿರಬಹುದು ಎಂದು ಚಾಲಕ ಆರೋಪಿಸಿದ್ದಾರೆ.

ಚಾಲಕನ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಮತ್ತು ಪೊಲೀಸರು ಹಿಂದಿನ ಅಪಘಾತದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ, ಇದು ಗುಂಡಿನ ದಾಳಿಗೆ ಕಾರಣವಾಗಬಹುದು ಎಂದು ಸಿಂಗ್ ತಿಳಿಸಿದರು.

ಮುಸುಕುಧಾರಿಗಳು ಗುಂಡು ಹಾರಿಸುವುದನ್ನು ಮುಂದುವರೆಸಿದ್ದರಿಂದ ಭಯಭೀತರಾದ ಶಾಲಾ ಮಕ್ಕಳು ತಮ್ಮ ಸೀಟಿನ ಕೆಳಗೆ ಅಡಗಿಕೊಂಡು ಸಹಾಯಕ್ಕಾಗಿ ಕೂಗಿದರು. ವ್ಯಾನ್ ಚಾಲಕ ತಕ್ಷಣ ಕ್ರಮ ಕೈಗೊಂಡು ಶಾಲಾ ಆಡಳಿತ ಮಂಡಳಿಗೆ ತಿಳಿಸುವ ಮೊದಲು ವಾಹನವನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸುವಲ್ಲಿ ಯಶಸ್ವಿಯಾಗಿದ್ದಾನೆ. ಶಾಲೆಯ ಅಧಿಕಾರಿಗಳು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಘಟನೆಯ ಬಗ್ಗೆ ವಿವರವಾದ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ; ಠಾಣೆಯ ಎಲ್ಲ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಕಡ್ಡಾಯ; ಪೊಲೀಸ್ ಮಹಾನಿರ್ದೇಶಕರಿಗೆ ಹೈಕೋರ್ಟ್ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...