ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಕೇಂದ್ರ ಗೃಹ ಸಚಿವಾಲಯದ ಅಜಯ್ ಮಿಶ್ರಾ ತೆನಿ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಬೆಂಗಾವಲು ವಾಹನ ಹರಿದು ಇಬ್ಬರು ರೈತರು ಮೃತಪಟ್ಟಿದ್ದಾರೆ ಎಂದು ಎಸ್‌ಕೆಎಂ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಸಂಯುಕ್ತ ಕಿಸಾನ್ ಮೋರ್ಚಾದ ನಾಯಕರಿಗೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ತೆನಿ ಬಹಿರಂಗ ಬೆದರಿಕೆ ಹಾಕಿದ್ದರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರು, ಉತ್ತರ ಪ್ರದೇಶದ ಲಖಿಂಪುರ್ ಖೇರಿಯ ಹೆಲಿಪ್ಯಾಡ್ ಅನ್ನು ಆಕ್ರಮಿಸಿಕೊಂಡಿದ್ದರು.
यह "उत्तम प्रदेश" के किसानों की तस्वीरें है जहां पर किसानों पर गाड़ियां चढ़ा दी गयी।
भाजपा के लिए अपना एक कार्यक्रम किसी भी इंसानी कीमत से कहीं बढ़के है।#Shame https://t.co/nI3anpqPY9 pic.twitter.com/QOp7xlyiZ4
— Kisan Ekta Morcha (@Kisanektamorcha) October 3, 2021
ಕಪ್ಪು ಬಾವುಟದೊಂದಿಗೆ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ತೆನಿ (ಬಹುತೇಕ ಅವರ ಮಗನ ವಾಹನ) ಬೆಂಗಾವಲು ಪಡೆ ಕಾರು ಹರಿಸಿದ್ದಾರೆ. ಘಟನೆಯಲ್ಲಿ ಇಬ್ಬರು ರೈತರು ಸಾವನ್ನಪ್ಪಿದ್ದಾರೆ. ಜೊತೆಗೆ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಸ್‌ಕೆಎಂ ಮುಖಂಡ ತೇಜಿಂದರ್ ಸಿಂಗ್ ವಿರ್ಕ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.
Warning – Viewers would find the visuals being shared distressing.
Video related to the incident. https://t.co/nI3anpqPY9 pic.twitter.com/69dy3PBr1s
— Kisan Ekta Morcha (@Kisanektamorcha) October 3, 2021
ಇಂದು ಬೆಳಗ್ಗೆ ಉತ್ತರ ಪ್ರದೇಶದ ಟಿಕುನಿಯಾದಲ್ಲಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮತ್ತು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ತೆನಿ ಅವರ ಕಾರ್ಯಕ್ರಮ ಆಯೋಜನೆಯಾಗಿತ್ತು. ಈ ಹಿನ್ನೆಲೆಯಲ್ಲಿ ಟಿಕುನಿಯಾದ ಮಹಾರಾಜ ಅಗ್ರಾಸೆನ್ ಮೈದಾನದಲ್ಲಿನ ಹೆಲಿಪ್ಯಾಡ್ ಅನ್ನು ರೈತರು ಆಕ್ರಮಿಸಿಕೊಂಡಿದ್ದರು.
ಸುದ್ದಿ ಮತ್ತಷ್ಟು ಅಪ್‌ಡೇಟ್ ಆಗಲಿದೆ…
ಇದನ್ನೂ ಓದಿ: ರೈತ ನಾಯಕರಿಗೆ ಬಹಿರಂಗ ಬೆದರಿಕೆ: ಹೆಲಿಪ್ಯಾಡ್ ಆಕ್ರಮಿಸಿಕೊಂಡ ರೈತರಿಂದ ಸರ್ಕಾರಕ್ಕೆ ಸವಾಲ್


