Homeಮುಖಪುಟಉತ್ತರಪ್ರದೇಶ: ಮುಸ್ಲಿಂ ಯುವತಿಯ ಬುರ್ಖಾ ಬಿಚ್ಚಿ ಥಳಿತ; ವೀಡಿಯೋ ವೈರಲ್

ಉತ್ತರಪ್ರದೇಶ: ಮುಸ್ಲಿಂ ಯುವತಿಯ ಬುರ್ಖಾ ಬಿಚ್ಚಿ ಥಳಿತ; ವೀಡಿಯೋ ವೈರಲ್

- Advertisement -
- Advertisement -

ಉತ್ತರಪ್ರದೇಶದ ಮುಜಫರ್‌ನಗರ ಜಿಲ್ಲೆಯ ಖಲಾಪರ್ ಪ್ರದೇಶದಲ್ಲಿ ಶನಿವಾರ ಬುರ್ಖಾ ಧರಿಸಿದ ಯುವತಿ ಮತ್ತು ಆಕೆಯ ಜೊತೆ ಇದ್ದ ಯುವಕನ ಮೇಲೆ ಗುಂಪೊಂದು ಥಳಿಸಿದ ಘಟನೆ ನಡೆದಿದೆ. ಈ ಘಟನೆ ಶನಿವಾರ ನಡೆದಿದ್ದರೂ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದಾಗ ಅದು ನೆಟಿಜನ್‌ಗಳು ಮತ್ತು ಅಧಿಕಾರಿಗಳ ಗಮನ ಸೆಳೆದಿದೆ.

ವೀಡಿಯೊದಲ್ಲಿ ಒಬ್ಬ ವ್ಯಕ್ತಿ ಮಹಿಳೆಯ ಮುಖದ ಮೇಲಿನ ಹಿಜಾಬ್ ಅನ್ನು ಕಿತ್ತೆಸೆಯುತ್ತಿರುವುದನ್ನು ಕಾಣಬಹುದು ಮತ್ತು ಅಲ್ಲಿದ್ದ ಇತರರು ಆಕೆಯ ಮತ್ತು ಆಕೆಯ ಜೊತೆ ಇದ್ದ ಯುವಕನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಯುವತಿ ತಾಯಿ ಮತ್ತು ಯುವಕನು ಉತ್ಕರ್ಷ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ಗೆ ಸಂಬಂಧಿಸಿದ ಉದ್ಯೋಗಿಗಳು ಎನ್ನಲಾಗಿದೆ.

ಯುವತಿಯ ತಾಯಿಯ ಬದಲು ಯುವತಿಯೇ ಯುವಕನೊಂದಿಗೆ ಹೋಗಿ ಸಾಲದ ಕಂತು ಸಂಗ್ರಹಿಸಿ ಬ್ಯಾಂಕ್‌ಗೆ ಹಿಂತಿರುಗಿಸುತ್ತಿದ್ದಾಗ ಖಲಾಪರ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.

ಇಬ್ಬರು ಸಾಲದ ಸಂಗ್ರಹಿಸಿಕೊಂಡು ಬ್ಯಾಂಕಿನೆಡೆಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಗುಂಪೊಂದು ಅವರನ್ನು ತಡೆದಿದೆ. ಹಲ್ಲೆಕೋರರು ಅವರನ್ನು ಎದುರುಗೊಂಡು ಯುವತಿಯ ಮುಖದ ಮುಸುಕನ್ನು ತೆಗೆಯುವಂತೆ ಒತ್ತಾಯಿಸಿದರು. ಆಕೆ ನಿರಾಕರಿಸಿದಾಗ ಅವರು ಬಲವಂತವಾಗಿ ಆಕೆಯ ಬುರ್ಖಾವನ್ನು ತೆರೆದು ಘಟನೆಯನ್ನು ತಮ್ಮ ಮೊಬೈಲ್ ಗಳಲ್ಲಿ ರೆಕಾರ್ಡ್ ಮಾಡಿದರು. ಈ ವಿಡಿಯೋ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಯುವತಿ ತನ್ನ ತಾಯಿಯ ಸೂಚನೆಯ ಮೇರೆಗೆ ಯುವಕನ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದಳು ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಪೊಲೀಸ್ ಗಸ್ತು ಪಡೆಯ ಸಿಬ್ಬಂದಿಗೆ ಮಾಹಿತಿ ಬಂದ ತಕ್ಷಣ, ಕೆಲವು ಪೊಲೀಸರು ಸ್ಥಳಕ್ಕೆ ತಲುಪಿ ಇಬ್ಬರನ್ನು ರಕ್ಷಿಸಿ ಪೊಲೀಸ್ ಠಾಣೆಗೆ ಕರೆದೊಯ್ದರು. ಯುವತಿಯ ತಾಯಿಯ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿ ತಿಳಿಸಿದೆ.

ಸಾರ್ವಜನಿಕ ಕಿರುಕುಳ ಮತ್ತು ವೈಯಕ್ತಿಕ ಘನತೆಯ ಉಲ್ಲಂಘನೆಯ ಈ ಕೃತ್ಯದಲ್ಲಿ ಭಾಗಿಯಾಗಿರುವ ಅಪರಾಧಿಗಳನ್ನು ಗುರುತಿಸಲು ಮತ್ತು ಬಂಧಿಸಲು ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಆದಾಗ್ಯೂ, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ.

ಮುಜಫರ್ ನಗರ ಘಟನೆಯು ವೈಯಕ್ತಿಕ ಸ್ವಾತಂತ್ರ್ಯ, ಕೋಮು ಸಾಮರಸ್ಯ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಜಾರಿ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುವ ತುರ್ತು ಅಗತ್ಯವನ್ನು ಒತ್ತಿಹೇಳಿದೆ. ಸಾರ್ವಜನಿಕ ಕಿರುಕುಳದ ಇಂತಹ ಕೃತ್ಯಗಳನ್ನು ತ್ವರಿತವಾಗಿ ನಿಭಾಯಿಸುವುದನ್ನು ಮತ್ತು ಅಪರಾಧಿಗಳನ್ನು ನ್ಯಾಯಕ್ಕೆ ಒಪ್ಪಿಸುವುದನ್ನು ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಹಾಗೆಯೇ ಇಂತಹ ಘಟನೆಗಳು ಮರುಕಳಿಸುವುದನ್ನು ತಡೆಯಲು ಮತ್ತು ಸಾಮಾಜಿಕ ಶಾಂತಿಯನ್ನು ಕಾಪಾಡಿಕೊಳ್ಳುವುದು ಅಗತ್ಯವಾಗಿರುವುದರಿಂದ ಪೊಲೀಸರು ತುರ್ತುಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಈ ಘಟನೆಯಲ್ಲಿ ಸಂತ್ರಸ್ತ ಯುವತಿ, ಯುವಕ ಮತ್ತು ಆರೋಪಿಗಳೆಲ್ಲರೂ ಒಂದೇ ಸಮುದಾಯಕ್ಕೆ ಸೇರಿದವರೆಂದು ಮಾಧ್ಯಮಗಳು ವರದಿ ಮಾಡಿವೆ.

ಕೆಲವು ತಿಂಗಳ ಹಿಂದೆ, ಉತ್ತರ ಪ್ರದೇಶದ ಸಹರಾನ್‌ಪುರ ಪಟ್ಟಣದಲ್ಲಿ ಇಬ್ಬರು ಮುಸ್ಲಿಂ ಹುಡುಗಿಯರನ್ನು ಹಿಂದೂ ಯುವಕರೊಂದಿಗೆ ಸುತ್ತಾರುತ್ತಿದ್ದಾರೆ ಎಂದು ಅನುಮಾನದಿಂದ ಗುಂಪೊಂದು ಹಲ್ಲೆ ನಡೆಸಿತ್ತು. ಯುವಕರೂ ಮುಸ್ಲಿಮರಾಗಿದ್ದರಿಂದ ಪೋಷಕರಿಗೆ ತಿಳಿಸುವುದಾಗಿ ಬೆದರಿಕೆ ಹಾಕಿ ಬಿಟ್ಟಿತ್ತು. ಇಂತಹ ಹಲವು ಅನೈತಿಕ ಪೊಲೀಸ್‌ಗಿರಿ ಪ್ರಕರಣಗಳು ದೇಶದಲ್ಲಿ ವರದಿಯಾಗುತ್ತಿವೆ.

ಹಿಂದೂ ಯುವತಿ, ಮುಸ್ಲಿಂ ಯುವಕರು ಜೊತೆಗಿದ್ದ ಕಾರಣ ಅವರ ಮೇಲೆ ಹಲ್ಲೆ ನಡೆಸಿರುವ ಹಲವು ಘಟನೆಗಳೂ ಉತ್ತರ ಪ್ರದೇಶದಲ್ಲಿ ನಡೆದಿವೆ. ಮುಸ್ಲಿಂ ಎಂಬ ಕಾರಣಕ್ಕೆ ಹಲ್ಲೆ ನಡೆಸುವುದು ದೇಶದಲ್ಲಿ ಹೆಚ್ಚಾಗುತ್ತಿದೆ. ಮುಸ್ಲಿಮರ ಮೇಲೆ ದಾಳಿ ಹೆಚ್ಚಾಗುತ್ತಿದ್ದಂತೆ ಪ್ರತಿದಾಳಿಯೂ ನಡೆದು ಕೋಮುಗಲಭೆಗೆ ದೇಶ ಸಾಕ್ಷಿಯಾಗುತ್ತಿದೆ. ಹೋಳಿ ಬಣ್ಣ ಹಾಕಿಸಿಕೊಳ್ಳಲು ನಿರಾಕರಿಸಿದ ಕಾರಣಕ್ಕೆ ಮುಸ್ಲಿಂ ಬಾಲಕನಿಗೆ ಥಳಿಸಿ ಕೊಂದಿರುವ ಘಟನೆ ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಹನುಮಾನ್ ಮಂದಿರಲ್ಲಿದ್ದ ಜೈನ ಮುನಿಗಳ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...