Homeಮುಖಪುಟಸ್ಮಾರ್ಟ್ ಸಿಟಿ ರ್‍ಯಾಕಿಂಗ್‌ನಲ್ಲಿ ಉತ್ತರಪ್ರದೇಶಕ್ಕೆ ಮೊದಲ ಸ್ಥಾನ!: ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‍

ಸ್ಮಾರ್ಟ್ ಸಿಟಿ ರ್‍ಯಾಕಿಂಗ್‌ನಲ್ಲಿ ಉತ್ತರಪ್ರದೇಶಕ್ಕೆ ಮೊದಲ ಸ್ಥಾನ!: ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‍

- Advertisement -
- Advertisement -

ಶುಕ್ರವಾರ, ಒಕ್ಕೂಟ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಸ್ಮಾರ್ಟ್‍ಸಿಟಿ ಮಿಷನ್‍ ಯೋಜನೆ ಅಡಿ ಪ್ರಕಟಿಸಿದ ವರದಿಯಲ್ಲಿ ಉತ್ತರ ಪ್ರದೇಶವು ಅತ್ಯುತ್ತಮ ರಾಜ್ಯ ಸ್ಥಾನ ಪಡೆದಿದೆ. ನಗರಗಳ ಪೈಕಿ ಇಂದೋರ್ ಮತ್ತು ಸೂರತ್ ಜಂಟಿಯಾಗಿ ಮೊದಲ ಸ್ಥಾನ ಹಂಚಿಕೊಂಡಿವೆ. ಇದರ ಹಿಂದೆಯೇ ಇವತ್ತು ನೆಟ್ಟಿಗರು ಈ ವರದಿ ಕುರಿತು ಟ್ರೋಲ್‍ ಮಾಡುತ್ತಿದ್ದಾರೆ.

ಸ್ಮಾರ್ಟ್ ಸಿಟೀಸ್ ಮಿಷನ್, ಅಮೃತ್‍ ಯೋಜನೆ ಮತ್ತು ಪ್ರಧಾನ್ ಮಂತ್ರಿ ಆವಾಸ್ ಯೋಜನೆಗಳ ಆರನೇ ವಾರ್ಷಿಕೋತ್ಸವವನ್ನು ಗುರುತಿಸುವ ಒಂದು ವರ್ಚುವಲ್ ಕಾರ್ಯಕ್ರಮದಲ್ಲಿ,  2020ರ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ರಾಜ್ಯಗಳ ಪೈಕಿ ಉತ್ತರ ಪ್ರದೇಶವು  ನಂಬರ್‌ 1 ಎಂದೂ, ಮಧ್ಯಪ್ರದೇಶ ಎರಡನೇ ಮತ್ತು ತಮಿಳುನಾಡು ಮೂರನೇ ಸ್ಥಾನದಲ್ಲಿವೆ ಎಂದು ಪ್ರಕಟಣೆ ತಿಳಿಸಿದೆ ಎಂದು ದಿ ಹಿಂದೂ ವರದಿ ಮಾಡಿದೆ.

‘ಪ್ರಸ್ತಾವಿತ ಯೋಜನೆಗಳ ಒಟ್ಟು ಮೌಲ್ಯದ ಪೈಕಿ ಶೇ. 22 ವೆಚ್ಚವಾಗಿದೆ. ಉದ್ದೇಶಿತ 100  ಸ್ಮಾರ್ಟ್ ನಗರಗಳ ಪೈಕಿ ಶೇ.52 ಈವರೆಗೆ ಪೂರ್ಣಗೊಂಡಿವೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಕೋವಿಡ್‍ ಕಾರಣದಿಂದಾಗಿ ಎದುರಾದ ಸವಾಲುಗಳ ಹೊರತಾಗಿಯೂ, ಸ್ಮಾರ್ಟ್ ಸಿಟೀಸ್ ಮಿಷನ್‌ನಲ್ಲಿ ಸರಾಸರಿ ಮಾಸಿಕ ಖರ್ಚು ಕಳೆದ ವರ್ಷದಲ್ಲಿ ದ್ವಿಗುಣಗೊಂಡಿದೆ ಎಂದು ಸಚಿವಾಲಯ ತಿಳಿಸಿದೆ.

ನೆಟ್ಟಿಗರ ಟ್ರೋಲ್‍

ಉತ್ತರಪ್ರದೇಶ ನಂಬರ್ 1 ಎಂಬ ವಿಷಯವೇ ನೆಟ್ಟಿಗರ ಟ್ರೋಲ್‍ಗೆ ಕಾರಣವಾಗಿದೆ. ‘ಹೋ ಯುಪಿ ಚುನಾವಣೆ ಸಲುವಾಗಿ ಈ ನಿರ್ಧಾರವೇ?’ ಎಂದು ಕೆಲವರು, ‘ಯುಪಿಯಲ್ಲಿ ನಗರ ಮೂಲಭೂತ ಸೌಕರ್ಯದ ಹೆಸರಲ್ಲಿ ಸಿಕ್ಕಾಪಟ್ಟೆ ಏನೋ ನಡೆದಿದೆ’ ಎಂದು  ಕೆಲವರು ಅಪಹಾಸ್ಯ  ಮಾಡಿದ್ದಾರೆ.

ಮೋದಿಯವರು ಇನ್ನು ಒಂದೂ ಸ್ಮಾರ್ಟ್ ಸಿಟಿ ನಿರ್ಮಾಣ ಮಾಡಿಲ್ಲ. ಆದರೆ ಪ್ರತಿವರ್ಷ ನೂರು ನಗರಗಳಿಗೆ ಪ್ರಶಸ್ತಿ ನೀಡುತ್ತಾರೆ. ಇನ್ನು ಯುಪಿ ಸಿಎಂ ಯೋಗಿ ಹೆಣಗಳನ್ನು ಗಂಗೆಯಲ್ಲಿ ಮುಳುಗಿಸುವ ‘ಸ್ಮಾರ್ಟ್’ ಐಡಿಯಾ ಕಂಡುಕೊಂಡಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಶ್ರೀವತ್ಸ ಲೇವಡಿ ಮಾಡಿದ್ದಾರೆ.


ಇದನ್ನೂ ಓದಿ: ತುಮಕೂರು ಸ್ಮಾರ್ಟ್‌ ಸಿಟಿ: ಅಗೆದದ್ದು ಆಯ್ತು, ಈಗ ತೇಪೆ ಕೆಲಸ. ಅದು ನೆಪಮಾತ್ರಕ್ಕೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...