Homeಮುಖಪುಟಉತ್ತರ ಪ್ರದೇಶ: ಮನೆಗೆ ನುಗ್ಗಿ ಯುವತಿಯ ಮೇಲೆ ಅತ್ಯಾಚಾರವೆಸಗಿ, ಬೆದರಿಕೆ ಹಾಕಿದ ಪಿಎಸ್‌ಐ

ಉತ್ತರ ಪ್ರದೇಶ: ಮನೆಗೆ ನುಗ್ಗಿ ಯುವತಿಯ ಮೇಲೆ ಅತ್ಯಾಚಾರವೆಸಗಿ, ಬೆದರಿಕೆ ಹಾಕಿದ ಪಿಎಸ್‌ಐ

- Advertisement -
- Advertisement -

ಉತ್ತರ ಪ್ರದೇಶದ ಆಗ್ರಾ ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಒಬ್ಬರು ಮನೆಗೆ ನುಗ್ಗಿ 20 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೇ, ಈ ವಿಷಯವನ್ನು ಬಹಿರಂಗಪಡಿಸಿದರೆ ತಂದೆಯ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಜೈಲಿಗೆ ತಳ್ಳುವುದಾಗಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ಸಧ್ಯ ಆರೋಪಿ ಇನ್‍ಸ್ಪೆಕ್ಟರ್‌ನನ್ನು ಅಮಾನತುಗೊಳಿಸಿ, ಬಂಧಿಸಲಾಗಿದೆ.

ಆರೋಪಿ ಪಿಎಸ್‌ಐ ಸಂದೀಪ್ ಕುಮಾರ್ (34) ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಲಾಗಿದೆ. ಯುವತಿಯ ಆಕ್ರಂದನ ಕೇಳಿ ಕುಟುಂಬ ಸದಸ್ಯರು ಮತ್ತು ಗ್ರಾಮಸ್ಥರು ಒಟ್ಟುಗೂಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಸಂದೀಪ್ ಕುಮಾರ್‌ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಪೊಲೀಸ್ ಅಧಿಕಾರಿ ಒಳ ಉಡುಪಿನಲ್ಲಿರುವ ಹಾಗೂ ಹಗ್ಗದಿಂದ ಕಟ್ಟಿ ಆತನನ್ನು ಗ್ರಾಮಸ್ಥರು ಥಳಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆರೋಪಿ ಅಧಿಕಾರಿಯನ್ನು ವೈದ್ಯಕೀಯ ಚಿಕಿತ್ಸೆಗಾಗಿ ಎನ್.ಎನ್. ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ. ವಿಡಿಯೊಗಳನ್ನು ಪರಿಶೀಲಿಸಿದ ಪೊಲೀಸ್ ಆಯುಕ್ತ ಪ್ರೀತೀಂದರ್ ಸಿಂಗ್, ಆರೋಪಿ ಪಿಎಸ್‍ಐಯನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ.

ಸಧ್ಯ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376 ಮತ್ತು 452ರ ಅನ್ವಯ ಎಫ್‍ಐಆರ್ ದಾಖಲಿಸಲಾಗಿದೆ. ಭಾನುವಾರ ರಾತ್ರಿ 11 ಗಂಟೆಯ ಸುಮಾರಿಗೆ ಪಿಎಸ್‍ಐ ಹಾಗೂ ಒಬ್ಬ ಪೊಲೀಸ್ ಯುವತಿಯ ಮನೆಗೆ ಬಂದು ಬಾಗಿಲು ಬಡಿದಿದ್ದಾರೆ. ನಾವು ವಿಚಾರಣೆಗೆ ಬಂದಿದ್ದಾಗಿ ಹೇಳಿ ತಂದೆಯ ಬಗ್ಗೆ ವಿಚಾರಿಸಿದ್ದಾರೆ. ಈ ಹಿಂದೆ ಕಿರುಕುಳ ನೀಡಿದ ನಿದರ್ಶನಗಳ ಆಧಾರದಲ್ಲಿ ಬಾಗಿಲು ತೆರೆಯಲು ಯುವತಿ ನಿರಾಕರಿಸಿದಳು. ಆಗ ಸಂದೀಪ್ ಛಾವಣಿಯ ಮೂಲಕ ಜಿಗಿದು ಮನೆಗೆ ನುಗ್ಗಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಗ್ರಾಮಸ್ಥರು ಠಾಣೆಯ ಎದುರು ಬೃಹತ್ ಪ್ರತಿಭಟನೆ ನಡೆಸಿ, ಅಧಿಕಾರಿಯನ್ನು ಅಮಾನತುಗೊಳಿಸುವಂತೆ ಪಟ್ಟು ಹಿಡಿದರು.

ಈ ಬಗ್ಗೆ ಮಾತನಾಡಿದ ಡಿಸಿಪಿ ಸೋನಮ್ ಕುಮಾರ್, ”ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಜೈಲಿಗೆ ಕಳುಹಿಸಲಾಗಿದೆ. ಸಂದೀಪ್ ವಿರುದ್ಧ ಇಲಾಖಾ ತನಿಖೆಗೂ ಆದೇಶ ನೀಡಲಾಗಿದೆ” ಎಂದು ತಿಳಿಸಿದ್ದಾರೆ.

”ಗಸ್ತು ತಿರುಗುವ ನೆಪದಲ್ಲಿ ಗ್ರಾಮಕ್ಕೆ ಭೇಟಿ ನೀಡುಯತ್ತಿರುವ ಸಂದೀಪ್, ಎರಡು ತಿಂಗಳಿಂದ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ. ಇದಕ್ಕೆ ಆಕ್ಷೇಪಿಸಿದಾಗ, ಆಕೆಯ ಮಾವನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ನಾವು ಆತನನ್ನು ಹಿಡಿದಾಗ ಆತ ಪಾನಮತ್ತನಾಗಿದ್ದನು” ಎಂದು ಪಕ್ಕದ ಮನೆಯವರು ಆಪಾದಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಆಕೆಯ ತಂದೆಯ ಹತ್ಯೆ; ಬಿಜೆಪಿ ಮುಖಂಡನ ವಿರುದ್ಧ ಎಫ್‌ಐಆರ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದಲಿತ ಕುಟುಂಬದ ಮೂವರ ಹತ್ಯೆ ಪ್ರಕರಣ: ಪೊಲೀಸರ ವರ್ಗಾವಣೆ

0
ಉತ್ತರಪ್ರದೇಶದ ಕೌಶಂಬಿ ಜಿಲ್ಲೆಯ ಸಂದೀಪನ್ ಘಾಟ್ ಪ್ರದೇಶದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿ ದಲಿತ ಕುಟುಂಬದ ಮೂವರು ಸದಸ್ಯರ ಹತ್ಯೆ ನಡೆದಿದ್ದು, ಇದೀಗ ಸ್ಥಳೀಯ ಪೊಲೀಸ್ ಠಾಣಾಧಿಕಾರಿ ಮತ್ತು ಹೊರಠಾಣೆ ಪ್ರಭಾರ ಅಧಿಕಾರಿಯನ್ನು ವರ್ಗಾಯಿಸಲಾಗಿದೆ. ಸಾಂದೀಪನ್...