Homeಮುಖಪುಟಯುಪಿ ಪೊಲೀಸರಿಂದ ಹಲ್ಲೆ ಕೇಸ್: ನಿನ್ನೆ ನಿರಾಕರಣೆ, ಇಂದು ವಿಚಾರಣೆ ನಡೆಸುತ್ತಿದ್ದೇವೆ ಎಂದ ಪೊಲೀಸರು

ಯುಪಿ ಪೊಲೀಸರಿಂದ ಹಲ್ಲೆ ಕೇಸ್: ನಿನ್ನೆ ನಿರಾಕರಣೆ, ಇಂದು ವಿಚಾರಣೆ ನಡೆಸುತ್ತಿದ್ದೇವೆ ಎಂದ ಪೊಲೀಸರು

- Advertisement -
- Advertisement -
ಕಳೆದ ವಾರ ಉತ್ತರ ಪ್ರದೇಶದ ಪೊಲೀಸ್‌ ಠಾಣೆಯಲ್ಲಿ 9 ಮಂದಿಯನ್ನು ಇಬ್ಬರು ಪೊಲೀಸರು ಅಮಾನವೀಯವಾಗಿ ಹೊಡೆಯುತ್ತಿರುವ ವಿಡಿಯೋವನ್ನು ಬಿಜೆಪಿ ಶಾಸಕ ಶಲಭ್ ಮಣಿ ತ್ರಿಪಾಠಿ ತಮ್ಮ ಟ್ವಿಟ್ಟರ್‌ನಲ್ಲಿ “ಗಲಭೆಕೋರರಿಗೆ ರಿಟರ್ನ್ ಗಿಫ್ಟ್” ಎಂದು ಹಂಚಿಕೊಂಡಿದ್ದರು. ಈ ವಿಡಿಯೋ ಬಗ್ಗೆ ನಮಗೆ ಯಾವುದೇ ಮಾಹಿತಿಯಿಲ್ಲ ಎಂದು ಪೊಲೀಸರು ಘಟನೆಯನ್ನು ನಿರಾಕರಿಸಿದ್ದರು.
ಈಗ ಈ ಪ್ರಕರಣಕ್ಕೆ ಹೊಸ ರೂಪ ಬಂದಿದ್ದು, ವಿಡಿಯೋ ಕ್ಲಿಪ್‌ನ ಸತ್ಯಾಸತ್ಯತೆಯನ್ನು ಪರಿಶೀಲಿಸಲು ವಿಚಾರಣೆ ನಡೆಸುತ್ತಿದ್ದೇವೆ. ಅಗತ್ಯವಿದ್ದರೇ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಸಹರಾನ್‌ಪುರ್‌ ನಗರ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್‌ ಕುಮಾರ್‌ ನಿನ್ನೆಯವರೆಗೂ ವಿಡಿಯೋ ಬಗ್ಗೆ ನಮಗೆ ಯಾವುದೇ ಮಾಹಿತಿಯಿಲ್ಲ. ವಿಡಿಯೋ ಎಲ್ಲಿಯದು ಎಂದು ಗೊತ್ತಿಲ್ಲ. ಯಾವುದೇ ದೂರುಗಳು ಬಂದರೆ ವಿಚಾರಿಸುತ್ತೇವೆ ಎಂದು ಹೇಳಿದ್ದರು.

ವೀಡಿಯೊದ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಮತ್ತು ಅಗತ್ಯವಿದ್ದರೆ ಕ್ರಮ ತೆಗೆದುಕೊಳ್ಳಲು ನಗರದ ವರಿಷ್ಠಾಧಿಕಾರಿ ವಿಚಾರಣೆ ನಡೆಸುತ್ತಾರೆ” ಎಂದು ಹಿರಿಯ ಪೊಲೀಸ್ ಅಧೀಕ್ಷಕ ಆಕಾಶ್ ತೋಮರ್ ಅವರನ್ನು NDTV ಉಲ್ಲೇಖಿಸಿದೆ. 

ಇದನ್ನೂ ಓದಿ: ’ಕೆಡವುವಿಕೆ ಪ್ರತಿಕಾರವಾಗಿರಬಾರದು’: ಬುಲ್ಡೋಜರ್‌ ದಾಳಿ ನಡೆಸಿದ್ದ ಯುಪಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್

ಪೊಲೀಸರು ಅಮಾನುಷವಾಗಿ ಹಲ್ಲೆ ಮಾಡುತ್ತಿರುವ ವಿಡಿಯೋವನ್ನು ಉತ್ತರ ಪ್ರದೇಶದ ಬಿಜೆಪಿ ಶಾಸಕ ಶಲಭ್ ಮಣಿ ತ್ರಿಪಾಠಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ, ಇದರಲ್ಲಿ ಪೊಲೀಸರು “ಗಲಭೆಕೋರರಿಗೆ ರಿಟರ್ನ್ ಗಿಫ್ಟ್‌” ಎಂದು ಬರೆದಿದ್ದರು. ಆದರೆ, ಯಾರೂ ಯಾವುದೇ ದೂರು ದಾಖಲಿಸದ ಕಾರಣ ಪ್ರಕರಣದಲ್ಲಿ ಯಾವುದೇ ತನಿಖೆ ನಡೆದಿಲ್ಲ ಎಂದು ರಾಜೇಶ್ ಕುಮಾರ್ ಹೇಳಿದ್ದರು.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ವಿಡಿಯೋದಲ್ಲಿ, ಇಬ್ಬರು ಪೊಲೀಸರು 9 ಜನರನ್ನು ಲಾಠಿಯಿಂದ ಅಮಾನವೀಯವಾಗಿ, ಮನಬಂದಂತೆ ಥಳಿಸುತ್ತಿದ್ದಾರೆ. ಒಂಬತ್ತು ಮಂದಿ ಕೈ ಮುಗಿದ್ದು ಬೇಡಿಕೊಂಡರು ಬಿಡದೆ ಲಾಠಿಯಿಂದ ಥಳಿಸಲಾಗುತ್ತಿದೆ. ಪೊಲೀಸರ ವರ್ತನೆಗೆ ಜನರು ಆಕ್ರೋಶ ಹೊರಹಾಕಿದ್ದರು.
ಎನ್‌ಡಿಟಿವಿ ತನಿಖೆ ನಡೆಸಿದ ಒಂದು ದಿನದ ಬಳಿಕ ಹಿರಿಯ ಪೊಲೀಸ್ ಅಧಿಕ್ಷಕ ಆಕಾಶ್ ತೋಮರ್‌ ಅವರ ಹೇಳಿಕೆ ಬಂದಿವೆ. ಉತ್ತರ ಪ್ರದೇಶವು ದೇಶದಲ್ಲೇ ಅತಿ ಹೆಚ್ಚು ಲಾಕಪ್‌ ಡೆತ್‌ಗಳಲ್ಲಿ ಮೊದಲ ಸ್ಥಾನದಲ್ಲಿದೆ.

 


ಇದನ್ನೂ ಓದಿ: ಯುಪಿ ಪೊಲೀಸರಿಂದ ಅಮಾನವೀಯ ಹಲ್ಲೆ : ಮಾಹಿತಿಯಿಲ್ಲ ಎಂದ ಪೊಲೀಸರು, ದೂರು ನೀಡಲು ಹೆದರುತ್ತಿರುವ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...