Homeಮುಖಪುಟಉತ್ತರ ಪ್ರದೇಶ: ಪಾಸ್‌ಪೋರ್ಟ್‌ ವೆರಿಫಿಕೇಶ್‌ನ್‌ಗಾಗಿ ತೆರಳಿದ್ದ ಮಹಿಳೆ ತಲೆಗೆ ಗುಂಡು ಹಾರಿಸಿದ ಎಸ್‌ಐ!

ಉತ್ತರ ಪ್ರದೇಶ: ಪಾಸ್‌ಪೋರ್ಟ್‌ ವೆರಿಫಿಕೇಶ್‌ನ್‌ಗಾಗಿ ತೆರಳಿದ್ದ ಮಹಿಳೆ ತಲೆಗೆ ಗುಂಡು ಹಾರಿಸಿದ ಎಸ್‌ಐ!

- Advertisement -
- Advertisement -

ಉಮ್ರಾ ಯಾತ್ರೆ ಕೈಗೊಳ್ಳಲು ಪಾಸ್‌ಪೋರ್ಟ್‌ ಪರಿಶೀಲನೆಗಾಗಿ ಪೊಲೀಸ್ ಔಟ್‌ಪೋಸ್ಟ್‌ಗೆ ತೆರಳಿದ್ದ ಮಹಿಳೆಯೊಬ್ಬರ ತಲೆಗೆ ಸಬ್‌ ಇನ್ಸ್‌ಪೆಕ್ಟರ್ ಒಬ್ಬರು ಗುಂಡು ಹಾರಿಸಿರುವ ಘಟನೆ ಉತ್ತರ ಪ್ರದೇಶದ ಆಲಿಗಢ್ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಎರಡು ದಿನಗಳ ಹಿಂದೆ (ಡಿ.8) ನಡೆದಿರುವ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸಬ್ ಇನ್ಸ್‌ಪೆಕ್ಟರ್ ಒಬ್ಬರು ಮೇಜಿನ ಹಿಂದೆ ನಿಂತು ಇನ್ನೊಬ್ಬ ಪೊಲೀಸರಿಂದ ಪಿಸ್ತೂಲ್ ತೆಗೆದುಕೊಳ್ಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಗನ್‌ನಿಂದ ಗುಂಡು ಹಾರಿಸುವ ಕೆಲವೇ ಕ್ಷಣಗಳ ಮೊದಲು ಎಸ್‌ಐ ಅದನ್ನು ಕಾಕ್ ಮಾಡಿದ್ದಾರೆ. ಟೇಬಲ್‌ ಮುಂದೆ ನಿಂತಿದ್ದ ಮಹಿಳೆ ತಲೆಗೆ ಇನ್ಸ್‌ಪೆಕ್ಟರ್ ಹಾರಿಸಿದ ಗುಂಡು ತಗುಲಿದ್ದು, ಸ್ಥಳದಲ್ಲೇ ಕುಸಿದುಬಿದ್ದಿದ್ದಾರೆ.

‘ತನ್ನ ತಾಯಿಯ ಕೆಲಸವನ್ನು ಆದಷ್ಟು ಬೇಗ ಮಾಡಿಕೊಂಡುವಂತೆ ಕೇಳಿದ್ದಕ್ಕೆ ಕೋಪಗೊಂಡಿದ್ದ ಎಸ್‌ಐ ಉದ್ದೇಶಪೂರ್ವಕವಾಗಿ ತನ್ನ ತಾಯಿಯ ಮೇಲೆ ಗುಂಡು ಹಾರಿಸಿದ್ದಾರೆ’ ಎಂದು ಘಟನೆ ಸಂದರ್ಭದಲ್ಲಿ ಆಕೆಯ ಜೊತೆಗಿದ್ದ ಪುತ್ರ ದೂರು ನೀಡಿದ್ದಾರೆ.

ಘಟನೆಯ ನಂತರ ಸ್ಥಳಕ್ಕಾಗಮಿಸಿದ ಅಲಿಗಢದ ಹಿರಿಯ ಪೊಲೀಸ್ ಅಧೀಕ್ಷಕ ಕಲಾನಿಧಿ ನೈತಾನಿ, ‘ಭೋಜ್‌ಪುರ ಪೊಲೀಸ್ ಔಟ್‌ಪೋಸ್ಟ್‌ನಲ್ಲಿ ಈ ಘಟನೆ ಸಂಭವಿಸಿದೆ, ಅಲ್ಲಿ ಇಶ್ರತ್ ನಿಗರ್ ತನ್ನ ಮಗನೊಂದಿಗೆ ಪಾಸ್‌ಪೋರ್ಟ್ ಪರಿಶೀಲನೆಗೆ ತೆರಳಿದ್ದರು. ಎಸ್‌ಐ ಮನೋಜ್ ಶರ್ಮಾ ಅವರ ಪಿಸ್ತೂಲ್‌ನಿಂದ ಹಾರಿದ ಬುಲೆಟ್ ಮಹಿಳೆಯ ತಲೆಗೆ ತಗುಲಿದೆ. ನಾವು ಘಟನೆಯ ಬಗ್ಗೆ ತನಿಖೆ ಪ್ರಾರಂಭಿಸಿದ್ದೇವೆ’ ಎಂದು ಹೇಳಿದ್ದಾರೆ.

‘ಮಹಿಳೆ ತಲೆಗೆ ಹೊಕ್ಕಿರುವ ಗುಂಡು ಇನ್ನೂ ಹಾಗೇ ಇದೆ. ಆಕೆಗೆ ಆಪರೇಷನ್ ಮಾಡಬೇಕೋ, ಬೇಡವೋ ಎಂಬ ಬಗ್ಗೆ ಇನ್ನೂ ಪರಿಶೀಲಿಸಲಾಗುತ್ತಿದೆ’ ಎಂದು ಮಹಿಳೆ ದಾಖಲಾಗಿರುವ ಜವಾಹರಲಾಲ್ ನೆಹರು ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜೂರ್ ಹ್ಯಾರಿಸ್ ಖಾನ್ ಮಾಧ್ಯಮಗಳಿಗೆ ಹೇಳಿದ್ದಾರೆ.

ಹಣಕ್ಕೆ ಬೇಡಿಕೆ ಇಟ್ಟಿದ್ದರೇ ಸಬ್‌ ಇನ್ ಸ್ಪೆಕ್ಟರ್?

ಮೇಲ್ನೋಟಕ್ಕೆ ಇದು ‘ಮಿಸ್‌ ಫೈರ್’ ಎಂದು ಹೇಳಲಾಗುತ್ತಿದ್ದರೂ, ಅವರ ಪುತ್ರ ಉದ್ದೇಶಪೂರ್ವಕ ಎಂದು ಆರೋಪಿಸಿದ್ದಾರೆ. ಪಾಸ್‌ಪೋರ್ಟ್‌ ವೆರಿಫಿಕೇಶನ್‌ ಮಾಡಲು ಸಬ್‌ ಇನ್ಸ್‌ಪೆಕ್ಟರ್ ಶರ್ಮಾ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಘಟನೆ ಸಂಬಂಧ ಈಗಾಗಲೇ ಮನೋಜ್ ಶರ್ಮಾ ಅವರನ್ನು ಅಮಾನತುಗೊಳಿಸಲಾಗಿದೆ. ಕರ್ತವ್ಯ ಸಂದರ್ಭದಲ್ಲಿ ನಿರ್ಲಕ್ಷ್ಯದ ಕಾರಣಕ್ಕೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. ಘಟನೆ ನಂತರ ಮನೋಜ್ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ; ‘ದ್ವೇಷಪೂರಿತ’ ವೀಡಿಯೋ ಹಂಚಿಕೆ: 9 ಜನರ ಮೇಲೆ ಕೇಸ್ ದಾಖಲಿಸಿದ ಜಮ್ಮು-ಕಾಶ್ಮೀರ ಪೊಲೀಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...