ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಲೋಧೇಶ್ವರ ಮಹಾದೇವ್ ದೇವಸ್ಥಾನಕ್ಕೆ ದೇವರ ದರ್ಶನಕ್ಕೆ ತೆರಳಿದ್ದ 27 ವರ್ಷದ ದಲಿತ ಯುವಕನನ್ನು ಅರ್ಚಕರು ತಡೆದಿದ್ದಾರೆ ಎಂದು ತಿಳಿದುಬಂದಿದೆ. ಅರ್ಚಕ ಸೇರಿದಂತೆ ಆತನ ಕುಟುಂಬದ ಸದಸ್ಯರು ಯುವಕನನ್ನು ಥಳಿಸಿ ಜಾತಿ ನಿಂದನೆ ಮಾಡಿದ್ದಾರೆ.
ಆದರೆ, ಅರ್ಚಕ ಆದಿತ್ಯ ತಿವಾರಿ ತಮ್ಮ ಮೇಲಿನ ಆರೋಪ ನಿರಾಕರಿಸಿದ್ದು, ತಮ್ಮ ಸೊಸೆಗೆ ಆ ವ್ಯಕ್ತಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದಾರೆ. ದಲಿತ ಯುವಕ ಶೈಲೇಂದ್ರನನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ರಾಮನಗರ ಪೊಲೀಸ್ ಠಾಣೆಯ ಎಸ್‌ಎಚ್‌ಒ ಅನಿಲ್ ಕುಮಾರ್ ಪಾಂಡೆ ಶುಕ್ರವಾರ ತಿಳಿಸಿದ್ದಾರೆ. ದೇವಾಲಯದ ಒಳಗೆ ನಡೆದ ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಬಳಿ,ದೇವಾಲಯದ ಅರ್ಚಕರಿಂದ ಹೇಳಿಕೆ ಪಡೆದ ನಂತರ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದರು.
ಶೈಲೇಂದ್ರ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ, ಅಖಿಲ್ ತಿವಾರಿ, ಶುಭಂ ತಿವಾರಿ ಮತ್ತು ಆದಿತ್ಯ ತಿವಾರಿ ಅವರು ದೇವಸ್ಥಾನದಲ್ಲಿ ಪೂಜೆ ಮಾಡುವುದನ್ನು ತಡೆದಿದ್ದಾರೆ ಎಂದು ಹೇಳಿಕೊಂಡಿದ್ದಾರೆ.
ತಮಿಳುನಾಡು| ದಲಿತರಿಗೆ ವಿಭೂತಿ ನೀಡಲು ನಿರಾಕರಿಸಿದ ದೇವಾಲಯದ ಅರ್ಚಕ; ಎಫ್‌ಐಆರ್ ದಾಖಲು


