Homeಮುಖಪುಟಉತ್ತರ ಪ್ರದೇಶ| 40 ವರ್ಷಗಳ ಹಿಂದೆ 24 ದಲಿತರನ್ನು ಕೊಂದಿದ್ದ ಮೂವರಿಗೆ ಮರಣದಂಡನೆ

ಉತ್ತರ ಪ್ರದೇಶ| 40 ವರ್ಷಗಳ ಹಿಂದೆ 24 ದಲಿತರನ್ನು ಕೊಂದಿದ್ದ ಮೂವರಿಗೆ ಮರಣದಂಡನೆ

- Advertisement -
- Advertisement -

1981 ರ ದೇಹೂಲಿ ಹತ್ಯಾಕಾಂಡದಲ್ಲಿ ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ 24 ದಲಿತರನ್ನು ಕೊಂದ ಪ್ರಕರಣದಲ್ಲಿ ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯ ವಿಶೇಷ ನ್ಯಾಯಾಲಯವು ಮಂಗಳವಾರ ಮೂವರಿಗೆ ಮರಣದಂಡನೆ ಶಿಕ್ಷೆ ವಿಧಿಸಿದೆ.

ಯುಪಿಯ ಮೈನ್‌ಪುರಿ ಜಿಲ್ಲೆಯ ವಿಶೇಷ ನ್ಯಾಯಾಧೀಶೆ ಇಂದಿರಾ ಸಿಂಗ್ ಮಾರ್ಚ್ 12 ರಂದು ಮೂವರನ್ನು ದೋಷಿಗಳೆಂದು ತೀರ್ಪು ನೀಡಿದರು. ಕಪ್ತಾನ್ ಸಿಂಗ್ (60), ರಾಂಪಾಲ್ (60) ಮತ್ತು ರಾಮ್ ಸೇವಕ್ (70) ಎಂಬ ಮೂವರನ್ನು ದೋಷಿಗಳೆಂದು ತೀರ್ಪು ನೀಡಿದರು.

ಮರಣದಂಡನೆಯ ಹೊರತಾಗಿ, ನ್ಯಾಯಾಲಯವು ಅಪರಾಧಿಗಳಿಗೆ ರೂ.50,000 ದಂಡವನ್ನು ವಿಧಿಸಿದೆ ಎಂದು ಸರ್ಕಾರಿ ವಕೀಲ ರೋಹಿತ್ ಶುಕ್ಲಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ನವೆಂಬರ್ 18, 1981 ರಂದು ಸಂಜೆ 4.30 ರ ಸುಮಾರಿಗೆ ಖಾಕಿ ಧರಿಸಿದ 17 ಜನರ ಡಕಾಯಿತರ ತಂಡವು ದೇಹೂಲಿಗೆ ನುಗ್ಗಿತು. ಅವರು ಒಂದು ದಲಿತ ಕುಟುಂಬವನ್ನು ಗುರಿಯಾಗಿಸಿಕೊಂಡು, ಆರು ತಿಂಗಳ ಮತ್ತು ಎರಡು ವರ್ಷದ ಮಕ್ಕಳು ಸೇರಿದಂತೆ 24 ಜನರನ್ನು ಗುಂಡಿಕ್ಕಿ ಕೊಂದಿದ್ದರು. ಮೂಲ ಎಫ್‌ಐಆರ್‌ನಲ್ಲಿ 17 ಆರೋಪಿಗಳನ್ನು ಐಪಿಸಿಯ ಸೆಕ್ಷನ್ 302 (ಕೊಲೆ), 307 (ಕೊಲೆಗೆ ಪ್ರಯತ್ನ), ಮತ್ತು 396 (ಕೊಲೆಯೊಂದಿಗೆ ದರೋಡೆ) ಮತ್ತು ಇತರ ಅಪರಾಧಗಳ ಅಡಿಯಲ್ಲಿ ಹೆಸರಿಸಲಾಗಿದೆ.

ಒಟ್ಟು ಆರೋಪಿಗಳಲ್ಲಿ, ವಿಚಾರಣೆಯ ಬಾಕಿ ಇರುವಾಗ 14 ಜನರು ಸಾವನ್ನಪ್ಪಿದರೆ, ಒಬ್ಬನನ್ನು ಪರಾರಿಯಾಗಿದ್ದಾನೆ ಎಂದು ಘೋಷಿಸಲಾಯಿತು. ನವೆಂಬರ್ 19, 1981 ರಂದು ಸ್ಥಳೀಯ ನಿವಾಸಿ ಲೈಕ್ ಸಿಂಗ್ ಅವರು ಎಫ್‌ಐಆರ್ ದಾಖಲಿಸಿದ್ದರು. ವಿವರವಾದ ತನಿಖೆಯ ನಂತರ, ತಂಡದ ನಾಯಕರಾದ ಸಂತೋಷ್ ಮತ್ತು ರಾಧೇ ಸೇರಿದಂತೆ ಡಕಾಯಿತರ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಯಿತು.

ದುರಂತಕ್ಕೆ ಪ್ರತಿಕ್ರಿಯೆಯಾಗಿ, ಆಗಿನ ಪ್ರಧಾನಿ ಇಂದಿರಾ ಗಾಂಧಿ ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಿದ್ದರು. ಆದರೆ, ವಿರೋಧ ಪಕ್ಷದ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರು ದೆಹಲಿಯಿಂದ ಫಿರೋಜಾಬಾದ್‌ನ ಸದುಪುರಕ್ಕೆ ಪಾದಯಾತ್ರೆ ಕೈಗೊಂಡು, ದುಃಖತಪ್ತ ಕುಟುಂಬಗಳಿಗೆ ಬೆಂಬಲ ವ್ಯಕ್ತಪಡಿಸಿದರು.

ನವಭಾರತದಲ್ಲಿ ವಿಪಕ್ಷಗಳ ಧ್ವನಿಯನ್ನು ಮೌನಗೊಳಿಸಲಾಗಿದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...