Homeಮುಖಪುಟಉತ್ತರಪ್ರದೇಶ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, 8 ಮಂದಿ ಬಂಧನ

ಉತ್ತರಪ್ರದೇಶ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, 8 ಮಂದಿ ಬಂಧನ

ಘಟನೆಗೆ ಸಂಬಂಧಿಸಿದಂತೆ ಎಂಟು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಝಾನ್ಸಿ ಹಿರಿಯ ಪೊಲೀಸ್ ಅಧಿಕಾರಿ ದಿನೇಶ್ ಕುಮಾರ್.ಪಿ ತಿಳಿಸಿದ್ದಾರೆ

- Advertisement -
- Advertisement -

ಉತ್ತರಪ್ರದೇಶದಲ್ಲಿ ಹತ್ರಾಸ್‌ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮರೆಯಾಗಿಲ್ಲ ಆಗಲೇ ಮತ್ತಷ್ಟು ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ. ಉತ್ತರ ಪ್ರದೇಶದ ಪ್ರಾಂತೀಯ ನಾಗರಿಕ ಸೇವೆಗಳ (ಪಿಸಿಎಸ್) ಪ್ರಾಥಮಿಕ ಪರೀಕ್ಷೆ ನಡೆಯುತ್ತಿರುವಾಗ ಝಾನ್ಸಿ ಕಾಲೇಜು ಕ್ಯಾಂಪಸ್‌ನೊಳಗೆ 17 ವರ್ಷದ ಬಾಲಕಿಯ ಮೇಲೆ ಭಾನುವಾರ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

10ನೇ ತರಗತಿ ಓದುತ್ತಿದ್ದ ಬಾಲಕಿಯು ತನ್ನ ದೂರಿನಲ್ಲಿ, ಕಾಲೇಜಿನ ಸುಮಾರು ಒಂದು ಡಜನ್ ವಿದ್ಯಾರ್ಥಿಗಳು ಬಲವಂತವಾಗಿ ತನ್ನನ್ನು ಕ್ಯಾಂಪಸ್ ಒಳಗೆ ಕರೆದೊಯ್ದ ಕೃತ್ಯ ಎಸಗಿದ್ದಾರೆ. ಘಟನೆಯನ್ನು ವಿಡಿಯೋ ಮಾಡಿಕೊಂಡು ಯಾರಿಗಾದರೂ ವಿಷಯ ಬಹಿರಂಗಪಡಿಸಿದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳಾದ ರೋಹಿತ್ ಸೈನಿ ಮತ್ತು ಭಾರತ್ ಕುಶ್ವಾಹ ಸೇರಿದಂತೆ ಎಂಟು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಝಾನ್ಸಿ ಹಿರಿಯ ಪೊಲೀಸ್ ಅಧಿಕಾರಿ (ಎಸ್‌ಎಸ್‌ಪಿ) ದಿನೇಶ್ ಕುಮಾರ್.ಪಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಮತ್ತು ಅಪರಾಧದಲ್ಲಿ ಬೇರೆ ಯಾವುದೇ ವಿದ್ಯಾರ್ಥಿಗಳ ಹೆಸರುಗಳು ಕಾಣಿಸಿಕೊಂಡರೆ, ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಲೈಂಗಿಕ ಕಿರುಕುಳ: ಉತ್ತರಪ್ರದೇಶದ ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷನ ಬಂಧನ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಇವಿಎಂ’ ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

0
ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲು ಶಿವಸೇನಾ ಉದ್ಧವ್‌ ಬಣದ ನಾಯಕ ಅಂಬಾದಾಸ್ ದನ್ವೆ ಅವರಿಂದ 2.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಮಹಾರಾಷ್ಟ್ರ ಪೊಲೀಸರು ಛತ್ರಪತಿ ಸಂಭಾಜಿನಗರದಲ್ಲಿ ಸೇನಾ ಯೋಧನೋರ್ವನನ್ನು ಬಂಧಿಸಿದ್ದಾರೆ. ಮಾರುತಿ ಧಕ್ನೆ(42) ವಿರುದ್ಧ ದೂರು...