Homeಮುಖಪುಟಕ್ರಿಮಿನಲ್ ವಿಕಾಸ್ ದುಬೆ ಬಂಧಿಸಲು 25 ತಂಡಗಳನ್ನು ರಚಿಸಿದ ಯುಪಿ ಪೊಲೀಸ್‌

ಕ್ರಿಮಿನಲ್ ವಿಕಾಸ್ ದುಬೆ ಬಂಧಿಸಲು 25 ತಂಡಗಳನ್ನು ರಚಿಸಿದ ಯುಪಿ ಪೊಲೀಸ್‌

ದುಬೆಯನ್ನು ಬಂಧಿಸಲು ಗುರುವಾರ ಮಧ್ಯರಾತ್ರಿ ಬಿಕ್ರು ಗ್ರಾಮಕ್ಕೆ ಪ್ರವೇಶಿಸಿದ ಪೊಲೀಸರ ಮೇಲೆ ಮೇಲ್ಛಾವಣಿಯಿಂದ ಗುಂಡಿನ ಮಳೆಗೆರೆದು ಎಂಟ ಪೊಲೀಸರನ್ನು ಕೊಲ್ಲಲಾಗಿತ್ತು.

- Advertisement -
- Advertisement -

ತನ್ನನ್ನು ಬಂಧಿಸಲು ಬಂದ 8 ಪೊಲೀಸರ ಮೇಲೆ ಗುಂಡು ಹಾರಿಸಿ ಕೊಂದ ರೌಡಿ ಶೀಟರ್ ವಿಕಾಸ್ ದುಬೆಯನ್ನು ಬಂಧಿಸಲು 25 ಕ್ಕೂ ಹೆಚ್ಚು ಉತ್ತರ ಪ್ರದೇಶ ಪೊಲೀಸರ ತಂಡಗಳನ್ನು ರಚಿಸಲಾಗಿದೆ. ಪೊಲೀಸರನ್ನು ಗುಂಡಿಕ್ಕಿ ಕೊಂದು 36 ಗಂಟೆಗಳಾದರೂ ಇನ್ನೂ ಆರೋಪಿಯನ್ನು ಬಂಧಿಸಲು ಸಾಧ್ಯವಾಗಿಲ್ಲ ಎಂಬ ಟೀಕೆ ಸಹ ಕೇಳಿಬಂದಿದೆ.

ಕಾನ್ಪುರದ ಇನ್ಸ್ಪೆಕ್ಟರ್ ಜನರಲ್ ಮೋಹಿತ್ ಅಗರ್ವಾಲ್ ಮಾತನಾಡಿ “ವಿಕಾಸ್ ದುಬೆ ಮತ್ತು ಸಹಚರರನ್ನು ಬಂಧಿಸಲು, 25 ತಂಡಗಳನ್ನು ರಚಿಸಲಾಗಿದೆ, ಇಂದು ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಇತರ ರಾಜ್ಯಗಳಲ್ಲಿ ಹುಡುಕುತ್ತಿವೆ” ಎಂದು ಪಿಟಿಐಗೆ ಹೇಳಿದ್ದಾರೆ.

ಕಣ್ಗಾವಲು ತಂಡವು 500 ಕ್ಕೂ ಹೆಚ್ಚು ಮೊಬೈಲ್ ಫೋನ್‌ಗಳನ್ನು ಸ್ಕ್ಯಾನ್ ಮಾಡುತ್ತಿದ್ದು, ಸುಮಾರು 60 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ದುಬೆಯ ಮಾಹಿತಿಯನ್ನು ಪಡೆಯಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇಷ್ಟೇ ಅಲ್ಲದೆ ಆರೋಪಿಗಳನ್ನು ಬಂಧಿಸಲು ಉತ್ತರ ಪ್ರದಶ ಪೊಲೀಸರ ವಿಶೇಷ ಕಾರ್ಯಪಡೆಗೂ ಸಹ ಸಜ್ಜಾಗಿದೆ.

ದುಬೆ ಬಗ್ಗೆ ಮಾಹಿತಿ ನೀಡಿದವರಿಗೆ 50,000 ರೂ.ಗಳ ನಗದು ಬಹುಮಾನ ಘೋಷಿಸಲಾಗಿದ್ದು, ಮಾಹಿತಿ ಒದಗಿಸುವವರ ಗುರುತನ್ನು ರಹಸ್ಯವಾಗಿಡಲಾಗುವುದು ಎಂದು ಅಗರ್‌ವಾಲ್ ತಿಳಿಸಿದ್ದಾರೆ.

ಎನ್‌ಕೌಂಟರ್‌ನಲ್ಲಿ ಗಾಯಗೊಂಡ ಏಳು ಪೊಲೀಸರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅವರು ತಿಳಿಸಿದ್ದಾರೆ. ಲಕ್ನೋದ ಕೃಷ್ಣನಗರ ಪ್ರದೇಶದ ದುಬೆ ಅವರ ಮನೆಯ ಮೇಲೆ ಪೊಲೀಸರು ಶುಕ್ರವಾರ ತಡರಾತ್ರಿ ದಾಳಿ ನಡೆಸಿದ್ದರು.

ಹತ್ಯೆಗೀಡಾದ ಪೊಲೀಸರ ಕುಟುಂಬ ಸದಸ್ಯರನ್ನು ಭೇಟಿಯಾದ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಕಾನ್ಪುರದಲ್ಲಿ ದುಃಖಿತ ಕುಟುಂಬಗಳಿಗೆ ತಲಾ ಒಂದು ಕೋಟಿ ರೂ. ಪರಿಹಾರ ಘೋ‍‍‍‍‍ಷಿಸಿದ್ದಾರೆ.

ನಗರದ ಸಮೀಪದ ಹಳ್ಳಿಯೊಂದರಲ್ಲಿ ಡಿಎಸ್‌ಪಿ ಸೇರಿದಂತೆ ಒಟ್ಟು ಎಂಟು ಮಂದಿ ಪೊಲೀಸ್ ಸಿಬ್ಬಂದಿಯನ್ನು ದುಬೆಯ ಸಹಚರರರು ಗುಂಡಿಕ್ಕಿ ಕೊಂದಿದ್ದಾರೆ. ದುಬೆಯನ್ನು ಬಂಧಿಸಲು ಗುರುವಾರ ಮಧ್ಯರಾತ್ರಿ ಬಿಕ್ರು ಗ್ರಾಮಕ್ಕೆ ಪ್ರವೇಶಿಸಿದ ಪೊಲೀಸರ ಮೇಲೆ ಮೇಲ್ಛಾವಣಿಯಿಂದ ಗುಂಡಿನ ಮಳೆಗೆರೆಯಲಾಗಿತ್ತು.


ಓದಿ: 8 ಪೊಲೀಸರನ್ನು ಗುಂಡಿಕ್ಕಿ ಕೊಂದ ಕ್ರಿಮಿನಲ್! ಉತ್ತರ ಪ್ರದೇಶದಲ್ಲೊಂದು ಭೀಕರ ಘಟನೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...