Homeಮುಖಪುಟಉನ್ನಾವೋ ಚುನಾವಣೆ: ಅತ್ಯಾಚಾರ ಸಂತ್ರಸ್ತೆ ತಾಯಿಗೆ ಟಿಕೆಟ್ ನೀಡಿದ್ದ ಕಾಂಗ್ರೆಸ್, ಮುನ್ನಡೆ ಯಾರಿಗೆ?

ಉನ್ನಾವೋ ಚುನಾವಣೆ: ಅತ್ಯಾಚಾರ ಸಂತ್ರಸ್ತೆ ತಾಯಿಗೆ ಟಿಕೆಟ್ ನೀಡಿದ್ದ ಕಾಂಗ್ರೆಸ್, ಮುನ್ನಡೆ ಯಾರಿಗೆ?

- Advertisement -
- Advertisement -

ಉತ್ತರ ಪ್ರದೇಶದ ಉನ್ನಾವೋ ಚುನಾವಣೆ ಈ ಬಾರಿ ಬಹು ಆಸಕ್ತಿದಾಯಕ ವಿಚಾರದಿಂದ ಗಮನ ಸೆಳೆದಿತ್ತು. ಉನ್ನಾವೋ ಅತ್ಯಾಚಾರ ಸಂತ್ರಸ್ತೆ ತಾಯಿಗೆ ಟಿಕೆಟ್ ನೀಡಿ ಕಾಂಗ್ರೆಸ್ ಹೊಸ ಅಧ್ಯಯನ ಬರೆಯಲು ನಿರ್ಧರಿಸಿತ್ತು. ಆದರೆ, ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

ಉನ್ನಾವೊ ಲೋಕಸಭಾ ಕ್ಷೇತ್ರದ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಇದು ಕೂಡ ಒಂದಾಗಿದೆ. ಫೆಬ್ರವರಿ 23 ರಂದು ನಾಲ್ಕನೇ ಹಂತದಲ್ಲಿ ಮತದಾನ ನಡೆದ ಈ ಕ್ಷೇತ್ರದಲ್ಲಿ ಪ್ರಸ್ತುತ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಪಂಕಜ್ ಗುಪ್ತಾ ಮುನ್ನಡೆ ಕಾಯ್ದುಕೊಂಡಿದ್ದಾರೆ. ಅವರು 2017 ರ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಮನೀಶಾ ದೀಪಕ್ ಅವರನ್ನು 46,072 ಅಂತರದಿಂದ ಸೋಲಿಸಿದ್ದರು.

ಈ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಅಭಿನವ್ ಕುಮಾರ್  ಎಂಬ ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು. ಕಾಂಗ್ರೆಸ್ ಪಕ್ಷ ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿ ಆಶಾ ಸಿಂಗ್ ಅವರನ್ನು ಕಣಕ್ಕಿಳಿಸಿತ್ತು.

ಈವರೆಗೆ ಬಿಜೆಪಿ ಅಭ್ಯರ್ಥಿ ಪಂಕಜ್ ಗುಪ್ತಾ 32,726 ಮತಗಳು ಪಡೆದಿದ್ದಾರೆ,  ಸಮಾಜವಾದಿ ಪಕ್ಷ ಅಭಿನವ್ ಕುಮಾರ್ 24, 682 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆಶಾ ಸಿಂಗ್ 355 ಮತಗಳನ್ನು ಗಳಿಸಿದ್ದಾರೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಫಲಿತಾಂಶ ಮುಂದುವರೆಯುತ್ತಿದ್ದು ಇದುವರೆಗೂ ಆಡಳಿತರೂಢ ಬಿಜೆಪಿ ಮುನ್ನಡೆಯಲ್ಲಿದೆ. ಈ ಮಧ್ಯೆ, ಸಿರತು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ರಾಜ್ಯದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಹಿನ್ನಡೆಯಲ್ಲಿದ್ದಾರೆ.

ಮುಖ್ಯಮಂತ್ರಿ ಆದಿತ್ಯನಾಥ್ ಅವರು ಗೋರಖ್‌ಪುರ ನಗರ ಕ್ಷೇತ್ರದಲ್ಲಿ ಮುನ್ನಡೆ. ಎಸ್‌ಪಿ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಅವರು ಕರ್ಹಾಲ್ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದು ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿಯ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಸ್ವಾಮಿ ಪ್ರಸಾದ್ ಮೌರ್ಯ ಅವರು ಫೈಝಾನಗರ ಕ್ಷೇತ್ರದಲ್ಲಿ ಎಸ್‌ಪಿ ಟಿಕೆಟ್‌ನಿಂದ ಸ್ಪರ್ಧಿಸಿದ್ದರು. ಆದರೆ ಅವರು ಹಿನ್ನಡೆ ಅನುಭವಿಸಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ಕಾಂಗ್ರೆಸ್‌ನಿಂದ ಟಿಕೆಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ: ಬಾಲಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

0
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟಸಂಭವಿಸಿ ಏಳು ವರ್ಷದ ಬಾಲಕ ಸಾವನ್ನಪ್ಪಿದ್ದು, ಇತರ ಇಬ್ಬರು ಅಪ್ರಾಪ್ತ ಬಾಲಕರಿಗೂ ತೀವ್ರ ಗಾಯಗಳಾಗಿದೆ. ಮೃತ ಬಾಲಕನನ್ನು ರಾಜ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ರೂಪಮ್...