Homeಮುಖಪುಟಉತ್ತರ ಪ್ರದೇಶ: ನವರಾತ್ರಿ ಪೂಜೆ ಮುಗಿಸಿ ಮನೆಗೆ ಮರಳುತ್ತಿದ್ದ ಯುವತಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶ: ನವರಾತ್ರಿ ಪೂಜೆ ಮುಗಿಸಿ ಮನೆಗೆ ಮರಳುತ್ತಿದ್ದ ಯುವತಿಯ ಮೇಲೆ ಅತ್ಯಾಚಾರ

- Advertisement -
- Advertisement -

ನವರಾತ್ರಿ ಪೂಜೆ ಮುಗಿಸಿ ಮನೆಗೆ ವಾಪಸಾಗುತ್ತಿದ್ದ 19 ಹರೆಯದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ಉತ್ತರಪ್ರದೇಶದ ಮಹೊಬಾ ಜಿಲ್ಲೆಯ ಪಾನ್ವಾಡಿ ಪ್ರದೇಶದಲ್ಲಿ ವರದಿಯಾಗಿದೆ.

ಬುಧವಾರ ರಾತ್ರಿ ನವರಾತ್ರಿ ಹಬ್ಬದ ದುರ್ಗಾ ಪೂಜೆಯಲ್ಲಿ ಭಾಗವಹಿಸಿ ವಾಪಸಾಗುತ್ತಿದ್ದ ಯುವತಿಯ ಮೇಲೆ ಮೂವರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಲಾಕಪ್ ಡೆತ್: ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಪ್ರಕರಣ ದಾಖಲು!

“ಪನ್ವಾಡಿ ಪ್ರದೇಶದಲ್ಲಿ ಅತ್ಯಾಚಾರ ಪ್ರಕರಣ ವರದಿಯಾಗಿದ್ದು. ಪೊಲೀಸರು ಕೂಡಲೇ ಕ್ರಮ ಕೈಗೊಂಡಿದ್ದಾರೆ ಮತ್ತು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಶ್ರೀವಾಸ್ತವ ಹೇಳಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌‌ಪ್ರೆಸ್ ವರದಿ ಮಾಡಿದೆ.

ಆರೋಪಿಗಳನ್ನು ಬುಧವಾರ ರಾತ್ರಿ ಬಂಧಿಸಲಾಗಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶವನ್ನು ಬಿಜೆಪಿ ’ಅಪರಾಧ ಪ್ರದೇಶ’ವನ್ನಾಗಿ ಮಾಡಿದೆ: ಪ್ರಿಯಾಂಕ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್, ಕೆ. ಕವಿತಾಗೆ ನೋ ರಿಲೀಫ್‌: ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಣೆ

0
ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು...