Homeಮುಖಪುಟಉತ್ತರ ಪ್ರದೇಶ ಚುನಾವಣೆ ವಿಚಾರ: ಅಖಿಲೇಶ್ ಯಾದವ್ ಭೇಟಿಯಾದ ಬಿಎಸ್‌ಪಿ ಶಾಸಕರು

ಉತ್ತರ ಪ್ರದೇಶ ಚುನಾವಣೆ ವಿಚಾರ: ಅಖಿಲೇಶ್ ಯಾದವ್ ಭೇಟಿಯಾದ ಬಿಎಸ್‌ಪಿ ಶಾಸಕರು

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲಾ ರಾಜಕೀಯ ಪಕ್ಷಗಳು  ತಯಾರಿ ನಡೆಸುತ್ತಿವೆ. ಈ ನಡುವೆ ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ)ದ 9 ಶಾಸಕರು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಮಂಗಳವಾರ ಭೇಟಿಯಾಗಿದ್ದಾರೆ. ಇದು ಚುನಾವಣ ರಾಜ್ಯದ ರಾಜಕೀಯದಲ್ಲಿ ಸಂಚಲನವನ್ನು ಹುಟ್ಟುಹಾಕಿದೆ.

ಪಕ್ಷ ವಿರೋಧಿ ಚಟುವಟಿಕೆಯ ಆಧಾರದ ಮೇಲೆ ಈ ಒಂಬತ್ತು ಶಾಸಕರನ್ನು ಪಕ್ಷದಿಂದ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಉಚ್ಛಾಟಿಸಿದ್ದರು. ಅಖಿಲೇಶ್‌ ಅವರನ್ನು ಬಿಎಸ್‌ಪಿ ಶಾಸಕರು ಭೇಟಿ ಮಾಡಿರುವುದು ಮುಂದಿನ ಚುನಾವಣೆಯಲ್ಲಿ ರಾಜಕೀಯ ಮತ ಸಮೀಕರಣಕ್ಕೆ ಎಸ್‌ಪಿ ಪಕ್ಷಕ್ಕೆ ಸಹಕಾರಿಯಾಗಬಹುದು ಎಂದು ಹೇಳಲಾಗುತ್ತಿದೆ. ಈ ಒಂಬತ್ತು ಶಾಸಕ ಸಮಾಜವಾದಿ ಪಕ್ಷಕ್ಕೆ ಸೇರುವ ಸಾಧ್ಯತೆ ಇದೆ.

ಶಾಸಕರಾದ ಅಸ್ಲಾಂ ರೈನಿ, ಅಸ್ಲಾಂ ಅಲಿ ಚೌಧರಿ, ಮುಜ್ತಾಬಾ ಸಿದ್ದಿಕಿ, ಹಕೀಮ್ ಲಾಲ್ ಬಿಂದ್, ಹರ್‌ಗೋವಿಂದ್ ಭಾರ್ಗವ್, ಸುಷ್ಮಾ ಪಟೇಲ್, ವಂದನಾ ಸಿಂಗ್, ರಾಮ್‌ವೀರ್ ಉಪಾಧ್ಯಾಯ ಮತ್ತು ಅನಿಲ್ ಸಿಂಗ್ ಅವರನ್ನು ಕಳೆದ ನಾಲ್ಕು ವರ್ಷಗಳಲ್ಲಿ ಬಿಎಸ್‌ಪಿಯಿಂದ ಮಾಯಾವತಿ ಉಚ್ಚಾಟಿಸಿದ್ದಾರೆ.

ಇದನ್ನೂ ಓದಿ: ಪ್ರತಿಭಟನೆಯನ್ನು ‘ದುಷ್ಕೃತ್ಯ’ ಎಂದು ಜೆಎನ್‌ಯು ಅಧ್ಯಕ್ಷೆಗೆ ನೋಟಿಸ್‌ ನೀಡಿದ ವಿವಿ!

2017 ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಕೇವಲ 19 ಸ್ಥಾನಗಳನ್ನು ಗೆದ್ದಿತ್ತು. ನಂತರ ನಡೆದ ಉಪಚುನಾವಣೆಯಲ್ಲಿ ಒಂದು ಸ್ಥಾನವನ್ನು ಕಳೆದುಕೊಂಡಿತು. ಹೀಗಾಗಿ 18 ಶಾಸಕರನ್ನು ಬಿಎಸ್‌ಪಿ ಹೊಂದಿತ್ತು. 2017ರ ಚುನಾವಣೆಯ ನಂತರ ಇದೂವರೆಗೂ 11 ಶಾಸಕರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ಇದೀಗ ಪಕ್ಷದ ಶಾಸಕರಾಗಿ ಕೇವಲ 07 ಮಂದಿ ಮಾತ್ರ ಉಳಿದಿದ್ದಾರೆ.

“ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಜನರು ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗುತ್ತಿದ್ದಾರೆ. ಏಕೆಂದರೆ ಮಾಯಾವತಿ ಮತ್ತು ಬಿಜೆಪಿಯ ದಬ್ಬಾಳಿಕೆಯ ಸ್ವರೂಪಕ್ಕಿಂತ ಸಮಾಜವಾದಿ ಪಕ್ಷವು ಭಿನ್ನವಾಗಿದೆ. ಬಿಎಸ್‌ಪಿ ಮತ್ತು ಬಿಜೆಪಿ ಶಾಸಕರು ತಮ್ಮನ್ನು ತಾವು ವ್ಯಕ್ತಪಡಿಸಿಕೊಳ್ಳಲು ಹೆದರುತ್ತಾರೆ, ಅದಕ್ಕಾಗಿಯೇ ಅವರು ಸಮಾಜವಾದಿ ಪಕ್ಷಕ್ಕೆ ಬರುತ್ತಿದ್ದಾರೆ” ಎಂದು ಸಮಾಜವಾದಿ ಪಕ್ಷದ ಶಾಸಕ ಇರ್ಫಾನ್ ಸೋಲಂಕಿ ಹೇಳಿದ್ದಾರೆ.

ಬಿಎಸ್‌ಪಿಯ ಶಾಸಕರ ಸೇರ್ಪಡೆಯಿಂದ ಸಮಾಜವಾದಿ ಪಕ್ಷಕ್ಕೆ ಲಾಭವಾಗಿದೆ. ಕಳೆದ ಎರಡು ವರ್ಷಗಳಲ್ಲಿ, ವಿಶೇಷವಾಗಿ 2019 ರಲ್ಲಿ ಎಸ್‌ಪಿ-ಬಿಎಸ್‌ಪಿ ಮೈತ್ರಿ ಶೋಚನೀಯವಾಗಿ ವಿಫಲವಾದ ನಂತರ, ಹಲವಾರು ಬಿಎಸ್‌ಪಿ ನಾಯಕರು ಸಮಾಜವಾದಿ ಪಕ್ಷಕ್ಕೆ ಸೇರಿಕೊಂಡಿದ್ದಾರೆ.


ಇದನ್ನೂ ಓದಿ: ಕೊರೊನಾ ನಿರ್ವಹಣೆ ಟೀಕೆಗಳಿಂದ ಬಚಾವಾಗಲು ಬಿಜೆಪಿಯ ಹೊಸ ಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...