Homeಮುಖಪುಟಉತ್ತರ ಪ್ರದೇಶ: ಬಾಲಕಿಗೆ ಕಿರುಕುಳ ನೀಡಿ, ಟೆರೇಸ್‌ನಿಂದ ದೂಡಿದ ದುರ್ಷ್ಕಮಿಗಳು

ಉತ್ತರ ಪ್ರದೇಶ: ಬಾಲಕಿಗೆ ಕಿರುಕುಳ ನೀಡಿ, ಟೆರೇಸ್‌ನಿಂದ ದೂಡಿದ ದುರ್ಷ್ಕಮಿಗಳು

ಉತ್ತರಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಮಹಿಳೆಯರಿಗೆ ಸುರಕ್ಷತೆ ನೀಡುವಲ್ಲಿ ವಿಫಲವಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

- Advertisement -
- Advertisement -

ಉತ್ತರ ಪ್ರದೇಶದ ಲಖನೌದಿಂದ 300 ಕಿ.ಮೀ ದೂರದಲ್ಲಿರುವ ಮೌ ಜಿಲ್ಲೆಯ 15 ವರ್ಷದ ಬಾಲಕಿಯೊಬ್ಬಳ ಮೇಲೆ ಆಕೆಯ ನೆರೆಹೊರೆಯ ಮೂರು ಜನ ಸೇರಿ ಆಕೆಗೆ ಕಿರುಕುಳ ನೀಡಿ, ಹಲ್ಲೆ ನಡೆಸಿ, ಕಟ್ಟಡದ ಟೆರೇಸ್‌ನಿಂದ ದೂಡಿರುವ ದಾರುಣ ಘಟನೆ ನಡೆದಿದೆ.

ಬಾಲಕಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಅಝಮ್‌ಘರ್‌ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತೆಯ ಸ್ಥಿತಿ ಗಂಭೀರವಾಗಿದೆ. ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

15 ವರ್ಷದ ಬಾಲಕಿ ಮೇಲೆ ಆಕೆ ಮನೆಗೆ ಹಿಂತಿರುಗಿದ ಸಂದರ್ಭದಲ್ಲಿ ಅಕ್ಕ-ಪಕ್ಕದ ಮೂವರು ಮಂದಿ ದಾಳಿ ನಡೆಸಿದ್ದಾರೆ. ಈ ಘಟನೆಯ ಕುರಿತು ಅಕ್ಟೋಬರ್ 23 ರಂದು ಪೊಲೀಸರಿಗೆ ದೂರು ನೀಡಲಾಗಿದೆ.

ಬಾಲಕಿಯ ಕುಟುಂಬ ಸಲ್ಲಿಸಿದ ದೂರಿನ ಪ್ರಕಾರ, ಮೂವರು ಆರೋಪಿಗಳು ಆಕೆಯನ್ನು ಕಟ್ಟಡದ ಟೆರೇಸ್‌ಗೆ ಎಳೆದೊಯ್ದಿದ್ದಾರೆ. ಆರೋಪಿಗಳು ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲಿ ಜಗಳ ನಡೆದ ನಂತರ ಆಕೆಯನ್ನು ಮೇಲ್ಛಾವಣಿಯಿಂದ ಎಸೆದಿದ್ದಾರೆ. ಬಾಲಕಿ ಕೂಡ ಆರೋಪಿಗಳು ಹಲ್ಲೆ ನಡೆಸಿರುವುದನ್ನು ಹೇಳಿದ್ದಾರೆ ಎಂದು  ಪೊಲೀಸ್ ಅಧಿಕಾರಿ ಸುಶೀಲ್ ಧುಲೆ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ ಬಾಯ್ಕಾಟ್ ಎಂದ 108 ಆದಿವಾಸಿ ಗ್ರಾಮಗಳು: ಯಾಕೆ? ಇಲ್ಲಿದೆ ವಿವರ

ಬಾಲಕಿಯ ಹೇಳಿಕೆಯ ಆಧಾರದ ಮೇಲೆ ಪೊಲೀಸರು, ಹಲ್ಲೆ ಮತ್ತು ಕಿರುಕುಳ ಪ್ರಕರಣವನ್ನು ದಾಖಲಿಸಿದ್ದಾರೆ. “ಬಾಲಕಿ ಮೂವರನ್ನು ಆರೋಪಿಗಳನ್ನು ಗುರುತಿಸಿದ್ದಾರೆ. ಬಾಲಕಿಯ ಕುಟುಂಬದ ದೂರಿನ ಆಧಾರದಲ್ಲಿ ನಾವು ಪ್ರಕರಣ ದಾಖಲಿಸಿದ್ದೇವೆ. ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ” ಎಂದು ಸುಶೀಲ್ ಧುಲೆ ಹೇಳಿದ್ದಾರೆ.

ಬಾಲಕಿಯ ವೈದ್ಯಕೀಯ ವರದಿಯ ಆಧಾರದ ಮೇಲೆ ಆರೋಪಿಗಳ ಮೇಲೆ ಹೆಚ್ಚಿನ ಪ್ರಕರಣಗಳನ್ನು ಸೇರಿಸಬಹುದು ಎಂದು ಪೊಲೀಸರು ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಮಹಿಳೆಯರಿಗೆ ಸುರಕ್ಷತೆ ನೀಡುವಲ್ಲಿ ವಿಫಲವಾಗಿದೆ ಎಂದು ಪ್ರತಿಪಕ್ಷಗಳು ಆರೋಪ ಮಾಡಿವೆ. ದೇಶವ್ಯಾಪಿ ಪ್ರತಿಭಟನೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಈ ಘಟನೆ ನಡೆದಿದೆ.

ಹತ್ರಾಸ್ ಜಿಲ್ಲೆಯಲ್ಲಿ 19 ವರ್ಷದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಹಿನ್ನೆಲೆ ರಾಜ್ಯ ಸರ್ಕಾರ ವ್ಯಾಪಕವಾದ ಟೀಕೆ ಎದುರಿಸಬೇಕಾಗಿದೆ. ಈ ಪ್ರಕರಣವು ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರಕರಣದ ತನಿಖೆಯನ್ನು ಪ್ರಸ್ತುತ ಸಿಬಿಐ ನಡೆಸುತ್ತಿದೆ.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತ್ವರಿತ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಸಬೇಕು ಮತ್ತು ಅಪ್ರಾಪ್ತ ವಯಸ್ಕರ ವಿರುದ್ಧದ ಅಪರಾಧಗಳನ್ನು ಫೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ವಿಚಾರಣೆಗೆ ಒಳಪಡಿಸಬೇಕು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.


ಇದನ್ನೂ ಓದಿ: ಹತ್ರಾಸ್ ಕೇಸ್: ಅ.29ಕ್ಕೆ ದೇಶಾದ್ಯಂತ ಪ್ರತಿಭಟನೆಗೆ ಮಹಿಳಾ ಸಂಘಟನೆಗಳ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...