- Advertisement -
- Advertisement -
ಕಳೆದ ವಾರ ಉತ್ತರ ಪ್ರದೇಶದ ಪೊಲೀಸ್ ಠಾಣೆಯಲ್ಲಿ 9 ಮಂದಿಯನ್ನು ಇಬ್ಬರು ಪೊಲೀಸರು ಅಮಾನವೀಯವಾಗಿ ಹೊಡೆಯುತ್ತಿರುವ ವಿಡಿಯೋವನ್ನು ಬಿಜೆಪಿ ಶಾಸಕ ಶಲಭ್ ಮಣಿ ತ್ರಿಪಾಠಿ ತಮ್ಮ ಟ್ವಿಟ್ಟರ್‌ನಲ್ಲಿ “ಗಲಭೆಕೋರರಿಗೆ ರಿಟರ್ನ್ ಗಿಫ್ಟ್” ಎಂದು ಹಂಚಿಕೊಂಡಿದ್ದರು. ಈ ವಿಡಿಯೋ ಬಗ್ಗೆ ನಮಗೆ ಯಾವುದೇ ಮಾಹಿತಿಯಿಲ್ಲ ಎಂದು ಪೊಲೀಸರು ಘಟನೆಯನ್ನು ನಿರಾಕರಿಸಿದ್ದರು.
ಈಗ ಈ ಪ್ರಕರಣಕ್ಕೆ ಹೊಸ ರೂಪ ಬಂದಿದ್ದು, ವಿಡಿಯೋ ಕ್ಲಿಪ್‌ನ ಸತ್ಯಾಸತ್ಯತೆಯನ್ನು ಪರಿಶೀಲಿಸಲು ವಿಚಾರಣೆ ನಡೆಸುತ್ತಿದ್ದೇವೆ. ಅಗತ್ಯವಿದ್ದರೇ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಸಹರಾನ್‌ಪುರ್ ನಗರ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ನಿನ್ನೆಯವರೆಗೂ ವಿಡಿಯೋ ಬಗ್ಗೆ ನಮಗೆ ಯಾವುದೇ ಮಾಹಿತಿಯಿಲ್ಲ. ವಿಡಿಯೋ ಎಲ್ಲಿಯದು ಎಂದು ಗೊತ್ತಿಲ್ಲ. ಯಾವುದೇ ದೂರುಗಳು ಬಂದರೆ ವಿಚಾರಿಸುತ್ತೇವೆ ಎಂದು ಹೇಳಿದ್ದರು.
“ವೀಡಿಯೊದ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಮತ್ತು ಅಗತ್ಯವಿದ್ದರೆ ಕ್ರಮ ತೆಗೆದುಕೊಳ್ಳಲು ನಗರದ ವರಿಷ್ಠಾಧಿಕಾರಿ ವಿಚಾರಣೆ ನಡೆಸುತ್ತಾರೆ” ಎಂದು ಹಿರಿಯ ಪೊಲೀಸ್ ಅಧೀಕ್ಷಕ ಆಕಾಶ್ ತೋಮರ್ ಅವರನ್ನು NDTV ಉಲ್ಲೇಖಿಸಿದೆ.
ಇದನ್ನೂ ಓದಿ: ’ಕೆಡವುವಿಕೆ ಪ್ರತಿಕಾರವಾಗಿರಬಾರದು’: ಬುಲ್ಡೋಜರ್ ದಾಳಿ ನಡೆಸಿದ್ದ ಯುಪಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್
ಪೊಲೀಸರು ಅಮಾನುಷವಾಗಿ ಹಲ್ಲೆ ಮಾಡುತ್ತಿರುವ ವಿಡಿಯೋವನ್ನು ಉತ್ತರ ಪ್ರದೇಶದ ಬಿಜೆಪಿ ಶಾಸಕ ಶಲಭ್ ಮಣಿ ತ್ರಿಪಾಠಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ, ಇದರಲ್ಲಿ ಪೊಲೀಸರು “ಗಲಭೆಕೋರರಿಗೆ ರಿಟರ್ನ್ ಗಿಫ್ಟ್” ಎಂದು ಬರೆದಿದ್ದರು. ಆದರೆ, ಯಾರೂ ಯಾವುದೇ ದೂರು ದಾಖಲಿಸದ ಕಾರಣ ಪ್ರಕರಣದಲ್ಲಿ ಯಾವುದೇ ತನಿಖೆ ನಡೆದಿಲ್ಲ ಎಂದು ರಾಜೇಶ್ ಕುಮಾರ್ ಹೇಳಿದ್ದರು.
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ವಿಡಿಯೋದಲ್ಲಿ, ಇಬ್ಬರು ಪೊಲೀಸರು 9 ಜನರನ್ನು ಲಾಠಿಯಿಂದ ಅಮಾನವೀಯವಾಗಿ, ಮನಬಂದಂತೆ ಥಳಿಸುತ್ತಿದ್ದಾರೆ. ಒಂಬತ್ತು ಮಂದಿ ಕೈ ಮುಗಿದ್ದು ಬೇಡಿಕೊಂಡರು ಬಿಡದೆ ಲಾಠಿಯಿಂದ ಥಳಿಸಲಾಗುತ್ತಿದೆ. ಪೊಲೀಸರ ವರ್ತನೆಗೆ ಜನರು ಆಕ್ರೋಶ ಹೊರಹಾಕಿದ್ದರು.
ಎನ್‌ಡಿಟಿವಿ ತನಿಖೆ ನಡೆಸಿದ ಒಂದು ದಿನದ ಬಳಿಕ ಹಿರಿಯ ಪೊಲೀಸ್ ಅಧಿಕ್ಷಕ ಆಕಾಶ್ ತೋಮರ್ ಅವರ ಹೇಳಿಕೆ ಬಂದಿವೆ. ಉತ್ತರ ಪ್ರದೇಶವು ದೇಶದಲ್ಲೇ ಅತಿ ಹೆಚ್ಚು ಲಾಕಪ್ ಡೆತ್‌ಗಳಲ್ಲಿ ಮೊದಲ ಸ್ಥಾನದಲ್ಲಿದೆ.
बलवाइयों को “रिटर्न गिफ़्ट” !! pic.twitter.com/6qQo74SNUj
— Dr. Shalabh Mani Tripathi (@shalabhmani) June 11, 2022
ಇದನ್ನೂ ಓದಿ: ಯುಪಿ ಪೊಲೀಸರಿಂದ ಅಮಾನವೀಯ ಹಲ್ಲೆ : ಮಾಹಿತಿಯಿಲ್ಲ ಎಂದ ಪೊಲೀಸರು, ದೂರು ನೀಡಲು ಹೆದರುತ್ತಿರುವ ಕುಟುಂಬಗಳು


