ಉತ್ತರ ಪ್ರದೇಶವನ್ನು ಬಿಜೆಪಿ ’ಅಪರಾಧ ಪ್ರದೇಶ’ ಮಾಡಿದೆ: ಪ್ರಿಯಾಂಕ ಗಾಂಧಿ ಆಕ್ರೋಶ

ಬಿಜೆಪಿ ಸರ್ಕಾರ ಉತ್ತರ ಪ್ರದೇಶವನ್ನು ’ಅಪರಾಧ ಪ್ರದೇಶ’ವನ್ನಾಗಿ ಬದಲಾಯಿಸಿದೆ ಎಂದು ಕಾಂಗ್ರೆಸ್ ಪಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶ ಮಕ್ಕಳ ಮೇಲೆ ದೌರ್ಜನ್ಯದಲ್ಲಿ, ದಲಿತರ ಮೇಲಿನ ದೌರ್ಜನ್ಯದಲ್ಲಿ, ಮಹಿಳೆಯರ ಮೇಲಿನ ದೌರ್ಜನ್ಯದಲ್ಲಿ, ಹತ್ಯೆಗಳಲ್ಲಿ ಒಂದನೇ ಸ್ಥಾನದಲ್ಲಿದೆ ಎಂದು ಉಲ್ಲೇಖಿಸಿದ ಅವರು, ಪ್ರದೇಶದ ಕಾನೂನು ಮತ್ತು ಸುವ್ಯವಸ್ಥೆಯೂ ಹದಗೆಟ್ಟಿದೆ ಎಂದು ಹೇಳಿದರು.

ರಾಜಕಾರಣಿ-ಅಪರಾಧಿಗಳ ಮೈತ್ರಿಗಳು ಉತ್ತರ ಪ್ರದೇಶದ ಮೇಲೆ ಪ್ರಾಬಲ್ಯ ಹೊಂದಿವೆ. ಕಾನ್ಪುರ ಪ್ರಕರಣದಲ್ಲಿ ಈ ಮೈತ್ರಿಯ ಸಂಬಂಧ ಬೆಳಕಿಗೆ ಬಂದಿದ್ದು, ಅಂತಹ ಅಪರಾಧಿಯನ್ನು ಬೆಳೆಸುವಲ್ಲಿ ಯಾರು-ಯಾರು ತೊಡಗಿದ್ದಾರೆ ಎಂಬುದನ್ನು ಬಹಿರಂಗಪಡಿಸಬೇಕು ಎಂದು ಹೇಳಿದ್ದಾರೆ.

ಇಡೀ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್‌ನ ಪ್ರಸ್ತುತ ನ್ಯಾಯಾಧೀಶರು ನ್ಯಾಯಾಂಗ ವಿಚಾರಣೆ ನಡೆಸಬೇಕು ಎಂದ ಅವರು ಎನ್‌ಕೌಂಟರ್‌ನ ಸತ್ಯವನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.

ದರೋಡೆಕೋರ‌ ವಿಕಾಸ್‌ ದುಬೆ ಇಂದು ಬೆಳಿಗ್ಗೆ ಹತ್ಯೆಯಾಗಿದ್ದು, ಪೊಲೀಸರು ಆತ ತಪ್ಪಿಸಲು ಹೋದಾಗ ಎನ್‌ಕೌಂಟರ್‌ ಆಗಿದೆ ಎಂದು ಹೇಳಿದ್ದಾರೆ. ಎಂಟು ಮಂದಿ ಪೊಲೀಸರನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ದುಬೆಯನ್ನು ಮಧ್ಯಪ್ರದೇಶದ ಉಜ್ಜಯನಿಯಲ್ಲಿ ನಿನ್ನೆ ಬಂಧಿಸಿ ಉತ್ತರ ಪ್ರದೇಶಕ್ಕೆ ಕರೆತರುವಾಗ ಈ ಘಟನೆ ನಡೆದಿದೆ.

ಹೆಚ್ಚಿನ ಜನರು ಇದನ್ನು ನಕಲಿ ಎನ್‌ಕೌಂಟರ್‌ ಎಂದಿದ್ದು, ಒಬ್ಬನನ್ನು ಕೊಲ್ಲುವ ಮೂಲಕ ನೂರಾರು ಅಪರಾಧಿಗಳನ್ನು ರಕ್ಷಿಸಲಾಗಿದೆ ಎಂದು ಎಂದು ಆರೋಪಿಸಿದ್ದಾರೆ.


ಓದಿ: ವಿಕಾಸ್ ದುಬೆ ಹಾಗೂ ಕಾನ್ಪುರ ಘಟನೆಯ ಕುರಿತು ಸಂಪೂರ್ಣ ಮಾಹಿತಿ


 

Donate

ಈ ಲೇಖನ, ಈ ವೆಬ್‌ಸೈಟ್ ನಿಮಗೆ ಇಷ್ಟವಾಯಿತೇ? ನಿಮ್ಮ ಬೆಂಬಲ ಇದಕ್ಕೆ ಅಗತ್ಯ.

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

+ posts