Homeಮುಖಪುಟಉತ್ತರ ಪ್ರದೇಶ: ಪಿಕ್‌ಅಪ್‌ ವ್ಯಾನ್‌ ಕಳವು ದೂರಿನ ಬಗ್ಗೆ ಪೊಲೀಸರ ನಿರ್ಲಕ್ಷ್ಯ; ಬೆಂಕಿ ಹಚ್ಚಿಕೊಂಡ ವಾಹನ...

ಉತ್ತರ ಪ್ರದೇಶ: ಪಿಕ್‌ಅಪ್‌ ವ್ಯಾನ್‌ ಕಳವು ದೂರಿನ ಬಗ್ಗೆ ಪೊಲೀಸರ ನಿರ್ಲಕ್ಷ್ಯ; ಬೆಂಕಿ ಹಚ್ಚಿಕೊಂಡ ವಾಹನ ಮಾಲೀಕ

- Advertisement -
- Advertisement -

ಪಿಕ್‌ಅಪ್‌ ವ್ಯಾನ್‌ ಕಳವು ಮಾಡಿದ ದೂರಿನ ಬಗ್ಗೆ ಪೊಲೀಸರ ನಿರ್ಲಕ್ಷ್ಯ ವಹಿಸಿದ್ದರಿಂದ ಮನನೊಂದ ವಾಹನ ಮಾಲೀಕ ಪೊಲೀಸ್‌ ಠಾಣೆಯ ಹೊರಗೆ ಬೆಂಕಿ ಹಚ್ಚಿಕೊಂಡಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ನಡೆದಿದೆ.

ಪೆಟ್ರೋಲ್ ಸುರಿದುಕೊಂಡು ವಾಹನ ಮಾಲೀಕ ಬೆಂಕಿ ಹಚ್ಚಿಕೊಂಡಿದ್ದು, ಠಾಣೆಯಲ್ಲಿದ್ದ ಪೊಲೀಸ್ ಸಿಬ್ಬಂದಿ ಆತನನ್ನು ರಕ್ಷಿಸಿದ್ದಾರೆ ಎಂದು ವರದಿಯಾಗಿದೆ.

ಆರು ತಿಂಗಳ ಹಿಂದೆ ಅವರ ವಾಹನ ಕಳ್ಳತನವಾಗಿದೆ ಎಂದು ಅವರ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು. ವಾಹನ ಕಳವು ಪ್ರಕರಣದಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಈತನ ಬಳಿ ನಿಂತಿದ್ದವರು ತಮ್ಮ ಮೊಬೈಲಿನಲ್ಲಿ ಚಿತ್ರೀಕರಿಸಿದ ವಿಡಿಯೋದಲ್ಲಿ ಈ ಕೃತ್ಯ ದಾಖಲಾಗಿದೆ. ಕನಿಷ್ಠ 10 ರಿಂದ 12 ಪೊಲೀಸ್ ಸಿಬ್ಬಂದಿ ಕಂಬಳಿ ಬಳಸಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ಬಾಲಕನೊಬ್ಬ ಆತನ ಮೇಲೆ ಬಾಟಲಿ ಬಳಸಿ ನೀರು ಸುರಿಯುತ್ತಿರುವ ದೃಶ್ಯವೂ ವಿಡಿಯೋದಲ್ಲಿ ಕಂಡುಬಂದಿದೆ.

40ರ ಹರೆಯದ ವ್ಯಕ್ತಿಯನ್ನು ತಾಹಿರ್ ಅಲಿ ಎಂದು ಗುರುತಿಸಲಾಗಿದೆ ಎಂದು ಶಹಜಾನ್‌ಪುರ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಮೀನಾ ತಿಳಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಆರೋಗ್ಯವಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

‘ನಾವು ಪ್ರಸ್ತುತ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಮತ್ತು ಅವರು ಈ ಕ್ರಮವನ್ನು ಏಕೆ ತೆಗೆದುಕೊಂಡರು ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ’ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ತಮ್ಮ ಎಕ್ಸ್‌ ಖಾತೆಯಲ್ಲಿ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

‘ಶಹಜಹಾನ್‌ಪುರದಲ್ಲಿ ಪಿಕಪ್‌ ಟ್ರಕ್‌ ಕಳ್ಳತನ ಪ್ರಕರಣ ದಾಖಲಿಸಿಕೊಳ್ಳದ ಪೊಲೀಸರ ವರ್ತನೆಯಿಂದ ಮನನೊಂದು, ಎಸ್‌ಪಿ ಕಚೇರಿ ಎದುರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಯುವಕನಿಗೆ ಕೂಡಲೇ ಉತ್ತಮ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು. ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ತಮ್ಮ ಪೋಸ್ಟ್‌ನಲ್ಲಿ ಇತ್ತಾಯಿಸಿದ್ದಾರೆ.

‘ಎಫ್‌ಐಆರ್‌ಗಳು ತುಂಬಾ ಕಡಿಮೆಯಿರುವಾಗ, ಎನ್‌ಸಿಆರ್‌ಬಿ ವರದಿಯು ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಕೆಟ್ಟ ಸ್ಥಿತಿಯನ್ನು ತೋರಿಸುತ್ತದೆ. ಪ್ರತಿ ಅಪರಾಧ ವರದಿಯಾಗುವುದು ನಿಜವಾದರೆ, ಉತ್ತರ ಪ್ರದೇಶದ ಅಮೃತಕಾಲ ಎಂದು ಕರೆಯಲ್ಪಡುವವರು ಅವಮಾನದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆಯೇ ಎಂದು ನನಗೆ ತಿಳಿದಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ಮಾಲ್ಡೀವ್ಸ್-ಚೀನಾ ಮಿಲಿಟರಿ ಒಪ್ಪಂದ: ಮೇ 10ರೊಳಗೆ ದೇಶ ತೊರೆಯುವಂತೆ ಭಾರತೀಯ ಅಧಿಕಾರಿಗಳಿಗೆ ಆದೇಶ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read