Homeಮುಖಪುಟಉತ್ತರ ಪ್ರದೇಶ - ಗಂಟಲು ಸೀಳಿ, ಜನನಾಂಗ ವಿರೂಪಗೊಳಿಸಿ ಯುವಕನ ಕೊಲೆ

ಉತ್ತರ ಪ್ರದೇಶ – ಗಂಟಲು ಸೀಳಿ, ಜನನಾಂಗ ವಿರೂಪಗೊಳಿಸಿ ಯುವಕನ ಕೊಲೆ

- Advertisement -
- Advertisement -

ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯ ಬಿಸಾಲ್ಪುರ ಪಟ್ಟಣದ 28 ವರ್ಷದ ಯುವಕನ ಮೃತದೇಹವು ಕುತ್ತಿಗೆ ಸೀಳಿ, ಜನನಾಂಗ ಕತ್ತರಿಸಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಪ್ರೇಮ ಸಂಬಂಧದ ಕಾರಣಕ್ಕಾಗಿ ಯುವಕನನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸರು ಪ್ರತಿಪಾದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಉತ್ತರ ಪ್ರದೇಶ

ಕೊಲೆಗೀಡಾದ ಯುವಕನನ್ನು ಮುಜಮ್ಮಿಲ್ ಎಂದು ಗುರುತಿಸಲಾಗಿದ್ದು, ಬುಧವಾರ ಬರೇಲಿ ಜಿಲ್ಲೆಯ ಇಜ್ಜತ್‌ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬರ್ಕಾಪುರ ಪ್ರದೇಶದ ಕಾಲುವೆಯ ಬಳಿ ಅವರ ಶವವನ್ನು ಕಟ್ಟಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಬಿಸಾಲ್ಪುರದಲ್ಲಿ ನಾಪತ್ತೆಯಾಗಿದ್ದ ಮುಜಮ್ಮಿಲ್ ಅವರ ಶವವನ್ನು ಬಿಸಾಲ್ಪುರ ಮತ್ತು ಇಜ್ಜತ್‌ನಗರ ಪೊಲೀಸರ ಜಂಟಿ ಕಾರ್ಯಾಚರಣೆಯ ನಂತರ ಪತ್ತೆ ಮಾಡಲಾಗಿದೆ. ಬಿಸಾಲ್ಪುರದಲ್ಲಿ ದಾಖಲಾಗಿದ್ದ ನಾಪತ್ತೆ ಪ್ರಕರಣವನ್ನು ಕೊಲೆ ಪ್ರಕರಣವನ್ನಾಗಿ ಪರಿವರ್ತಿಸಲಾಗಿದ್ದು, ಬಿಸಾಲ್ಪುರ ಪೊಲೀಸರು ಹೆಚ್ಚಿನ ತನಿಖೆ ನಡೆಸಲಿದ್ದಾರೆ” ಎಂದು ಬರೇಲಿ ವೃತ್ತ ಅಧಿಕಾರಿ (ಮೂರನೇ) ದೇವೇಂದ್ರ ಕುಮಾರ್ ಗುರುವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಬುಧವಾರ, ಇಜ್ಜತ್‌ನಗರ ಸ್ಟೇಷನ್ ಹೌಸ್ ಆಫೀಸರ್ (SHO) ವಿಜೇಂದ್ರ ಸಿಂಗ್ ಅವರು ಬರ್ಕಾಪುರ ಗ್ರಾಮದ ಕಾಲುವೆಯ ಬಳಿ ಶವವೊಂದರ ಬಗ್ಗೆ ಮಾಹಿತಿ ಪಡೆದರು. ನಮ್ಮ ತಂಡವು ಕಾಲುವೆಯ ಬಳಿಯ ಪೊದೆಗಳಿಂದ ಯುವಕನ ಛಿದ್ರಗೊಂಡ ದೇಹವನ್ನು ವಶಪಡಿಸಿಕೊಂಡಿದೆ. ಮುಜಮ್ಮಿಲ್ ಅವರನ್ನು ಗಂಟಲು ಸೀಳಿ ಕೊಲ್ಲಲಾಗಿದೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಅವರ ಜನನಾಂಗಗಳನ್ನು ಸಹ ಛಿದ್ರಗೊಳಿಸಲಾಗಿದೆ” ಎಂದು ಎಸ್‌ಎಚ್‌ಒ ಸಿಂಗ್ ಹೇಳಿದ್ದಾರೆ.

ಬಿಸಾಲ್ಪುರ ಸಿಒ ಡಾ. ಪ್ರತೀಕ್ ಅವರು ಬಲಿಪಶುವಿನ ದೇಹ ಮತ್ತು ಅಪರಾಧಕ್ಕೆ ಬಳಸಲಾದ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. “ಪಿಲಿಭಿತ್‌ನ ರಿಚೌಲಾ ಗ್ರಾಮದ ಅರ್ಹಾನ್ ಮತ್ತು ಅವರ ಸ್ನೇಹಿತ ಗುಡ್ಡು ಎಂಬ ಇಬ್ಬರು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಕೊಲೆಗೀಡಾದ ಮುಜಮ್ಮಿಲ್ ಶಂಕಿತ ಆರೋಪಿಯ ಕುಟುಂಬದ ಮಹಿಳೆಯೊಂದಿಗೆ ಹೊಂದಿದ್ದ ಸಂಬಂಧದಿಂದ ಉಂಟಾದ ವೈಯಕ್ತಿಕ ದ್ವೇಷದ ಪರಿಣಾಮವಾಗಿ ಈ ಕೊಲೆ ನಡೆದಿದೆ” ಎಂದು ಅವರು ಹೇಳಿದ್ದಾರೆ.

ಮುಜಮ್ಮಿಲ್ ಅವರ ತಂದೆ ಶಂಸುದ್ದೀನ್ ಅವರ ಪ್ರಕಾರ, ಅವರ ಮಗ ಮೊಬೈಲ್ ಟವರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಮಂಗಳವಾರ ಬೆಳಿಗ್ಗೆ ಮನೆಯಿಂದ ಹೊರಟಿದ್ದ ಅವರು ನಂತರ ನಾಪತ್ತೆಯಾಗಿದ್ದರು. ಉತ್ತರ ಪ್ರದೇಶ

“ನಾವು ಅವರಿಗೆ ಕರೆ ಮಾಡಲು ಪ್ರಯತ್ನಿಸಿದಾಗ, ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ನಾವು ಬಿಸಾಲ್ಪುರ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದೇವೆ. ಮುಜಮ್ಮಿಲ್ ಕೆಲವು ವ್ಯಕ್ತಿಗಳೊಂದಿಗೆ ಘರ್ಷಣೆಯನ್ನು ಹೊಂದಿದ್ದರು ಮತ್ತು ಅವರ ಕೊಲೆಗೆ ಅವರೇ ಕಾರಣ ಎಂದು ನಾನು ಅನುಮಾನಿಸುತ್ತೇನೆ” ಎಂದು ಶಂಸುದ್ದೀನ್ ಆರೋಪಿಸಿದ್ದಾರೆ.

ಬಿಸಾಲ್ಪುರ ಪೊಲೀಸ್ ಇನ್ಸ್‌ಪೆಕ್ಟರ್ (ಅಪರಾಧ) ವಿನೋದ್ ಕುಮಾರ್ ಶರ್ಮಾ, “ಅರ್ಹಾನ್ ಮತ್ತು ಗುಡ್ಡು ಕೊಲೆಗೆ ಒಪ್ಪಿಕೊಂಡಿದ್ದಾರೆ. ಮುಜಮ್ಮಿಲ್ ಅರ್ಹಾನ್ ಕುಟುಂಬದ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು. ಇದು ಅವರ ನಡುವೆ ಈ ಹಿಂದೆ ವಿವಾದಗಳಿಗೆ ಕಾರಣವಾಗಿತ್ತು” ಎಂದು ಹೇಳಿದ್ದಾರೆ.

ವಿಚಾರಣೆಯ ಸಮಯದಲ್ಲಿ ಆರೋಪಿಯು ಪೊಲೀಸರಿಗೆ ಮೃತನಿಗೆ ತನ್ನ ಸಹೋದರಿಯೊಂದಿಗೆ ಪ್ರೇಮ ಸಂಬಂಧವಿತ್ತು. ಅವಳನ್ನು ಭೇಟಿಯಾಗದಂತೆ ಹಲವಾರು ಬಾರಿ ಎಚ್ಚರಿಸಿದ ನಂತರವೂ ಅವನು ಕೇಳಲಿಲ್ಲ, ಇದರಿಂದಾಗಿ ಅವನನ್ನು ಕೊಂದಿದ್ದೇವೆ ಎಂದು ತಿಳಿಸಿದ್ದಾನೆ ಎಂದು ವರದಿಯಾಗಿದೆ. “ಪ್ರತಿಕಾರದಿಂದಾಗಿ ಶಂಕಿತರು ಬಿಸಾಲ್ಪುರ ಪ್ರದೇಶದಲ್ಲಿ ಮುಜಮ್ಮಿಲ್‌ನನ್ನು ಕೊಂದು, ಅವನ ದೇಹವನ್ನು ಕಟ್ಟಿ, ಕಾರಿನಲ್ಲಿ ಸಾಗಿಸಿ, ಬರೇಲಿಯಲ್ಲಿ ಎಸೆದಿದ್ದಾರೆ” ಎಂದು ಶರ್ಮಾ ಹೇಳಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ಕಾನೂನು ಕ್ರಮಗಳು ಮತ್ತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂಓದಿ:  ಲಕ್ನೋದ ಐತಿಹಾಸಿಕ ಇಮಾಂಬರಾಗಳು ವಕ್ಫ್ ಭೂಮಿಯಲ್ಲಿ ನಿರ್ಮಿಸಲಾಗಿಲ್ಲ: ಉತ್ತರಪ್ರದೇಶ ಸರ್ಕಾರ

ಲಕ್ನೋದ ಐತಿಹಾಸಿಕ ಇಮಾಂಬರಾಗಳು ವಕ್ಫ್ ಭೂಮಿಯಲ್ಲಿ ನಿರ್ಮಿಸಲಾಗಿಲ್ಲ: ಉತ್ತರಪ್ರದೇಶ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...