ಉತ್ತರಪ್ರದೇಶದ ಮುಜಫರ್‌ನಗರ ಜಿಲ್ಲೆಯ ಖಲಾಪರ್ ಪ್ರದೇಶದಲ್ಲಿ ಶನಿವಾರ ಬುರ್ಖಾ ಧರಿಸಿದ ಯುವತಿ ಮತ್ತು ಆಕೆಯ ಜೊತೆ ಇದ್ದ ಯುವಕನ ಮೇಲೆ ಗುಂಪೊಂದು ಥಳಿಸಿದ ಘಟನೆ ನಡೆದಿದೆ. ಈ ಘಟನೆ ಶನಿವಾರ ನಡೆದಿದ್ದರೂ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದಾಗ ಅದು ನೆಟಿಜನ್‌ಗಳು ಮತ್ತು ಅಧಿಕಾರಿಗಳ ಗಮನ ಸೆಳೆದಿದೆ.
ವೀಡಿಯೊದಲ್ಲಿ ಒಬ್ಬ ವ್ಯಕ್ತಿ ಮಹಿಳೆಯ ಮುಖದ ಮೇಲಿನ ಹಿಜಾಬ್ ಅನ್ನು ಕಿತ್ತೆಸೆಯುತ್ತಿರುವುದನ್ನು ಕಾಣಬಹುದು ಮತ್ತು ಅಲ್ಲಿದ್ದ ಇತರರು ಆಕೆಯ ಮತ್ತು ಆಕೆಯ ಜೊತೆ ಇದ್ದ ಯುವಕನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಯುವತಿ ತಾಯಿ ಮತ್ತು ಯುವಕನು ಉತ್ಕರ್ಷ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ಗೆ ಸಂಬಂಧಿಸಿದ ಉದ್ಯೋಗಿಗಳು ಎನ್ನಲಾಗಿದೆ.
ಯುವತಿಯ ತಾಯಿಯ ಬದಲು ಯುವತಿಯೇ ಯುವಕನೊಂದಿಗೆ ಹೋಗಿ ಸಾಲದ ಕಂತು ಸಂಗ್ರಹಿಸಿ ಬ್ಯಾಂಕ್‌ಗೆ ಹಿಂತಿರುಗಿಸುತ್ತಿದ್ದಾಗ ಖಲಾಪರ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.
Disrobing a young Muslim woman and swarming around her like a pack of hyenas. Disgusting, shameful visuals from Uttar Pradesh’s Muzaffarnagar.
— Rohini Singh (@rohini_sgh) April 14, 2025
ಇಬ್ಬರು ಸಾಲದ ಸಂಗ್ರಹಿಸಿಕೊಂಡು ಬ್ಯಾಂಕಿನೆಡೆಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಗುಂಪೊಂದು ಅವರನ್ನು ತಡೆದಿದೆ. ಹಲ್ಲೆಕೋರರು ಅವರನ್ನು ಎದುರುಗೊಂಡು ಯುವತಿಯ ಮುಖದ ಮುಸುಕನ್ನು ತೆಗೆಯುವಂತೆ ಒತ್ತಾಯಿಸಿದರು. ಆಕೆ ನಿರಾಕರಿಸಿದಾಗ ಅವರು ಬಲವಂತವಾಗಿ ಆಕೆಯ ಬುರ್ಖಾವನ್ನು ತೆರೆದು ಘಟನೆಯನ್ನು ತಮ್ಮ ಮೊಬೈಲ್ ಗಳಲ್ಲಿ ರೆಕಾರ್ಡ್ ಮಾಡಿದರು. ಈ ವಿಡಿಯೋ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಯುವತಿ ತನ್ನ ತಾಯಿಯ ಸೂಚನೆಯ ಮೇರೆಗೆ ಯುವಕನ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದಳು ಎಂದು ಮಾಧ್ಯಮ ವರದಿಗಳು ತಿಳಿಸಿವೆ.
ಪೊಲೀಸ್ ಗಸ್ತು ಪಡೆಯ ಸಿಬ್ಬಂದಿಗೆ ಮಾಹಿತಿ ಬಂದ ತಕ್ಷಣ, ಕೆಲವು ಪೊಲೀಸರು ಸ್ಥಳಕ್ಕೆ ತಲುಪಿ ಇಬ್ಬರನ್ನು ರಕ್ಷಿಸಿ ಪೊಲೀಸ್ ಠಾಣೆಗೆ ಕರೆದೊಯ್ದರು. ಯುವತಿಯ ತಾಯಿಯ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿ ತಿಳಿಸಿದೆ.
ಸಾರ್ವಜನಿಕ ಕಿರುಕುಳ ಮತ್ತು ವೈಯಕ್ತಿಕ ಘನತೆಯ ಉಲ್ಲಂಘನೆಯ ಈ ಕೃತ್ಯದಲ್ಲಿ ಭಾಗಿಯಾಗಿರುವ ಅಪರಾಧಿಗಳನ್ನು ಗುರುತಿಸಲು ಮತ್ತು ಬಂಧಿಸಲು ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಆದಾಗ್ಯೂ, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ.
ಮುಜಫರ್ ನಗರ ಘಟನೆಯು ವೈಯಕ್ತಿಕ ಸ್ವಾತಂತ್ರ್ಯ, ಕೋಮು ಸಾಮರಸ್ಯ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಜಾರಿ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುವ ತುರ್ತು ಅಗತ್ಯವನ್ನು ಒತ್ತಿಹೇಳಿದೆ. ಸಾರ್ವಜನಿಕ ಕಿರುಕುಳದ ಇಂತಹ ಕೃತ್ಯಗಳನ್ನು ತ್ವರಿತವಾಗಿ ನಿಭಾಯಿಸುವುದನ್ನು ಮತ್ತು ಅಪರಾಧಿಗಳನ್ನು ನ್ಯಾಯಕ್ಕೆ ಒಪ್ಪಿಸುವುದನ್ನು ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಹಾಗೆಯೇ ಇಂತಹ ಘಟನೆಗಳು ಮರುಕಳಿಸುವುದನ್ನು ತಡೆಯಲು ಮತ್ತು ಸಾಮಾಜಿಕ ಶಾಂತಿಯನ್ನು ಕಾಪಾಡಿಕೊಳ್ಳುವುದು ಅಗತ್ಯವಾಗಿರುವುದರಿಂದ ಪೊಲೀಸರು ತುರ್ತುಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಈ ಘಟನೆಯಲ್ಲಿ ಸಂತ್ರಸ್ತ ಯುವತಿ, ಯುವಕ ಮತ್ತು ಆರೋಪಿಗಳೆಲ್ಲರೂ ಒಂದೇ ಸಮುದಾಯಕ್ಕೆ ಸೇರಿದವರೆಂದು ಮಾಧ್ಯಮಗಳು ವರದಿ ಮಾಡಿವೆ.
ಕೆಲವು ತಿಂಗಳ ಹಿಂದೆ, ಉತ್ತರ ಪ್ರದೇಶದ ಸಹರಾನ್‌ಪುರ ಪಟ್ಟಣದಲ್ಲಿ ಇಬ್ಬರು ಮುಸ್ಲಿಂ ಹುಡುಗಿಯರನ್ನು ಹಿಂದೂ ಯುವಕರೊಂದಿಗೆ ಸುತ್ತಾರುತ್ತಿದ್ದಾರೆ ಎಂದು ಅನುಮಾನದಿಂದ ಗುಂಪೊಂದು ಹಲ್ಲೆ ನಡೆಸಿತ್ತು. ಯುವಕರೂ ಮುಸ್ಲಿಮರಾಗಿದ್ದರಿಂದ ಪೋಷಕರಿಗೆ ತಿಳಿಸುವುದಾಗಿ ಬೆದರಿಕೆ ಹಾಕಿ ಬಿಟ್ಟಿತ್ತು. ಇಂತಹ ಹಲವು ಅನೈತಿಕ ಪೊಲೀಸ್‌ಗಿರಿ ಪ್ರಕರಣಗಳು ದೇಶದಲ್ಲಿ ವರದಿಯಾಗುತ್ತಿವೆ.
ಹಿಂದೂ ಯುವತಿ, ಮುಸ್ಲಿಂ ಯುವಕರು ಜೊತೆಗಿದ್ದ ಕಾರಣ ಅವರ ಮೇಲೆ ಹಲ್ಲೆ ನಡೆಸಿರುವ ಹಲವು ಘಟನೆಗಳೂ ಉತ್ತರ ಪ್ರದೇಶದಲ್ಲಿ ನಡೆದಿವೆ. ಮುಸ್ಲಿಂ ಎಂಬ ಕಾರಣಕ್ಕೆ ಹಲ್ಲೆ ನಡೆಸುವುದು ದೇಶದಲ್ಲಿ ಹೆಚ್ಚಾಗುತ್ತಿದೆ. ಮುಸ್ಲಿಮರ ಮೇಲೆ ದಾಳಿ ಹೆಚ್ಚಾಗುತ್ತಿದ್ದಂತೆ ಪ್ರತಿದಾಳಿಯೂ ನಡೆದು ಕೋಮುಗಲಭೆಗೆ ದೇಶ ಸಾಕ್ಷಿಯಾಗುತ್ತಿದೆ. ಹೋಳಿ ಬಣ್ಣ ಹಾಕಿಸಿಕೊಳ್ಳಲು ನಿರಾಕರಿಸಿದ ಕಾರಣಕ್ಕೆ ಮುಸ್ಲಿಂ ಬಾಲಕನಿಗೆ ಥಳಿಸಿ ಕೊಂದಿರುವ ಘಟನೆ ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಹನುಮಾನ್ ಮಂದಿರಲ್ಲಿದ್ದ ಜೈನ ಮುನಿಗಳ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು


