Homeಕರ್ನಾಟಕಉತ್ತರ ಪ್ರದೇಶ: ಪತ್ರಕರ್ತ ಜುಬೇರ್‌‌ ವಿರುದ್ಧ ತನಿಖೆಗೆ ಎಸ್‌ಐಟಿ ರಚನೆ

ಉತ್ತರ ಪ್ರದೇಶ: ಪತ್ರಕರ್ತ ಜುಬೇರ್‌‌ ವಿರುದ್ಧ ತನಿಖೆಗೆ ಎಸ್‌ಐಟಿ ರಚನೆ

- Advertisement -
- Advertisement -

ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ, ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್ ವಿರುದ್ಧದ ಪ್ರಕರಣಗಳನ್ನು ಪರಿಶೀಲಿಸಲು ಉತ್ತರ ಪ್ರದೇಶ ಸರ್ಕಾರ ಮಂಗಳವಾರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ.

ಗುಂಪುಗಳ ನಡುವೆ ದ್ವೇಷವನ್ನು ಪ್ರಚೋದಿಸುವ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಜುಬೇರ್‌ ಅವರನ್ನು ಪ್ರಸ್ತುತ ಸೀತಾಪುರ ಜೈಲಿನಲ್ಲಿ ಇರಿಸಲಾಗಿದೆ.

ಮೂಲಗಳ ಪ್ರಕಾರ, ಇಬ್ಬರು ಸದಸ್ಯರ ಎಸ್‌ಐಟಿಗೆ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ (ಐಜಿ) ಪ್ರೀತೀಂದರ್ ಸಿಂಗ್ ನೇತೃತ್ವ ವಹಿಸಲಿದ್ದು, ಡೆಪ್ಯುಟಿ ಇನ್‌ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಅಮಿತ್ ಕುಮಾರ್ ವರ್ಮಾ ತಂಡದ ಸದಸ್ಯರಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜುಬೇರ್ ವಿರುದ್ಧ ಉತ್ತರ ಪ್ರದೇಶದ ಸೀತಾಪುರ, ಲಖಿಂಪುರ ಖೇರಿ, ಹತ್ರಾಸ್ ಮತ್ತು ಮುಜಾಫರ್‌ನಗರ ಜಿಲ್ಲೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಸೀತಾಪುರದಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಂತರ ಜಾಮೀನು ನೀಡಿದ್ದರೂ, ಕಳೆದ ವರ್ಷ ಇದೇ ಜಿಲ್ಲೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಖಿಂಪುರ ಖೇರಿ ಜಿಲ್ಲಾ ನ್ಯಾಯಾಲಯ ಸೋಮವಾರ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಜುಬೇರ್‌‌ ಜೈಲಿನಲ್ಲಿಯೇ ಇರುವಂತಾಗಿದೆ.

ಜುಬೇರ್ ಅವರ ಜಾಮೀನು ಅರ್ಜಿಯನ್ನು ಜಿಲ್ಲಾ ನ್ಯಾಯಾಲಯವು ಬುಧವಾರ ವಿಚಾರಣೆ ನಡೆಸಲಿದೆ. ಜುಬೈರ್ ವಿರುದ್ಧ ಹಲವು ಸ್ಥಳಗಳಲ್ಲಿ ಪ್ರಕರಣಗಳು ದಾಖಲಾಗಿರುವುದರಿಂದ ಎಸ್‌ಐಟಿ ರಚನೆಗೆ ನಿರ್ಧರಿಸಲಾಗಿದೆ ಮತ್ತು ಈ ವಿಷಯದಲ್ಲಿ “ಸಂಪೂರ್ಣ ತನಿಖೆ” ಅತ್ಯಗತ್ಯ ಎಂದು ಮೂಲಗಳು ತಿಳಿಸಿವೆ.

ಟ್ವೀಟ್ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಆರೋಪದ ಮೇಲೆ ಜೂನ್ 27 ರಂದು ದೆಹಲಿ ಪೊಲೀಸರು ಜುಬೈರ್ ಅವರನ್ನು ಬಂಧಿಸಿದ್ದರು. ಮುಸ್ಲಿಮ್ ಮಹಿಳೆಯರನ್ನು ರೇಪ್‌ ಮಾಡುವುದಾಗಿ ಹೇಳಿಕೆ ನೀಡಿರುವ ಹಿಂದುತ್ವ ಧರ್ಮಗುರು ಬಜರಂಗ ಮುನಿಯನ್ನು ‘ಹೇಟ್‌ ಮಾಂಗರ್‌‌’ (ಅಲ್ಪಸಂಖ್ಯಾತರ ಮೇಲೆ ದ್ವೇಷ ಹರಡುವವನು) ಎಂದು ಕರೆದಿದ್ದಕ್ಕೆ ಸೀತಾಪುರದಲ್ಲಿ ಜುಬೇರ್‌‌ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.

ಜುಬೇರ್ ವಿರುದ್ಧ ಲಖಿಂಪುರ ಖೇರಿಯಲ್ಲಿ ಕಳೆದ ವರ್ಷ ಪ್ರಕರಣ ದಾಖಲಾಗಿತ್ತು. ಖಾಸಗಿ ಟಿವಿ ಸುದ್ದಿ ವಾಹಿನಿಯೊಂದರಲ್ಲಿ ಕೆಲಸ ಮಾಡುವುದಾಗಿ ಹೇಳಿಕೊಂಡಿದ್ದ ಆಶಿಶ್ ಕುಮಾರ್ ಕಟಿಯಾರ್ ಎಂಬ ಸ್ಥಳೀಯ ವರದಿಗಾರ ಜುಬೈರ್ ವಿರುದ್ಧ ಜಿಲ್ಲೆಯ ಮೊಹಮ್ಮದಿ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದನು.

ಕಟಿಯಾರ್ ತಮ್ಮ ದೂರಿನಲ್ಲಿ, “ಜುಬೈರ್ ಅವರು ಧಾರ್ಮಿಕ ಭಾವನೆಗಳನ್ನು ಪ್ರಚೋದಿಸುವ ವೀಡಿಯೊವನ್ನು “ಎಡಿಟ್” ಮಾಡಿದ್ದಾರೆ. ಅಲ್ಲದೆ ತಮ್ಮ ಆಲ್ಟ್ ನ್ಯೂಸ್ ವೆಬ್‌ಸೈಟ್‌ನಲ್ಲಿ ಅದನ್ನು ಪೋಸ್ಟ್ ಮಾಡಿದ್ದಾರೆ” ಎಂದಿದ್ದರು. ಜಿಲ್ಲಾ ಪೊಲೀಸರು ಕೆಲ ದಿನಗಳ ಹಿಂದೆ ಜುಬೈರ್ ವಿರುದ್ಧ ಬಂಧನ ವಾರಂಟ್ ಪಡೆದು ಜುಬೇರ್‌ ಅವರನ್ನು ಬಂಧಿಸಿ ಸೀತಾಪುರ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಿದ್ದಾರೆ.

ಜುಬೇರ್‌ ಅವರ ಟ್ವೀಟನ್ನು ಉಲ್ಲೇಖಿಸಿ ದೆಹಲಿ ಪೊಲೀಸರಿಗೆ ದೂರು ನೀಡಿದ್ದ, ‘ಹನುಮಾನ್ ಭಕ್ತ್ @balajikijaiin’ ಎಂಬ ಹೆಸರಿನ ಟ್ವಿಟರ್‌ ಅಕೌಂಟ್ ಇದೀಗ ಡಿಲೀಟ್ ಮಾಡಲಾಗಿದೆ. ಈ ವಿಚಾರವನ್ನು ಸಾಮಾಜಿಕ ಹೋರಾಟಗಾರ, ಟಿಎಂಸಿ ನಾಯಕ ಸಾಕೇತ್‌ ಗೋಖಲೆ ಅವರು ಬಹಿರಂಗಪಡಿಸಿದ್ದಾರೆ.

ಟ್ವಿಟರ್‌‌ನಲ್ಲಿ ಕೇವಲ ಒಂದು ಸಂದೇಶವನ್ನು ಪೋಸ್ಟ್ ಮಾಡಿದ್ದ ಮತ್ತು ಕೇವಲ ಮೂರು ಅನುಯಾಯಿಗಳನ್ನು ಹೊಂದಿದ್ದ ಅನಾಮಧೇಯ ಟ್ವಿಟರ್ ಹ್ಯಾಂಡಲ್‌ನ ದೂರಿನ ಆಧಾರದ ಮೇಲೆ ಪತ್ರಕರ್ತ ಮೊಹಮ್ಮದ್ ಜುಬೇರ್‌ ಅವರನ್ನು ಮೊದಲಿಗೆ ದೆಹಲಿ ಪೊಲೀಸರು ಬಂಧಿಸಿದರು.

ಇದನ್ನೂ ಓದಿರಿ: ಜುಬೇರ್‌‌‌ ಬಂಧನದ ಐದು ದಿನದ ನಂತರ ದೂರುದಾರನನ್ನು ಹುಡುಕುತ್ತಿರುವ ದೆಹಲಿ ಪೊಲೀಸರು!

ಆದರೆ ಜುಬೇರ್‌ ಅವರನ್ನು ಬಂಧಿಸಲು ಕಾರಣವಾಗಿರುವ ಚಿತ್ರವೂ ಎಡಿಟ್ ಮಾಡಿರುವ ಚಿತ್ರವಲ್ಲ, ಬದಲಾಗಿ ಈ ಚಿತ್ರವು 1983ರ ಹಿಂದಿ ಚಲನಚಿತ್ರವಾದ ‘ಕಿಸ್ಸಿ ಸೆ ನಾ ಕೆಹನಾ’ ದೃಶ್ಯವಾಗಿದೆ. ‘ಕಿಸ್ಸಿ ಸೆ ನಾ ಕೆಹನಾ’ ಎಂದರೆ ಕನ್ನಡದಲ್ಲಿ ‘ಯಾರಿಗೂ ಹೇಳಬೇಡಿ’ ಎಂದರ್ಥವಿದೆ. ಈ ರೊಮ್ಯಾಂಟಿಕ್ ಹಾಸ್ಯ ಚಲನಚಿತ್ರವನ್ನು ಹೃಷಿಕೇಶ್ ಮುಖರ್ಜಿ ನಿರ್ದೇಶಿಸಿದ್ದು, ಚಲನಚಿತ್ರ ಮಂಡಳಿಯೂ ಅದಕ್ಕೆ ‘ಯು’ (ಎಲ್ಲರೂ ನೋಡಬಹುದಾದ) ಪ್ರಮಾಣಪತ್ರ ನೀಡಿದೆ. ಅಲ್ಲದೆ ಈ ಚಿತ್ರ ಮತ್ತು ದೃಶ್ಯ ಇನ್ನೂ ಯೂಟ್ಯೂಬ್‌ನಲ್ಲಿ ಲಭ್ಯವಿದೆ.

ಸಿನಿಮಾ ದೃಶ್ಯವೊಂದರ ಕಾರಣಕ್ಕೆ ಜುಬೇರ್‌ ಬಂಧನವಾದ ಬಳಿಕ ಬೇರೆ ಬೇರೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಅವರ ಮೇಲೆ ತನಿಖೆ ನಡೆಸಲಾಗುತ್ತಿದೆ. ಫ್ಯಾಕ್ಟ್‌ ಚೆಕ್ ಮೂಲಕ ಖ್ಯಾತರಾಗಿದ್ದ ಜುಬೇರ್‌ ಅವರು, ದ್ವೇಷ ಭಾಷಣಕಾರರನ್ನು ಅನೇಕ ಸಲ ಬಯಲಿಗೆಳೆದಿದ್ದಾರೆ. ದ್ವೇಷ ಭಾಷಣಗಳನ್ನು ಹೊರಗೆಳೆದು ಪೊಲೀಸರ ಗಮನಕ್ಕೆ ತರುವಲ್ಲಿ ಮುಂಚೂಣಿಯಲ್ಲಿದ್ದ ಜುಬೇರ್‌ ಅವರನ್ನು ಪೊಲೀಸರು ತೀವ್ರತರನಾಗಿ ತನಿಖೆಗೆ ಒಳಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...