ಬಿಜೆಪಿ ಆಡಳಿತದಲ್ಲಿರುವ ಉತ್ತರ ಪ್ರದೇಶದಲ್ಲಿ ಪ್ರತಿದಿನ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ನಡೆಯುತ್ತಲೇ ಇವೆ. ಆದರೆ, ಪಂಚರಾಜ್ಯ ಚುನಾವಣಾ ಪ್ರಚಾರದಲ್ಲಿ ನಿರತರಾಗಿರುವ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದ ಅಭಿವೃದ್ಧಿ ಮತ್ತು ಸುರಕ್ಷತೆ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತಿದ್ದಾರೆ.
ಸೋಮವಾರ ಸಂಜೆ ಆಗ್ರಾ-ಕಾನ್ಪುರ ಹೆದ್ದಾರಿಯಲ್ಲಿರುವ ಜಲಪಾತದ ನಲಾ ಕಾಡಿನಲ್ಲಿ ಗಂಡನ ಮುಂದೆಯೇ ಮಹಿಳೆಯೊಬ್ಬರು ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿರುವ ಘಟನೆ ನಡೆದಿದೆ. ಅತ್ಯಾಚಾರ ನಡೆಸಿದ ಆರೋಪಿಗಳು ವಿಡಿಯೊ ಚಿತ್ರಿಕರಿಸಿ, ಹಣ- ಒಡವೆ ದೋಚಿಕೊಂಡು ಪರಾರಿಯಾಗಿದ್ದಾರೆ.
ಸೋಮವಾರ ಸಂತ್ರಸ್ತೆ ತನ್ನ ಪತಿಯೊಂದಿಗೆ ಶಹದಾರಾಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಘಟನೆ ನಡೆದಿದೆ. ಆಗ್ರಾ-ಕಾನ್ಪುರ ಹೆದ್ದಾರಿಯಲ್ಲಿ ಮೂವರು ಯುವಕರು ಬಲವಂತವಾಗಿ ಇವರ ಬೈಕ್ ನಿಲ್ಲಿಸಿ, ಇಬ್ಬರನ್ನೂ ಕಾಡಿನ ಕಡೆಗೆ ಎಳೆದುಕೊಂಡು ಹೋಗಿ ಗಂಡನ ಮುಂದೆ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಘಟನೆ ಬಗ್ಗೆ ಪೊಲೀಸರಿಗೆ ತಿಳಿಸಿದರೇ ವಿಡಿಯೋ ಹರಿ ಬಿಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಪ್ರಪಾತಕ್ಕಿಳಿದ ಉತ್ತರ ಪ್ರದೇಶ ಪರಿಸ್ಥಿತಿ: ಮಗಳ ತಲೆ ಕಡಿದು ರಸ್ತೆಯಲ್ಲಿ ಪ್ರದರ್ಶಿಸಿದ ಕ್ರೂರ ತಂದೆ
ಈ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ ಪತ್ರಕರ್ತೆ ರೋಹಿಣಿ ಸಿಂಗ್ ಅವರು ಟ್ವೀಟ್ ಮಾಡುವ ಮೂಲಕ ಯೋಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಕಾನ್ಪುರ ಹೆದ್ದಾರಿಯಲ್ಲಿನ ಜಲಪಾತದ ಬಳಿ ನಡೆದ ಘಟನೆ ಕೇಳಿದ ನಂತರ ನಿಮ್ಮ ಹೃದಯ ವಿಚಲಿತಗೊಳ್ಳುತ್ತದೆ. ಗಂಡನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಮಹಿಳೆಯನ್ನು ನಿಲ್ಲಿಸಿ, ಇಬ್ಬರನ್ನೂ ಬಲವಂತವಾಗಿ ಕಾಡಿನ ಕಡೆಗೆ ಕರೆದೊಯ್ಯಲಾಯಿತು. ಮಹಿಳೆಯ ಮೇಲೆ ಗಂಡನ ಮುಂದೆ ಅತ್ಯಾಚಾರ ನಡೆಸಿ ವಿಡಿಯೋ ಮಾಡಲಾಗಿದೆ. ಉತ್ತರಪ್ರದೇಶದಲ್ಲಿ ಅಪರಾಧಿಗಳು ‘ಭಯ ಮುಕ್ತ’ರಾಗಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.
कानपुर हाईवे पर झरना नाला के पास हुई घटना ऐसी है जिसे सुन आपका हृदय विचलित हो जाएगा।
पति के साथ बाइक पर मायके जा रही महिला को रोका गया, दोनों को ज़बरदस्ती जंगल की ओर ले जा कर महिला का उसके पति के सामने ही रेप किया गया और वीडियो बनवाया गया।
उत्तरप्रदेश में अपराधी ‘भयमुक्त’ हैं।
— Rohini Singh (@rohini_sgh) March 31, 2021
ಪತ್ರಕರ್ತೆ ರೋಹಿಣಿ ಸಿಂಗ್ ಅವರ ಟ್ವೀಟ್ ರಿಟ್ವೀಟ್ ಮಾಡಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮೇಲೆ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ.
“ಸೀರಿಯಲ್ ಕ್ರಿಮಿನಲ್ ಮತ್ತು ರೌಡಿ ಶೀಟರ್ ಒಬ್ಬ ರಾಜ್ಯದ ಮುಖ್ಯಮಂತ್ರಿಯಾದಾಗ ಹೀಗಾಗುತ್ತದೆ. ಇದು ಯುಪಿಯ ಯೋಗಿ ಜಿ ಅವರ ರಾಮ ಸಾಮ್ರಾಜ್ಯ!” ಎಂದು ವ್ಯಂಗ್ಯವಾಡಿದ್ದಾರೆ.
जब सीरियल अपराधी और हिस्ट्रीशीटर राज्य का मुख्यमंत्री बन जाए तो ऐसा ही होता है। यह यूपी के योगी जी का राम राज्य है! https://t.co/xaluPhHMQV
— Prashant Bhushan (@pbhushan1) March 31, 2021
ಸಾಮೂಹಿಕ ಅತ್ಯಾಚಾರ ನಡೆಸಿದ ಮೂವರು ಯುವಕರು 10,000 ನಗದು ಮತ್ತು ಆಭರಣಗಳನ್ನು ದೋಚಿದ್ದಾರೆ ಎಂದು ಮಹಿಳೆ ತಿಳಿಸಿದ್ದಾರೆ.
ಸದ್ಯ ಸಂತ್ರಸ್ತೆ ಮೂವರು ಆರೋಪಿಗಳ ವಿರುದ್ಧ, ದರೋಡೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣಗಳ ಅಡಿಯಲ್ಲಿ ಎಟ್ಮಾದ್ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಹಿಳೆಯ ದೂರಿನ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇಲ್ಲಿಯವರೆಗೂ ಯಾರನ್ನೂ ಬಂಧಿಸಿಲ್ಲ.
ಇದನ್ನೂ ಓದಿ: ಉತ್ತರ ಪ್ರದೇಶ- ಶಾಲೆಗೆ ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ನಾಪತ್ತೆ


