Homeಮುಖಪುಟಉತ್ತರ ಪ್ರದೇಶ: ದಲಿತ ಕುಟುಂಬದ ನಾಲ್ವರ ಕೊಲೆ, ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಶಂಕೆ

ಉತ್ತರ ಪ್ರದೇಶ: ದಲಿತ ಕುಟುಂಬದ ನಾಲ್ವರ ಕೊಲೆ, ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಶಂಕೆ

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ 16 ವರ್ಷದ ಬಾಲಕಿ ಮತ್ತು 10 ವರ್ಷದ ಬಾಲಕ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಅವರದೆ ಮನೆಯಲ್ಲಿ ಹತ್ಯೆಗೀಡಾಗಿರುವ ಸ್ಥಿತಿಯಲ್ಲಿ ಗುರುವಾರ ಪತ್ತೆಯಾಗಿದ್ದಾರೆ.

16 ವರ್ಷದ ಬಾಲಕಿಯನ್ನು ಕೊಲೆ ಮಾಡುವ ಮುನ್ನ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದಿರುವ ಸಂಬಂಧಿಕರು, ಪಕ್ಕದ ಮನೆಯ “ಮೇಲ್ಜಾತಿ” ಎಂದು ಕರೆಯಲ್ಪಡುವ ಕುಟುಂಬದವರ ಮೇಲೆ ಕೊಲೆ ಆರೋಪ ಮಾಡಿದ್ದಾರೆ.

ಪೊಲೀಸರು 11 ಮಂದಿಯ ವಿರುದ್ಧ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಸೇರಿದಂತೆ ಹಲವು ಪ್ರಕರಣ ಎಫ್‌ಐಆರ್ ದಾಖಲಿಸಿದ್ದಾರೆ. ಕೆಲವರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪ್ರಯಾಗರಾಜ್ ಪೊಲೀಸ್ ಮುಖ್ಯಸ್ಥ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಹಂಸಲೇಖ ಹೇಳಿಕೆ ಪರವಾಗಿ ಬೆಂಗಳೂರಿನಲ್ಲಿ ಬೃಹತ್‌ ‘ಜನದನಿ’ ರ್‍ಯಾಲಿ

50 ವರ್ಷದ ವ್ಯಕ್ತಿ, 45 ವರ್ಷದ ಪತ್ನಿ ಮತ್ತು ಅವರ ಮಕ್ಕಳಾದ 16 ವರ್ಷದ ಬಾಲಕಿ ಮತ್ತು 10 ವರ್ಷದ ಬಾಲಕರ ಶವಗಳು ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಮೃತರ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿರಬಹುದು. ನಾಲ್ವರ ತಲೆಗೆ ಕೊಡಲಿಯಿಂದ ಹೊಡೆದಿರುವಂತೆ ತೋರುತ್ತಿದೆ. ದೇಹಗಳ ಮೇಲೆ ಗಂಭೀರವಾದ ಗಾಯಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ. 16 ವರ್ಷದ ಬಾಲಕಿಯ ಶವ ಮನೆಯೊಳಗಿನ ಕೊಠಡಿಯಲ್ಲಿ ಪತ್ತೆಯಾಗಿದ್ದರೆ, ಉಳಿದ ಮೂರು ಶವಗಳು ಒಟ್ಟಿಗೆ ಅಂಗಳದಲ್ಲಿ ಪತ್ತೆಯಾಗಿವೆ.

ಮೃತ ಸಂತ್ರಸ್ತ ಕುಟುಂಬ 2019 ರಿಂದ “ಮೇಲ್ಜಾತಿ” ಕುಟುಂಬದೊಂದಿಗೆ ಭೂ ವಿವಾದ ಹೊಂದಿದ್ದರು. ಇವರ ಮೇಲೆ ಸೆಪ್ಟೆಂಬರ್‌ನಲ್ಲಿ ಮೇಲ್ಜಾತಿ ಕುಟುಂಬ ಹಲ್ಲೆ ನಡೆಸಿತ್ತು. ಆದರೂ ಪೊಲೀಸರು ರಾಜಿ ಸಂಧಾನಕ್ಕೆ ಯತ್ನಿಸುತ್ತಿದ್ದರು ಎಂದು ಮೃತರ ಸಂಬಂಧಿಕರು ಆರೋಪಿಸಿದ್ದಾರೆ.

“ಪೊಲೀಸರು ಮೃತ ಸಂತ್ರಸ್ತರನ್ನು ರಾಜಿ ಮಾಡಿಕೊಳ್ಳುವಂತೆ ಒತ್ತಾಯಿಸುತ್ತಿದ್ದರು. ಸುಶೀಲ್ ಕುಮಾರ್ (ಪೊಲೀಸ್ ಕಾನ್‌ಸ್ಟೆಬಲ್) ನಮ್ಮ ಬಳಿಗೆ ಬಂದು ರಾಜಿ ಮಾಡಿಕೊಳ್ಳುವಂತೆ ಒತ್ತಡ ಹೇರುತ್ತಿದ್ದರು. ಪೊಲೀಸರು ಆರೋಪಿಗಳ ಮನೆಗಳಲ್ಲಿ ಕುಳಿತುಕೊಳ್ಳುತ್ತಿದ್ದರು. ಸ್ಥಳೀಯ ಇನ್ಸ್‌ಪೆಕ್ಟರ್ ಕೂಡ ನಮಗೆ ರಾಜಿ ಮಾಡಿಕೊಳ್ಳಲು ಹೇಳಿದರು. ಸೆಪ್ಟೆಂಬರ್ 21 ರಂದು ಮೃತ ಕುಟುಂಬದವರನ್ನು ಥಳಿಸಲಾಯಿತು. ಆದರೆ ಒಂದು ವಾರದ ನಂತರ ಪೊಲೀಸರು ಎಫ್‌ಐಆರ್ ದಾಖಲಿಸಿದರು. ಹಲ್ಲೆಗೊಳಗಾದ ಕುಟುಂಬದವರ ವಿರುದ್ಧವೂ ಕೌಂಟರ್ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಮೃತ ಕುಟುಂಬದ ಸಂಬಂಧಿಕರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

2019 ಮತ್ತು 2021ರಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಕೆಲವರ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದೇವೆ. ಈ ಪ್ರಕರಣದಲ್ಲಿ ಯಾವುದೇ ಪ್ರಗತಿಯಿಲ್ಲ ಎಂದು ಕುಟುಂಬದವರು ಆರೋಪಿಸಿದ್ದಾರೆ. ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಯಾಗರಾಜ್ ಪೊಲೀಸ್ ಮುಖ್ಯಸ್ಥ ಸರ್ವಶ್ರೇಷ್ಠ ತ್ರಿಪಾಠಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಧ್ಯಾಹ್ನ 3 ಗಂಟೆಗೆ ಪ್ರಯಾಗ್‌ರಾಜ್‌ಗೆ ಭೇಟಿ ನೀಡಲಿದ್ದು, ಮೃತರ ಕುಟುಂಬ ಸದಸ್ಯರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.


ಇದನ್ನೂ ಓದಿ: ಮಂಗಳೂರು: 8 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ, ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....