Homeಮುಖಪುಟಉತ್ತರಪ್ರದೇಶ: ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕನ ಬಂಧನ; ರಿಮ್ಯಾಂಡ್‌ಗೆ ಪಡೆದ ಪೊಲೀಸರು!

ಉತ್ತರಪ್ರದೇಶ: ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕನ ಬಂಧನ; ರಿಮ್ಯಾಂಡ್‌ಗೆ ಪಡೆದ ಪೊಲೀಸರು!

46 ವರ್ಷದ ಜೈಪ್ರಕಾಶ್ ಎಂಬುವವರನ್ನು ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಅವರ ಆಪ್ತ ಧೀರೇಂದ್ರ ಸಿಂಗ್, ಅಧಿಕಾರಿಗಳ ಎದುರೇ ಗುಂಡಿಕ್ಕಿ ಕೊಂದಿದ್ದ.

- Advertisement -
- Advertisement -

ಜಿಲ್ಲೆಯ ದುರ್ಜನ್‌ಪುರ ಗ್ರಾಮದಲ್ಲಿ ಪಡಿತರ ಅಂಗಡಿಯೊಂದನ್ನು ಹಂಚಿಕೆ ಮಾಡುವಾಗ ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಕೊಂದ ಆರೋಪದಡಿ ಬಂಧನವಾಗಿದ್ದ ಬಿಜೆಪಿ ಮುಖಂಡ ಧೀರೇಂದ್ರ ಪ್ರತಾಪ್ ಸಿಂಗ್ ಅವರನ್ನು ಪೊಲೀಸರು ಇಂದು ವಶಕ್ಕೆ ತೆಗೆದುಕೊಂಡಿದ್ದಾರೆ.

ಬಲ್ಲಿಯಾ ನ್ಯಾಯಾಲಯವು ಬುಧವಾರ ಬಂಧನವಾಗಿದ್ದ ಬಿಜೆಪಿ ನಾಯಕನನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ ಇರಿಸುವಂತೆ ಆದೇಶಿಸಿದೆ.

ರಿಯೋತಿ ಠಾಣಾಧಿಕಾರಿ ಪ್ರವೀಣ್ ಸಿಂಗ್ ಅವರು ಜಿಲ್ಲಾ ಜೈಲಿನಿಂದ ಧೀರೇಂದ್ರ ಸಿಂಗ್ ಅವರನ್ನು ವಶಕ್ಕೆ ತೆಗೆದುಕೊಂಡರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಂತರ ಅವರನ್ನು ದುರ್ಜನ್‌ಪುರ ಗ್ರಾಮದಲ್ಲಿರುವ ಅವರ ಮನೆಗೆ ಕರೆದೊಯ್ಯಲಾಯಿತು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಉತ್ತರ ಪ್ರದೇಶ: ಅಧಿಕಾರಿಗಳ ಎದುರೇ ಗುಂಡು ಹಾರಿಸಿ ಹತ್ಯೆಗೈದ ಬಿಜೆಪಿ ಶಾಸಕನ ಆಪ್ತ!

ಮುಖ್ಯ ನ್ಯಾಯಾಧೀಶ ರಮೇಶ್ ಕುಶ್ವಾಹ ಅವರು ಬಿಜೆಪಿ ನಾಯಕನನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುವಂತೆ ಆದೇಶಿಸಿ, ಶಸ್ತ್ರಾಸ್ತ್ರ, ದೇಶ ನಿರ್ಮಿತ ಪಿಸ್ತೂಲ್ ಅನ್ನು ಆರೋಪಿಗಳಿಂದ ವಶಪಡಿಸಿಕೊಳ್ಳಲು ಮತ್ತು ಪ್ರಕರಣದ ವಿಚಾರಣೆ ನಡೆಸಲು ಪೊಲೀಸರಿಗೆ ಅವಕಾಶ ಮಾಡಿಕೊಟ್ಟಿದೆ.

ಏಳು ದಿನಗಳ ಕಸ್ಟಡಿಗಾಗಿ ಸಲ್ಲಿಸಿದ ಪ್ರಾಸಿಕ್ಯೂಷನ್ ಬೇಡಿಕೆಯನ್ನು ತಿರಸ್ಕರಿಸಿದ ನ್ಯಾಯಾಲಯವು ಧೀರೇಂದ್ರ ಸಿಂಗ್ ಅವರನ್ನು ಕೇವಲ ಎರಡು ದಿನಗಳವರೆಗೆ ಪೊಲೀಸ್ ಕಸ್ಟಡಿಯಲ್ಲಿ ಇರಿಸಿದೆ.

ಬಿಜೆಪಿ ನಾಯಕನನ್ನು ಲಖನೌದಿಂದ ಭಾನುವಾರ ಬಂಧಿಸಲಾಗಿದೆ.

ವಿವಾದಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಗುರುವಾರ ಸ್ಥಳೀಯ ಅಧಿಕಾರಿಗಳ ಎದುರು ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು ಎಂದು ಪೊಲೀಸರು ಹೇಳಿದ್ದರು.

46 ವರ್ಷದ ಜೈಪ್ರಕಾಶ್ ಎಂಬುವವರನ್ನು ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಅವರ ಆಪ್ತ ಧೀರೇಂದ್ರ ಸಿಂಗ್, ಅಧಿಕಾರಿಗಳ ಎದುರೇ ಗುಂಡಿಕ್ಕಿ ಕೊಂದಿದ್ದ. ಇದಕ್ಕೆ ಸಂಬಂಧಿಸಿದಂತೆ ಎಎನ್‌ಐ ವೀಡಿಯೋವೊಂದನ್ನು ಟ್ವೀಟ್ ಮಾಡಿದ್ದು, “ಬಲ್ಲಿಯಾದಲ್ಲಿ ಸರ್ಕಾರಿ ಕೋಟಾದಡಿಯಲ್ಲಿ ಅಂಗಡಿಗಳನ್ನು ಮಂಜೂರು ಮಾಡಲು ಕರೆದಿದ್ದ ಸಭೆಯಲ್ಲಿ ಗುಂಡು ಹಾರಿಸಿದ್ದರಿಂದ ಒಬ್ಬರು ಮೃತಪಟ್ಟಿದ್ದಾರೆ. ಬಲ್ಲಿಯಾದ ಎಸ್‌ಪಿ ದೇವೇಂದ್ರನಾಥ್ ಪ್ರಕಾರ, ಸಭೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ ನಂತರ ಈ ಘಟನೆ ನಡೆದಿದೆ. ತನಿಖೆ ನಡೆಯುತ್ತಿದೆ ಎಂದಿದ್ದಾರೆ” ಎಂದು ಹೇಳಿತ್ತು.

ಬಿಜೆಪಿ ಶಾಸಕ ಸುರೇಂದ್ರ ಸಿಂಗ್, ಆರೋಪಿಯನ್ನು ಬಿಜೆಪಿಯ ಮಾಜಿ ಸೈನಿಕರ ಘಟಕದ ಮುಖ್ಯಸ್ಥರು ಎಂದು ದೃಢಪಡಿಸಿದ್ದು, “ಈ ಘಟನೆ ಎಲ್ಲಿಬೇಕಾದರೂ ಸಂಭವಿಸಬಹುದಾದ ಆಕಸ್ಮಿಕ ಘಟನೆ. ಇಲ್ಲಿ ಎರಡೂ ಕಡೆಯಿಂದ ಕಲ್ಲು ತೂರಾಟ ನಡೆದಿತ್ತು. ಈ ವಿಷಯದಲ್ಲಿ ಕಾನೂನು ತನ್ನ ಕೆಲಸವನ್ನು ನಿರ್ವಹಿಸಲಿದೆ” ಎಂದು ಹೇಳಿದ್ದರು.


ಇದನ್ನೂ ಓದಿ: ಯುಪಿ: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಅಪ್ರಾಪ್ತೆ ಅಸಹಜ ಸಾವು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...