Homeಮುಖಪುಟಉತ್ತರ ಪ್ರದೇಶ: ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಪ್ರಕಟ

ಉತ್ತರ ಪ್ರದೇಶ: ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಪ್ರಕಟ

- Advertisement -
- Advertisement -

ದೇಶದಲ್ಲೆ ಅತೀ ಹಚ್ಚು ಜನಸಂಖ್ಯೆ ಹೊಂದಿರುವ ರಾಜ್ಯವಾದ ಉತ್ತರ ಪ್ರದೇಶ ಜನಸಂಖ್ಯಾ ನಿಯಂತ್ರಣ ಮಸೂದೆಯ ಕರಡನ್ನು ಪ್ರಕಟಿಸಿದೆ. ‘‘ಉತ್ತರ ಪ್ರದೇಶ ಜನಸಂಖ್ಯೆ (ನಿಯಂತ್ರಣ, ಸ್ಥಿರೀಕರಣ ಮತ್ತು ಕಲ್ಯಾಣ) ಮಸೂದೆ- 2021” ಕರಡಿನ ಪ್ರಕಾರ, ಎರಡು ಮಕ್ಕಳ ನೀತಿಯನ್ನು ಉಲ್ಲಂಘಿಸುವವರಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸುವ, ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಅಥವಾ ಬಡ್ತಿ ಪಡೆಯುವ ಮತ್ತು ಯಾವುದೇ ರೀತಿಯ ಸರ್ಕಾರಿ ಸಬ್ಸಿಡಿ ಪಡೆಯುವುದನ್ನು ನಿರ್ಬಂಧಿಸಲಾಗುತ್ತದೆ.

ಉತ್ತರ ಪ್ರದೇಶ ರಾಜ್ಯ ಕಾನೂನು ಆಯೋಗ (ಯುಪಿಎಸ್ಎಲ್‌ಸಿ)ದ ವೆಬ್‌ಸೈಟ್‌‌, “ಉತ್ತರ ಪ್ರದೇಶದ ರಾಜ್ಯ ಕಾನೂನು ಆಯೋಗ ಜನಸಂಖ್ಯೆಯ ನಿಯಂತ್ರಣ, ಸ್ಥಿರೀಕರಣ ಮತ್ತು ಕಲ್ಯಾಣಕ್ಕಾಗಿ ಕಾರ್ಯನಿರ್ವಹಿಸುತ್ತಿದ್ದು, ಕರಡು ಮಸೂದೆಯನ್ನು ಸಿದ್ಧಪಡಿಸಿದೆ” ಎಂದು ಹೇಳಿದೆ.

ಇದನ್ನೂ ಓದಿ: ಕ್ರೀಡಾ ತರಬೇತುದಾರ ಪಿ. ನಾಗರಾಜನ್‌ ವಿರುದ್ಧ ಮತ್ತೆ 7 ಲೈಂಗಿಕ ದೌರ್ಜನ್ಯದ ದೂರು

ಎರಡು ಮಕ್ಕಳ ನೀತಿಯನ್ನು ಅಳವಡಿಸಿಕೊಳ್ಳುವವರಿಗೆ ಸರ್ಕಾರವು ಹಲವು ಪ್ರೋತ್ಸಾಹಕಗಳನ್ನೂ ಘೋಷಿಸಿದೆ. ನೀತಿಯನ್ನು ಅನುಸರಿಸುವ ಸರ್ಕಾರಿ ನೌಕರರು ಸಂಪೂರ್ಣ ಸೇವೆಯ ಸಮಯದಲ್ಲಿ ಎರಡು ಹೆಚ್ಚುವರಿ ಇಂಕ್ರಿಮೆಂಟ್‌ಗಳನ್ನು ಪಡೆಯಬಹುದಾಗಿದೆ. ಜಮೀನು ಅಥವಾ ಮನೆಯನ್ನು ಖರೀದಿಸಲು ಸಬ್ಸಿಡಿ ಪಡೆಯಬಹುದಾಗಿದೆ. ಶುಲ್ಕಗಳ ಮೇಲೆ ರಿಯಾಯಿತಿ ಪಡೆಯಬಹುದಾಗಿದೆ.

ಭತ್ಯೆ, ರಾಷ್ಟ್ರೀಯ ಪಿಂಚಣಿ ಯೋಜನೆಯಡಿ ನೌಕರರ ಭವಿಷ್ಯ ನಿಧಿಯಲ್ಲಿ (ಇಪಿಎಫ್) ಮೂರು ಶೇಕಡ ಹೆಚ್ಚಳದೊಂದಿಗೆ ಮಾತೃತ್ವ ಅಥವಾ ಪಿತೃತ್ವದ ರಜೆಯನ್ನು 12 ತಿಂಗಳು ಪಡೆಯಬಹುದಾಗಿದೆ.

ಇದನ್ನೂ ಓದಿ: ಆದಿತ್ಯನಾಥ್‌ ಸರ್ಕಾರದ ಕೊರೊನಾ ನಿರ್ವಹಣೆಯನ್ನು ಶ್ಲಾಘಿಸಿದ ಬಿಜೆಪಿ!

ಸರ್ಕಾರಿ ಸೇವೆಯಲ್ಲಿಲ್ಲದ ಆದರೆ ಎರಡು ಮಕ್ಕಳ ನೀತಿಯನ್ನು ಅನುಸರಿಸುವವರಿಗೆ ನೀರು ಮತ್ತು ವಿದ್ಯುತ್ ಬಿಲ್‌ಗಳು, ಮನೆ ತೆರಿಗೆ, ಗೃಹ ಸಾಲಗಳ ಮೇಲೆ ರಿಯಾಯಿತಿ ನೀಡಲು ಮಸೂದೆಯು ಪ್ರಸ್ತಾಪಿಸಿದೆ. ಮಹಿಳೆ ಹಾಗೂ ಪುರುಷರಿಬ್ಬರಿಗೂ ಸಂತಾನಹರಣ ಚಿಕಿತ್ಸೆಗೆ ಒಳಗಾಗಲು ಈ ಮಸೂದೆ ಉತ್ತೇಜಿಸುತ್ತದೆ.

ಕಾಯಿದೆಯ ಅನುಷ್ಠಾನದ ಉದ್ದೇಶಕ್ಕಾಗಿ ರಾಜ್ಯ ಜನಸಂಖ್ಯಾ ನಿಧಿಯನ್ನು ರಚಿಸಲಾಗುವುದು ಎಂದು ಸರ್ಕಾರ ಹೇಳಿದೆ. ಸರ್ಕಾರದ ಕರ್ತವ್ಯಗಳನ್ನು ಪಟ್ಟಿ ಮಾಡಿ, ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಾತೃತ್ವ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಕರಡು ಮಸೂದೆಯಲ್ಲಿ ಹೇಳಲಾಗಿದೆ.

ಕರಡು ಮಸೂದೆಗೆ ಸಾರ್ವಜನಿಕರ ಸಲಹೆಗಳನ್ನು ಆಹ್ವಾನಿಸಲಾಗಿದ್ದು, ಸಲಹೆಗಳನ್ನು ನೀಡಲು ಜುಲೈ 19 ಕೊನೆಯ ದಿನವಾಗಿದೆ.

ಇದನ್ನೂ ಓದಿ: ‘ಹಸಿವೆಂಬ ವೈರಸ್‌’ಗೆ ವಿಶ್ವದಲ್ಲಿ ಪ್ರತಿ ನಿಮಿಷಕ್ಕೆ 11 ಜನರು ಬಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...