Homeಕರೋನಾ ತಲ್ಲಣಕೊರೊನಾದಿಂದ ಸಾವನಪ್ಪಿದ ಉತ್ತರಪ್ರದೇಶದ ಸಚಿವೆ ಕಮಲ್ ರಾಣಿ ವರುಣ್

ಕೊರೊನಾದಿಂದ ಸಾವನಪ್ಪಿದ ಉತ್ತರಪ್ರದೇಶದ ಸಚಿವೆ ಕಮಲ್ ರಾಣಿ ವರುಣ್

ಕಮಲ್ ರಾಣಿ ದೇವಿ ಬೆಳಿಗ್ಗೆ 9: 30 ಕ್ಕೆ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಿಧನರಾದರು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -
- Advertisement -

ಕೊರೊನಾ ಸೋಂಕು ದೃಢಪಟ್ಟಿದ್ದ ಉತ್ತರ ಪ್ರದೇಶದ ಸಚಿವೆ ಕಮಲ್ ರಾಣಿ ವರುಣ್ ಅವರು ಇಂದು ಬೆಳಿಗ್ಗೆ ಲಕ್ನೋದಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು.

ಕಮಲ್ ರಾಣಿ ದೇವಿ ಬೆಳಿಗ್ಗೆ 9:30 ಕ್ಕೆ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಿಧನರಾದರು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಕಮಲ್ ರಾಣಿ ವರುಣ್ ಅವರು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದಲ್ಲಿ ತಾಂತ್ರಿಕ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು.

ಕೊರೊನಾ ದೃಢಪಟ್ಟ ನಂತರ ಜುಲೈ 18 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಕ್ಯಾಬಿನೆಟ್ ಸಚಿವೆ ಕಮಲಾ ರಾಣಿಯನ್ನು ಎಸ್‌ಜಿಪಿಜಿಐಗೆ ದಾಖಲಿಸಲಾಯಿತು ಎಂದು ಎಸ್‌ಜಿಪಿಜಿಐ ನಿರ್ದೇಶಕ ಡಾ.ಆರ್.ಕೆ. ಲಕ್ನೋ ಹೇಳಿದರು.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಮ್ಮ ಸಂತಾಪ ಸಂದೇಶದಲ್ಲಿ, ಕಮಲ್ ರಾಣಿ ವರುಣ್ ಅವರು ತಳಮಟ್ಟದಲ್ಲಿ ಜನರಿಗೆ ಸೇವೆ ಸಲ್ಲಿಸುತ್ತಿದ್ದರು ಎಂದು ಹೇಳಿದರು.

ಕಮಲಾ ರಾಣಿ ವರುಣ್ ಅವರ ಕುಟುಂಬಕ್ಕೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಅವರು ಕೊರೊನಾ ಪಾಸಿಟಿವ್ ಆಗಿ ಎಸ್‌ಜಿಪಿಜಿಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಜನಪ್ರಿಯ ಸಾರ್ವಜನಿಕ ನಾಯಕಿ ಮತ್ತು ಸಮಾಜ ಸೇವಕರಾಗಿದ್ದರು. ಅವರು ಸಂಪುಟದ ಭಾಗವಾಗಿದ್ದಾಗ ಸಮರ್ಥವಾಗಿ ಕೆಲಸ ಮಾಡಿದರು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಅವರ ಸಾವಿನ ಹಿನ್ನೆಲೆಯಲ್ಲಿ ರಾಮ ಮಂದಿರದ ನಿರ್ಮಾಣಕ್ಕಾಗಿ ಶಿಲಾನ್ಯಾಸ ಸಮಾರಂಭದ ಸಿದ್ಧತೆಗಳ ಮೇಲ್ವಿಚಾರಣೆಗಾಗಿ ಅಯೋಧ್ಯೆಯ ಭೇಟಿಯನ್ನು ಮುಖ್ಯಮಂತ್ರಿ ರದ್ದುಪಡಿಸಿದ್ದಾರೆ.

ಕಮಲ್ ರಾಣಿ ವರುಣ್ ಅವರ ಕುಟುಂಬಕ್ಕೆ ಉತ್ತರ ಪ್ರದೇಶದ ರಾಜ್ಯಪಾಲ ಆನಂದಿಬೆನ್ ಪಟೇಲ್ ಸಂತಾಪ ಸೂಚಿಸಿದ್ದಾರೆ. ಕಮಲ್ ರಾಣಿಯ ಹಠಾತ್ ಸಾವು ಆಘಾತಕಾರಿ. 11 ಮತ್ತು 12 ನೇ ಲೋಕಸಭೆಯಲ್ಲಿ ಅವರು ಸಂಸತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ ಸಮಯದಲ್ಲಿ ಅವರು ತುಂಬಾ ಸಕ್ರಿಯರಾಗಿದ್ದರು. ಈ ದುಃಖದ ಸಮಯದಲ್ಲಿ ಅವರ ಕುಟುಂಬಕ್ಕೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದು ಆನಂದಿಬೆನ್ ಪಟೇಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಮಾಯಾವತಿ ಕೂಡ ಟ್ವಿಟರ್‌ನಲ್ಲಿ ಸಂತಾಪ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ. ಕೊರೊನಾ ಸೋಂಕಿನಿಂದ ಉತ್ತರ ಪ್ರದೇಶದ ತಾಂತ್ರಿಕ ಶಿಕ್ಷಣ ಸಚಿವ ಕಮಲ್ ರಾಣಿ ಅವರ ಸಾವಿನ ಸುದ್ದಿ ಇಂದು ತುಂಬಾ ದುಃಖಕರವಾಗಿದೆ. ಮತ್ತು ತುಂಬಾ ಆತಂಕಕಾರಿಯಾಗಿದೆ. “ಈ ದುಃಖದ ಸಾವಿನ ದೃಷ್ಟಿಯಿಂದ, ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡೂ ಎಚ್ಚೆತ್ತುಕೊಳ್ಳಬೇಕು “ಎಂದು ಬಿಎಸ್ಪಿ ಮುಖ್ಯಸ್ಥೆ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಉತ್ತರ ಪ್ರದೇಶ ರಾಜ್ಯದಲ್ಲಿ ಒಟ್ಟು 89,068 ಕೊರೊನಾ ಪ್ರಕರಣಗಳು ವರದಿಯಾಗಿದೆ.


ಇದನ್ನೂ ಓದಿ: ಕೊರೊನಾ ಸಮಯದಲ್ಲಿ ಅಯೋಧ್ಯೆ ಕಾರ್ಯಕ್ರಮ ಬೇಕೆ?; ಬಂಗಾಳಿ ವಿದ್ಯಾರ್ಥಿಗೆ ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...