ಉತ್ತರ ಪ್ರದೇಶದ ವೃಂದಾವನ ನಗರದ ಅತಿಥಿ ಗೃಹವೊಂದರ ಒಳಚರಂಡಿ ಟ್ಯಾಂಕ್ ಸ್ವಚ್ಛಗೊಳಿಸುವಾಗ ವಿಷಕಾರಿ ಅನಿಲ ಸೇವಿಸಿ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಉತ್ತರ ಪ್ರದೇಶ | ಒಳಚರಂಡಿಗಿಳಿದ
ಮೃತರನ್ನು ನರೇಂದ್ರ (38) ಮತ್ತು ಛೋಟೆಲಾಲ್ (40) ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಹೊರಠಾಣೆ ಉಸ್ತುವಾರಿ ಕುಲವೀರ್ ಸಿಂಗ್ ಹೇಳಿದ್ದಾರೆ. ಯಾವುದೇ ಸುರಕ್ಷತಾ ಸಾಧನಗಳಿಲ್ಲದೆ ಇಬ್ಬರೂ ಕಾರ್ಮಿಕರು ಒಳಚರಂಡಿ ಟ್ಯಾಂಕ್‌ಗೆ ಇಳಿದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ತಿಳಿಸಿದ್ದಾರೆ.
ಶನಿವಾರ ಸಂಜೆ ಈ ಘಟನೆ ನಡೆದಿದ್ದು, ಗುತ್ತಿಗೆದಾರರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಹೊರಠಾಣೆ ಉಸ್ತುವಾರಿ ಕುಲವೀರ್ ಸಿಂಗ್ ತಿಳಿಸಿದ್ದಾರೆ. ವಿಷಾನಿಲ ಸೇವಿಸಿ ಅಸ್ವಸ್ಥರಾಗಿದ್ದು ಪ್ರಜ್ಞೆ ತಪ್ಪಿ ಬಿದ್ದಿದ್ದರು ಎಂದು ವರದಿ ಉಲ್ಲೇಖಿಸಿದ್ದು, ನಂತರ ಇಬ್ಬರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ.
ಘಟನೆಯ ಬಗ್ಗೆ ಮೃತರ ಕುಟುಂಬ ಸದಸ್ಯರು ಆಸ್ಪತ್ರೆಯಲ್ಲಿ ಪ್ರತಿಭಟನೆ ನಡೆಸಿದ್ದು, ಅಧಿಕಾರಿಗಳು ಸೂಕ್ತ ಪರಿಹಾರ ನೀಡುವುದಾಗಿ ಭರವಸೆ ನೀಡಿದ ನಂತರ ಅವರನ್ನು ಸಮಾಧಾನಪಡಿಸಲಾಯಿತು. ಉತ್ತರ ಪ್ರದೇಶ | ಒಳಚರಂಡಿಗಿಳಿದ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಪಂಜಾಬ್ | ಪಾಕಿಸ್ತಾನಕ್ಕೆ ಬೇಹುಗಾರಿಕೆ ನಡೆಸುತ್ತಿದ್ದ ಇಬ್ಬರ ಬಂಧನ

