Homeಚಳವಳಿಉತ್ತರ ಪ್ರದೇಶ: ಅಪ್ರಾಪ್ತ ತಂಗಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲು ಸಹಾಯ ಮಾಡಿದ ಅಕ್ಕ

ಉತ್ತರ ಪ್ರದೇಶ: ಅಪ್ರಾಪ್ತ ತಂಗಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲು ಸಹಾಯ ಮಾಡಿದ ಅಕ್ಕ

- Advertisement -
- Advertisement -

ಅಪ್ರಾಪ್ತ ತಂಗಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಗೆ ಅಕ್ಕನೇ ಸಹಾಯ ಮಾಡಿರುವ ಹೃದಯವಿದ್ರಾವಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅಕ್ಕನಿಗೆ ನಾಲ್ವರು ಯುವಕರೊಂದಿಗೆ ಇದ್ದ ಸಂಬಂಧದ ವಿಷಯವನ್ನು ತಿಳಿದು ತಂಗಿ ಆಕ್ಷೇಪ ವ್ಯಕ್ತಪಡಿಸಿದ್ದರು.

ಉತ್ತರ ಪ್ರದೇಶದ ಲಖಿಂಪುರ್‌ ಖೇರಿ ಜಿಲ್ಲೆಯಲ್ಲಿ 13 ವರ್ಷದ ಬಾಲಕಿಯ ಮೇಲೆ ಕಬ್ಬಿನ ಗದ್ದೆಯಲ್ಲಿ ನಾಲ್ವರು ಸಾಮೂಹಿಕ ಅತ್ಯಾಚಾರವೆಸಗಿ ಆಕೆಯ ಹಿರಿಯ ಸಹೋದರಿಯ ಸಮ್ಮುಖದಲ್ಲಿಯೇ ಕತ್ತು ಹಿಸುಕಿ ಕೊಂದಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ನಾಲ್ವರು, ಆಕೆಯ ಅತ್ಯಾಚಾರ, ಕೊಲೆಗೆ ಸಂಚು ಹೂಡಿದ್ದ ಅಕ್ಕ ಮತ್ತು ಅಪರಾಧದ ಸಂದರ್ಭದಲ್ಲಿ ಕಾವಲು ನಿಂತಿದ್ದ ಇಬ್ಬರು ವ್ಯಕ್ತಿಗಳು ಸೇರಿ ಪೊಲೀಸರು ಏಳು ಜನರನ್ನು ಬಂಧಿಸಿದ್ದಾರೆ ಎಂದು ಲಖಿಂಪುರ್‌ ಖೇರಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಸುಮನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಇಬ್ಬರು ಸಹೋದರಿಯರನ್ನು ಬೆತ್ತಲುಗೊಳಿಸಿ ಹಲ್ಲೆ?

ಬಂಧಿತ ಎಲ್ಲಾ ಆರೋಪಿಗಳು 18 ರಿಂದ 19 ವರ್ಷದೊಳಗಿನವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಾಲ್ವರು ಯುವಕರೊಂದಿಗೆ ಅಕ್ಕನ ಅಕ್ರಮ ಸಂಬಂಧವಿರುವುದನ್ನು ತಿಳಿದ ಕಿರಿಯ ತಂಗಿ, ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಇಬ್ಬರು ನಡುವೆ ಆಗಾಗ್ಗೆ ಜಗಳವಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ, ಶೌಚಾಲಯಕ್ಕೆ ಹೋಗಬೇಕು ಎಂದು ನೆಪವೊಡ್ಡಿ ತನ್ನೊಂದಿಗೆ ತಂಗಿಯನ್ನು ಕರೆದುಕೊಂಡು ಹತ್ತಿರದ ಕಬ್ಬಿನ ಗದ್ದೆಗೆ ಹೋಗಿದಾರೆ. ಅಲ್ಲಿ ರಂಜಿತ್ ಚೌಹಾಣ್, ಅಮರ್ ಸಿಂಗ್, ಅಂಕಿತ್ ಮತ್ತು ಸಂದೀಪ್ ಚೌಹಾಣ್ ಎಂಬ ನಾಲ್ವರು ಆರೋಪಿಗಳು ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದಾರೆ. ನಂತರ ಅಪ್ರಾಪ್ತ ಬಾಲಕಿಯನ್ನು ಆಕೆಯ ದುಪ್ಪಟ್ಟದಿಂದಲೇ ಕತ್ತು ಹಿಸುಕಿ ಹತ್ಯೆ ಮಾಡಲಾಗಿತ್ತು.

ದೀಪು ಚೌಹಾಣ್ ಮತ್ತು ಅರ್ಜುನ್ ಎಂಬ ಇಬ್ಬರು ಯುವಕರು ಕಾವಲು ನಿಂತಿದ್ದರೇ, ಅವರ ಜೊತೆಯಲ್ಲಿಯೇ ಅಪ್ರಾಪ್ತೆಯ ಅಕ್ಕ ಇದ್ದರು. ಒಂದು ದಿನದ ಬಳಿಕ ಬಾಲಕಿಯ ಮೃತದೇಹವನ್ನು ಕೆಲವು ಗ್ರಾಮಸ್ಥರು ನೋಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಬಂಧಿತ ಆರೋಪಿಗಳು ವಿಚಾರಣೆಯ ಸಮಯದಲ್ಲಿ ಅಪರಾಧದಲ್ಲಿ ಭಾಗಿಯಾಗಿರುವುದನ್ನು ಒಪ್ಪಿಕೊಂಡಿದ್ದು, ಘಟನೆಯನ್ಜು ವಿವರಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಜೂನ್ ’ಸ್ವಾಭಿಮಾನದ ತಿಂಗಳು’: ಎಲ್‌ಜಿಬಿಟಿಕ್ಯೂ ಸಮುದಾಯದ ಬಗ್ಗೆ ತಿಳಿವಳಿಕೆ ಹೆಚ್ಚಿದೆಯೇ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿಯವರ ಹಲವಾರು ಹೇಳಿಕೆಗಳಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಸೀತಾರಾಂ ಯೆಚೂರಿ

0
'ದೇಶದ ವಿವಿಧ ಭಾಗಗಳಲ್ಲಿ ತಮ್ಮ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸುವ ಹೇಳಿಕೆಗಳನ್ನು ನೀಡಿದ್ದಾರೆ' ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ...