Homeಮುಖಪುಟ2 ತಿಂಗಳ ಅವಧಿಯಲ್ಲಿ UAPAಯಡಿ 9 ಮುಸ್ಲಿಂ ಯುವಕರನ್ನು ಬಂಧಿಸಿದ ಉತ್ತರಪ್ರದೇಶದ ಎಟಿಎಸ್‌!

2 ತಿಂಗಳ ಅವಧಿಯಲ್ಲಿ UAPAಯಡಿ 9 ಮುಸ್ಲಿಂ ಯುವಕರನ್ನು ಬಂಧಿಸಿದ ಉತ್ತರಪ್ರದೇಶದ ಎಟಿಎಸ್‌!

- Advertisement -
- Advertisement -

“ಐಸಿಸ್ ಮಾಡ್ಯೂಲ್” ನೆಪದಲ್ಲಿ ಉತ್ತರಪ್ರದೇಶದ ಪೊಲೀಸರು ಮುಸ್ಲಿಂ ಯುವಕರ ಬಂಧನವನ್ನು ಮುಂದುವರಿಸಿದ್ದು, ಕಳೆದ ಎರಡು ತಿಂಗಳಲ್ಲಿ ರಾಜ್ಯದ ಒಳಗೆ ಮತ್ತು ಹೊರಗೆ ಭಯೋತ್ಪಾದನಾ ಆರೋಪದ ಮೇಲೆ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ಹಾಲಿ ಮತ್ತು ಮಾಜಿ ಸೇರಿ 9 ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

2023ರ ನ.23ರಂದು ಲಕ್ನೋದಲ್ಲಿ ಉತ್ತರಪ್ರದೇಶದ ಭಯೋತ್ಪಾದನಾ ನಿಗ್ರಹ ದಳವು ದಾಖಲಿಸಿದ ಎಫ್‌ಐಆರ್ ಬಳಿಕ ವಿದ್ಯಾರ್ಥಿಗಳ ಬಂಧನಗಳು ನಡೆದಿವೆ. ಎಫ್‌ಐಆರ್‌ನಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 121 ಎ ಮತ್ತು 122 ಜೊತೆಗೆ ಕಠಿಣ ಕಾನೂನು ಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ ಯುಎಪಿಎಯ ಸೆಕ್ಷನ್ 13, 18, 18 ಬಿ ಮತ್ತು 38ನ್ನು ವಿಧಿಸಲಾಗಿದೆ.

ರಾಜ್ಯದ ವಿರುದ್ಧದ ಅಪರಾಧಕ್ಕೆ  ಪಿತೂರಿ, ಭಾರತ ಸರ್ಕಾರದ ವಿರುದ್ಧ ಯುದ್ಧ ಮಾಡುವ ಉದ್ದೇಶದಿಂದ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸುವುದು, ಭಯೋತ್ಪಾದಕ ಕೃತ್ಯವನ್ನು ಎಸಗಲು ಪ್ರಯತ್ನಿಸುವುದು, ಭಯೋತ್ಪಾದಕ ಕೃತ್ಯಗಳಿಗೆ ಜನರನ್ನು ನೇಮಿಸಿಕೊಳ್ಳವ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಂಧಿತರು ಉತ್ತರಪ್ರದೇಶದಲ್ಲಿ ಅಥವಾ ದೇಶದ ಇತರ ಭಾಗಗಳಲ್ಲಿ ದೊಡ್ಡ ಭಯೋತ್ಪಾದಕ ಕೃತ್ಯವನ್ನು ನಡೆಸಲು ಯೋಚಿಸಿಸಿದ್ದರು ಎಂದು ಉತ್ತರಪ್ರದೇಶದ ಎಟಿಎಸ್ ಆರೋಪಿಸಿದೆ.

ಅಲಿಘರ್ ಮುಸ್ಲಿಂ ವಿವಿಯ “ಐಸಿಸ್ ಮಾಡ್ಯೂಲ್” ಆರೋಪಿಸಿ ನವೆಂಬರ್ ಮೊದಲ ವಾರದಲ್ಲಿ ಈ ಕುರಿತ ಮೊದಲ ಬಂಧನ ನಡೆದಿದೆ. ಜನವರಿ 8, 2024ರಂದು ಎಟಿಎಸ್ ಅಮಾಸ್ ಅಹ್ಮದ್‌ನನ್ನು ಅಲಿಘರ್‌ನಲ್ಲಿ ಬಂಧಿಸಿತ್ತು. ಸಂಭಾಲ್‌ನ ಅಬ್ದುಲ್ ಸಮದ್ ಮಲಿಕ್ (25) ಸ್ಥಳೀಯ ನ್ಯಾಯಾಲಯದಲ್ಲಿ ಶರಣಾಗಿದ್ದಾನೆ. ಅಹ್ಮದ್ 2022ರಲ್ಲಿ AMUನಿಂದ ಮನೋವಿಜ್ಞಾನದಲ್ಲಿ ತಮ್ಮ ಪದವಿಯನ್ನು ಪೂರ್ಣಗೊಳಿಸಿದ್ದರು. ಸಮದ್ ಮಲಿಕ್ ಸಮಾಜಕಾರ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದಾರೆ. ಈ ಪ್ರಕರಣದಲ್ಲಿ ಈ ಹಿಂದೆ ಬಂಧಿತರಾಗಿದ್ದ ಏಳು ಮಂದಿಯೊಂದಿಗೆ ಈ ಇಬ್ಬರು ವ್ಯಕ್ತಿಗಳು ಎಎಂಯುನಲ್ಲಿ ಐಸಿಸ್ ಮಾಡ್ಯೂಲ್‌ನ್ನು ಸಿದ್ಧಪಡಿಸುತ್ತಿದ್ದಾರೆ ಮತ್ತು ಅದಕ್ಕೆ ಇತರರನ್ನು ನೇಮಿಸಿಕೊಳ್ಳುತ್ತಿದ್ದಾರೆ ಎಂದು ಯುಪಿ ಎಟಿಎಸ್ ಆರೋಪಿಸಿದೆ. ಬಂಧಿತರೆಲ್ಲರೂ ಐಸಿಸ್‌ಗೆ ನಿಷ್ಠೆಯ ಪ್ರತಿಜ್ಞೆಯನ್ನು ತೆಗೆದುಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ನವೆಂಬರ್ 5 ರಂದು ಇಬ್ಬರು ಮಾಜಿ ಎಎಮ್‌ಯು ವಿದ್ಯಾರ್ಥಿಗಳಾದ ಅಬ್ದುಲ್ಲಾ ಅರ್ಸಲಾನ್ ಮತ್ತು ಮಾಜ್ ಬಿನ್ ತಾರಿಕ್ ಅವರನ್ನು ಬಂಧಿಸಲಾಗಿತ್ತು. ಎರಡು ದಿನಗಳ ನಂತರ ಯುಪಿ ಎಟಿಎಸ್ ಛತ್ತೀಸ್‌ಗಢದ ದುರ್ಗ್‌ನಿಂದ ಎಎಮ್‌ಯುನಿಂದ ಪಿಎಚ್‌ಡಿ ಪೂರ್ಣಗೊಳಿಸಿದ್ದ ವಜಿಹುದ್ದೀನ್ ಎಂಬ ಮೂರನೇ ವ್ಯಕ್ತಿಯನ್ನು ಬಂಧಿಸಿದೆ. ಕಳೆದ ನವೆಂಬರ್ 11ರಂದು ಎಟಿಎಸ್, ರಖೀಬ್ ಇಮಾಮ್,  ನಾವೇದ್ ಸಿದ್ದಿಕಿ, ಮೊಹಮ್ಮದ್ ನೋಮನ್, ಮೊಹಮ್ಮದ್ ನಜೀಮ್ ಅವರನ್ನು ಬಂಧಿಸಿತ್ತು. ನೋಮನ್, ನಾಜಿಮ್ ಮತ್ತು ಸಿದ್ದಿಕಿ ಅವರನ್ನು ಅವರ ಹುಟ್ಟೂರಾದ ಸಂಭಾಲ್ ಜಿಲ್ಲೆಯಿಂದ ಬಂಧಿಸಲಾಗಿದ್ದು, ಇಮಾಮ್ ಅವರನ್ನು ಅಲಿಘರ್‌ನಲ್ಲಿ  ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳು ಹಿಂಸಾತ್ಮಕ ಜಿಹಾದ್ ಮೂಲಕ ಸರ್ಕಾರವನ್ನು ಉರುಳಿಸಲು ಮತ್ತು ಷರಿಯಾ ಕಾನೂನನ್ನು ಹೇರಲು ಯೋಜಿಸುತ್ತಿದ್ದರು ಎಂದು ಎಟಿಎಸ್ ಆರೋಪಿಸಿದೆ. ನಾಲ್ವರು ಐಸಿಸ್ ಸಾಹಿತ್ಯವನ್ನು ಸಮಾನ ಮನಸ್ಸಿನ ವ್ಯಕ್ತಿಗಳಿಗೆ ಹಂಚುತ್ತಿದ್ದರು, ರಹಸ್ಯ ಸಭೆಗಳನ್ನು ಸೇರುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಬಂಧಿತ ಯುವಕರೆಲ್ಲರೂ SAMU ಎಂಬ ಅಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಸಂಘಟನೆ ಜೊತೆ ಸಂಬಂಧ ಹೊಂದಿದ್ದರು. ಈ ಸಂಘಟನೆ ಕ್ಯಾಂಪಸ್‌ನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿತ್ತು. ಇದು ವಿದ್ಯಾರ್ಥಿಗಳ ಸಂಘಟನೆಯಾಗಿದೆ. ಅಂತಹ ಯಾವುದೇ ಚಟುವಟಿಕೆಗಳು ನಡೆಯುತ್ತಿಲ್ಲ. ಆರಂಭಿಕ ಹಂತದಲ್ಲಿ ಸರಿಯಾದ ಪುರಾವೆಗಳಿಲ್ಲದೆ ದೊಡ್ಡ ಆರೋಪ ಹೊರಿಸುತ್ತಿರುವ ತನಿಖೆಯ ಬಗ್ಗೆ ಅನೇಕ ವಿದ್ಯಾರ್ಥಿಗಳು  ಮಾತನಾಡುತ್ತಾ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಆಲಿಗಢ್ ಮುಸ್ಲಿಂ ವಿವಿಯ ಅಧಿಕಾರಿಯೊಬ್ಬರು ಮಾತನಾಡುತ್ತಾ, ಪೊಲೀಸರ ನಿರೂಪಣೆಯು “ಆಧಾರರಹಿತ”, ಎಟಿಎಸ್ ಹೇಳಿರುವ ಆರೋಪಗಳು ಇನ್ನೂ ಸಾಬೀತಾಗಿಲ್ಲ, ಅಂತಹ ನಡವಳಿಕೆ ವಿರುದ್ಧ ವಿಶ್ವವಿದ್ಯಾಲಯವು “ಶೂನ್ಯ ಸಹಿಷ್ಣುತೆ” ನೀತಿಯನ್ನು ಹೊಂದಿದೆ. ಆ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಮತ್ತು ವಿಶ್ವವಿದ್ಯಾನಿಲಯವು ತನಿಖೆಗೆ ಸಹಕರಿಸಲು ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ವಿಶ್ವವಿದ್ಯಾನಿಲಯದ ಕೆಲವು ಮಾಜಿ ಮತ್ತು ಹಾಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ತಿಳಿದಿದ್ದರೂ, ಯಾವುದೇ ಸಂಸ್ಥೆಗಳು ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ ಎಂದು AMUನ ವಾಸಿಂ ಅಲಿ ಹೇಳಿದ್ದಾರೆ. ಈ ಆರೋಪಗಳ ಕುರಿತ ಸತ್ಯ ಮತ್ತು ಅವುಗಳನ್ನು ಯಾವ ಆಧಾರದ ಮೇಲೆ ಮಾಡಲಾಗಿದೆ ಎಂದು ತನಿಖೆಯ ಮೂಲಕ ತಿಳಿಯಲಾಗುವುದು ಅಥವಾ ನ್ಯಾಯಾಲಯದಲ್ಲಿ ನಿರ್ಧರಿಸಲಾಗುವುದು ಎಂದು ಅಲಿ ಹೇಳಿದ್ದಾರೆ.

ಈ ಬಂಧನಗಳು ಮತ್ತು ಯುಪಿ ಪೊಲೀಸರು ಆಪಾದಿಸಿದ ಐಸಿಸ್ ಮಾಡ್ಯೂಲ್ ಜೊತೆ ಕೇಂದ್ರೀಯ ವಿಶ್ವವಿದ್ಯಾನಿಲಯಕ್ಕೆ ಸಂಬಂಧ ಕಲ್ಪಿಸುವುದು ಎಎಂಯು ಮೇಲೆ ಆಳವಾಗಿ ಪರಿಣಾಮ ಬೀರುವುದಿಲ್ಲ ಎಂದು ಅಲಿ ಹೇಳಿದರು. ವಿಶ್ವವಿದ್ಯಾನಿಲಯದಲ್ಲಿ 25,000 ವಿದ್ಯಾರ್ಥಿಗಳಿದ್ದಾರೆ. ಪ್ರತಿ ವರ್ಷ ಸಾವಿರಾರು ಮಂದಿ ಬಂದು ಹೋಗುತ್ತಾರೆ. ಈ ಪೈಕಿ 3-4 ವಿದ್ಯಾರ್ಥಿಗಳು, ಅವರಲ್ಲಿ ಹೆಚ್ಚಿನವರು ಮಾಜಿ ವಿದ್ಯಾರ್ಥಿಗಳು, ಅಂತಹ ಆರೋಪಗಳನ್ನು ಎದುರಿಸಿದರೆ, ಅದು ವಿಶ್ವವಿದ್ಯಾಲಯದ ಇಮೇಜ್ ಮೇಲೆ ಪರಿಣಾಮ ಬೀರುತ್ತದೆ ಎಂದು ನಾನು ಭಾವಿಸುವುದಿಲ್ಲ ಎಂದು ಆಲಿಗಢ್ ಮುಸ್ಲಿಂ ವಿವಿಯ ವಾಸಿಂ ಅಲಿ ಹೇಳಿದ್ದಾರೆ.

ಇದನ್ನು ಓದಿ: ಮುಜಾಫರ್‌ನಗರ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ: ಯುಪಿ ಸರಕಾರಕ್ಕೆ ಸುಪ್ರೀಂಕೋರ್ಟ್‌ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...