Homeಮುಖಪುಟಉತ್ತರ ಪ್ರದೇಶ: ಗೋಧಿ ಕದ್ದ ಆರೋಪದಲ್ಲಿ ಮೂವರು ದಲಿತ ಬಾಲಕರಿಗೆ ಥಳಿತ, ತಲೆ ಬೋಳಿಸಿ ಗ್ರಾಮದಲ್ಲಿ...

ಉತ್ತರ ಪ್ರದೇಶ: ಗೋಧಿ ಕದ್ದ ಆರೋಪದಲ್ಲಿ ಮೂವರು ದಲಿತ ಬಾಲಕರಿಗೆ ಥಳಿತ, ತಲೆ ಬೋಳಿಸಿ ಗ್ರಾಮದಲ್ಲಿ ಮೆರವಣಿಗೆ

- Advertisement -
- Advertisement -

5 ಕೆಜಿ ಗೋಧಿ ಕದ್ದಿದ್ದಾರೆ ಎಂದು ಶಂಕಿಸಿದ ಕೋಳಿ ಫಾರಂ ಮಾಲೀಕರು, ಮೂವರು ದಲಿತ ಬಾಲಕರನ್ನು ಥಳಿಸಿದ್ದಾರೆ. ಸಾಲದ್ದಕ್ಕೆ, ಸಂತ್ರಸ್ತರ ತಲೆ ಬೋಳಿಸಿ, ಅವರ ಮುಖಕ್ಕೆ ಕಪ್ಪುಬಣ್ಣ ಬಳಿದು ಗ್ರಾಮದಲ್ಲಿ ಮೆರವಣಿಗೆ ಮಾಡಿರುವ ಘಟನೆ ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ನಡೆದಿದೆ ಎಂದು ಪೊಲೀಸರ ಮಾಹಿತಿಯನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಕೋಳಿ ಫಾರಂಗೆ ಕೆಲಸಕ್ಕೆ ಹಾಜರಾಗದ ಕಾರಣ ಇಬ್ಬರೂ ಹುಡುಗರಿಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಸಂತ್ರಸ್ತರ ಕುಟುಂಬಗಳು ಆರೋಪಿಸಿದ್ದಾರೆ. ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ನಾನ್‌ಪಾರಾ ಪೊಲೀಸ್ ಠಾಣೆ ವ್ಯಾಪ್ತಿಯ ತಾಜ್‌ಪುರ ಟೆಡಿಯಾ ಗ್ರಾಮದಲ್ಲಿ ಮಂಗಳವಾರ ಈ ಘಟನೆ ವರದಿಯಾಗಿದೆ. 12-14 ವರ್ಷ ವಯೋಮಾನದ ಮೂವರು ಬಾಲಕರನ್ನು ಥಳಿಸಿ, ತಲೆ ಬೋಳಿಸಿ, ಅವರ ಮುಖಕ್ಕೆ ಕಪ್ಪುಮಸಿ ಬಳಿದು ಮೆರವಣಿಗೆ ಮಾಡಿದ್ದಾರೆ.

“ಬಾಲಕರ ಮುಂಗೈಗೆ ‘ಕಳ್ಳ’ ಎಂದು ಬರೆಸಿ, ಕೈ ಕಟ್ಟಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ನಾನ್‌ಪಾರಾ ಎಸ್‌ಎಚ್‌ಒ ಪ್ರದೀಪ್ ಸಿಂಗ್ ಮಾತನಾಡಿ, “ಸಂತ್ರಸ್ತರ ಕುಟುಂಬ ಸದಸ್ಯರ ದೂರಿನ ಆಧಾರದ ಮೇಲೆ, ನಾಲ್ವರು ಆರೋಪಿಗಳಾದ ನಜೀಮ್ ಖಾನ್, ಖಾಸಿಮ್ ಖಾನ್, ಇನಾಯತ್ ಮತ್ತು ಸಾನು ವಿರುದ್ಧ ಬುಧವಾರ ಪ್ರಕರಣ ದಾಖಲಿಸಲಾಗಿದೆ. ಭಾರತೀಯ ನ್ಯಾಯ ಸಂಹಿತಾ ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯ ಸಂಬಂಧಿತ ವಿಭಾಗಗಳಲ್ಲಿ ದೂರು ದಾಖಲಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಗ್ರಾಮದ ಮಾಜಿ ಮುಖ್ಯಸ್ಥ ಸಾನು ತಲೆಮರೆಸಿಕೊಂಡಿದ್ದು, ಉಳಿದ ಮೂವರನ್ನು ಬಂಧಿಸಲಾಗಿದೆ ಎಂದು ಸಿಂಗ್ ಹೇಳಿದ್ದಾರೆ. ಗ್ರಾಮದಲ್ಲಿ ಕೋಳಿ ಫಾರಂ ನಡೆಸುತ್ತಿದ್ದ ನಾಝಿಮ್ ಮತ್ತು ಖಾಸಿಂ, 5 ಕೆಜಿ ಗೋಧಿ ಕಳ್ಳತನ ಮಾಡಿದ್ದಾರೆ ಎಂದು ಬಾಲಕರ ಮೇಲೆ ಆರೋಪ ಮಾಡಿದ್ದರು. ಇಬ್ಬರೂ ಬಾಲಕರಿಗೆ ಜಾತಿ ನಿಂದನೆ ಮಾಡಿ, ತಲೆ ಬೋಳಿಸಿದ್ದಾರೆ. ಅವರ ಮುಖಕ್ಕೆ ಕಪ್ಪುಮಸಿ ಬಳಿದು ಗ್ರಾಮದಲ್ಲಿ ಮೆರವಣಿಗೆ ಮಾಡುವ ಮುನ್ನ ವಿದ್ಯುತ್ ತಂತಿಯಿಂದ ಕತ್ತು ಹಿಸುಕಲು ಯತ್ನಿಸಿದರು. ನಮ್ಮ ಮುಂದೋಳಿನ ಮೇಲೆ ‘ಕಳ್ಳ’ ಎಂದು ಬರೆಯಲಾಗಿದೆ ಎಂದು ಸಂತ್ರಸ್ತರು ಸುದ್ದಿಗಾರರಿಗೆ ತಿಳಿಸಿದರು.

ಆರೋಪಿಗಳ ಜೊತೆಗೂಡಿ ಸಾನು ಮತ್ತು ಇನಾಯತ್ ಹುಡುಗರಿಗೆ ಬೆದರಿಕೆ ಹಾಕಿದರು ಎಂದು ಅವರು ಆರೋಪಿಸಿದ್ದಾರೆ.

ಆರೋಪಿಗಳು ತಮ್ಮ ಮೊಬೈಲ್‌ನಲ್ಲಿ ಕೃತ್ಯವನ್ನು ಚಿತ್ರೀಕರಿಸಿದ್ದಾರೆ. ಈ ಮಧ್ಯೆ, ಕೋಳಿ ಫಾರಂಗೆ ಕೆಲಸಕ್ಕೆ ಹಾಜರಾಗದ ಕಾರಣ ನಜೀಮ್ ಮತ್ತು ಖಾಸಿಮ್ ಮೂವರು ಬಾಲಕರಿಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಸಂತ್ರಸ್ತ ಬಾಲಕರ ಕುಟುಂಬ ಸದಸ್ಯರು ಹೇಳಿದ್ದಾರೆ. ವಿಷಯದ ಸೂಕ್ಷ್ಮತೆಯನ್ನು ಪರಿಗಣಿಸಿ, ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಸಾಕಷ್ಟು ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ; ಕೇಂದ್ರದ ‘ಒಂದು ರಾಷ್ಟ್ರ ಒಂದು ಚುನಾವಣೆ’ ಪ್ರಸ್ತಾವನೆ; ಸರ್ವಾನುಮತದಿಂದ ತಿರಸ್ಕರಿಸಿದ ಕೇರಳ ವಿಧಾನಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...