Homeಮುಖಪುಟಉತ್ತರ ಪ್ರದೇಶ | ರೈಲ್ವೆ ನಿಲ್ದಾಣದ ಲಿಂಟೆಲ್ ಕುಸಿತ; 28 ಜನರ ರಕ್ಷಣೆ

ಉತ್ತರ ಪ್ರದೇಶ | ರೈಲ್ವೆ ನಿಲ್ದಾಣದ ಲಿಂಟೆಲ್ ಕುಸಿತ; 28 ಜನರ ರಕ್ಷಣೆ

- Advertisement -
- Advertisement -

ಉತ್ತರ ಪ್ರದೇಶದ ಕನೌಜ್‌ ರೈಲು ನಿಲ್ದಾಣದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದ ಪರಿಣಾಮ ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅದಾಗ್ಯೂ, ಆರು ಜನರು ಅಪಾಯದಿಂದ ಪಾರಾಗಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಉತ್ತರ ಪ್ರದೇಶ

ಎಎನ್‌ಐ ಜೊತೆ ಮಾತನಾಡಿದ ಕಾನ್ಪುರ ಆಯುಕ್ತ ಕೆ. ವಿಜಯೇಂದ್ರ ಪಾಂಡಿಯನ್, ಘಟನೆಯಲ್ಲಿ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಘಟನೆಯಲ್ಲಿ ರಕ್ಷಿಸಲ್ಪಟ್ಟ 28 ಜನರಲ್ಲಿ 15 ಜನರನ್ನು ಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.

“ಸುಮಾರು 28 ಜನರನ್ನು ರಕ್ಷಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 15 ಜನರನ್ನು ಬಿಡುಗಡೆ ಮಾಡಲಾಗಿದೆ. 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಆದರೆ ಅಪಾಯದಿಂದ ಪಾರಾಗಿದ್ದಾರೆ. ತಲೆಗೆ ಯಾವುದೇ ಗಾಯಗಳಾಗಿಲ್ಲ. ಕೆಲವರಿಗೆ ಮುರಿತಗಳು ಉಂಟಾಗಿವೆ, ಅವರನ್ನು ನಿಗಾದಲ್ಲಿ ಇರಿಸಲಾಗಿದೆ” ಎಂದು ಅವರು ಹೇಳಿದ್ದಾರೆ. ಉತ್ತರ ಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾವು ಡ್ರೋನ್ ಮತ್ತು ಹಸ್ತಚಾಲಿತ ರಕ್ಷಣಾ ಕಾರ್ಯಾಚರಣೆ ಮಾಡಿದ್ದೇವೆ. SDRF ಸ್ನಿಪ್ಪರ್ ನಾಯಿಗಳನ್ನು ಸೇವೆಗೆ ನಿಯೋಜಿಸಲಾಗಿದೆ. ಇನ್ನೂ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಸ್ವಲ್ಪ ಸಮಯದಲ್ಲಿ ಅವಶೇಷಗಳನ್ನು ತೆರವುಗೊಳಿಸಲಾಗುವುದು. 28 ಜನರನ್ನು ಗುರುತಿಸಲಾಗಿದೆ” ಎಂದು ಪಾಂಡಿಯನ್ ಹೇಳಿದ್ದಾರೆ.

ಕನೌಜ್‌ ರೈಲು ನಿಲ್ದಾಣದಲ್ಲಿ ನಿರ್ಮಾಣ ಹಂತದ ಲಿಂಟಲ್ ಕುಸಿದ ಬಗ್ಗೆ ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಮತ್ತು ಸಂಸದ ಅಖಿಲೇಶ್ ಯಾದವ್ ಅವರು, ರಾಜ್ಯದ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಸಂತ್ರಸ್ತರಿಗೆ ಗರಿಷ್ಠ ಮಟ್ಟದ ಸಹಾಯ ನೀಡಬೇಕು ಎಂದು ಆಗ್ರಹಿದ್ದಾರೆ.

“ಕನೌಜ್‌ನಲ್ಲಿ ನಡೆದ ಘಟನೆ ತುಂಬಾ ದುಃಖಕರವಾಗಿದೆ. ನಿರ್ಮಾಣದ ಸಮಯದಲ್ಲಿ ಸುರಕ್ಷತೆಯನ್ನು ಕಾಪಾಡಿಕೊಳ್ಳಬೇಕಾಗಿತ್ತು, ಅದನ್ನು ನಿರ್ಲಕ್ಷಿಸಲಾಯಿತು, ಹಾಗಾಗಿ ಈ ಘಟನೆ ಸಂಭವಿಸಿದೆ. ಎಲ್ಲಾ ಕಾರ್ಮಿಕರು ಸುರಕ್ಷಿತವಾಗಿದ್ದಾರೆ ಎಂದು ನಾವು ಭಾವಿಸುತ್ತೇವೆ. ಇದು ಬಿಜೆಪಿಯ ಕಡೆಯಿಂದ ನಿರ್ಲಕ್ಷ್ಯ ಮತ್ತು ಭ್ರಷ್ಟಾಚಾರದ ಪ್ರಕರಣವಾಗಿದೆ” ಎಂದು ಅಖಿಲೇಶ್ ಹೇಳಿದ್ದಾರೆ.

“ಗುತ್ತಿಗೆದಾರರಿಗೆ ಕೆಲಸ ಹಂಚಿಕೆ ಮಾಡಿದಾಗ ಅದನ್ನು ಎರಡು ಬಾರಿ ಹೊರಗುತ್ತಿಗೆ ನೀಡಲಾಗುತ್ತದೆ. ನಂತರ ಬಿಜೆಪಿಯ ಜನರು ತಮಗೆ ಲಾಭವಾಗುವವರೆಗೆ ಕೆಲಸ ಮುಂದುವರಿಯುವುದಿಲ್ಲ ಎಂದು ಒತ್ತಡ ಹೇರುವುದನ್ನು ನಾವು ನೋಡುತ್ತಿರುವುದು ಇದೇ ಮೊದಲು. ಇದರ ಪರಿಣಾಮವಾಗಿ, ಗುತ್ತಿಗೆದಾರರು ಗುಣಮಟ್ಟದೊಂದಿಗೆ ರಾಜಿ ಮಾಡಿಕೊಳ್ಳಬೇಕಾಗುತ್ತದೆ” ಎಂದು ಅವರು ಉಲ್ಲೇಖಿಸಿದ್ದಾರೆ.

“ಗುತ್ತಿಗೆದಾರರು ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬೇಕಾಗಿದೆ ಮತ್ತು ಸಮರ್ಪಕ ಸುರಕ್ಷತಾ ಕ್ರಮಗಳು ಅಸ್ತಿತ್ವದಲ್ಲಿಲ್ಲ. ಇಂತಹ ಘಟನೆಗಳು ನಡೆಯುತ್ತಿರುವುದರಿಂದ ಗುಣಮಟ್ಟ ಹದಗೆಟ್ಟಿದೆ. ಇದು ಸರ್ಕಾರದ ಕಡೆಯಿಂದ ಸಂಭವಿಸಿದ ವಿಫಲತೆಯಾಗಿದೆ. ಎಲ್ಲಾ ಸಂತ್ರಸ್ತರಿಗೆ ಸರ್ಕಾರವು ಎಲ್ಲಾ ವೈದ್ಯಕೀಯ ಸೌಲಭ್ಯಗಳು ಮತ್ತು ಇತರ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಬೇಕು ಎಂದು ನಾವು ಒತ್ತಾಯಿಸುತ್ತೇವೆ. ಜೊತೆಗೆ, ಕಾರ್ಮಿಕರಿಗೆ ಗರಿಷ್ಠ ನೆರವು ನೀಡಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದು ಅವರು ಆಗ್ರಹಿಸಿದ್ದಾರೆ.

ಶನಿವಾರ, ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. “ಅಲ್ಲಿ ತಕ್ಷಣ ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯಬೇಕು ಎಂಬುದು ಸರ್ಕಾರದ ಸೂಚನೆಯಾಗಿದೆ. ಅಪಘಾತದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರೆಂದು ಕಂಡುಬಂದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಬಿಜೆಪಿ ಅಧಿಕಾರಕ್ಕೆ ಬಂದರೆ ದೆಹಲಿಯ ಎಲ್ಲ ಸ್ಲಂಗಳನ್ನು ಕೆಡವಲಿದೆ: ಅರವಿಂದ್ ಕೇಜ್ರಿವಾಲ್ ಆರೋಪ

ಬಿಜೆಪಿ ಅಧಿಕಾರಕ್ಕೆ ಬಂದರೆ ದೆಹಲಿಯ ಎಲ್ಲ ಸ್ಲಂಗಳನ್ನು ಕೆಡವಲಿದೆ: ಅರವಿಂದ್ ಕೇಜ್ರಿವಾಲ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...

ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಎರಡು ವಾರಗಳ ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಕದನ ವಿರಾಮವು ಕೇವಲ ಇರಾನ್‌ಗೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ತಕ್ಷಣವೇ ಹಾರ್ಮುಝ್...

ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ : ಇರಾನ್ ಭರವಸೆ

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮದ ಹಿನ್ನೆಲೆ, ಹಾರ್ಮುಝ್ ಜಲಸಂಧಿ  ಮೂಲಕ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡುವುದಾಗಿ ಇರಾನ್ ಭರವಸೆ ನೀಡಿದೆ. ವಿಶ್ವದ ಒಟ್ಟು ಪೆಟ್ರೋಲಿಯಂ ರಫ್ತಿನ...

ಇರಾನ್ ಮೇಲಿನ ದಾಳಿ ಸ್ಥಗಿತ : ಎರಡು ವಾರಗಳ ಕದನ ವಿರಾಮ ಘೋಷಿಸಿದ ಟ್ರಂಪ್

ಇರಾನ್ ಮೇಲೆ ನಡೆಸುತ್ತಿರುವ ಬಾಂಬ್ ದಾಳಿ ಹಾಗೂ ಮಿಲಿಟರಿ ಕಾರ್ಯಾಚರಣೆಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಭಾರತೀಯ ಕಾಲಮಾನ ಏ.8) ಹೇಳಿದ್ದಾರೆ. ಪಾಕಿಸ್ತಾನ...

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...