Homeದಲಿತ್ ಫೈಲ್ಸ್ಉತ್ತರ ಪ್ರದೇಶ: ಪರೀಕ್ಷೆಯಲ್ಲಿ ತಪ್ಪು ಬರೆದಿದ್ದಕ್ಕೆ ದಲಿತ ಬಾಲಕನನ್ನು ಥಳಿಸಿ ಕೊಂದ ಸವರ್ಣೀಯ ಶಿಕ್ಷಕ; ಭುಗಿಲೆದ್ದ...

ಉತ್ತರ ಪ್ರದೇಶ: ಪರೀಕ್ಷೆಯಲ್ಲಿ ತಪ್ಪು ಬರೆದಿದ್ದಕ್ಕೆ ದಲಿತ ಬಾಲಕನನ್ನು ಥಳಿಸಿ ಕೊಂದ ಸವರ್ಣೀಯ ಶಿಕ್ಷಕ; ಭುಗಿಲೆದ್ದ ಹಿಂಸಾಚಾರ

- Advertisement -
- Advertisement -

ಸೆಪ್ಟೆಂಬರ್ 7 ರಂದು ನಡೆದ ಪರೀಕ್ಷೆಯೊಂದರಲ್ಲಿ ತಪ್ಪು ಉತ್ತರ ಬರೆದಿದ್ದಕ್ಕಾಗಿ ಸವರ್ಣೀಯ ಶಿಕ್ಷಕನಿಂದ ಥಳಿತಕ್ಕೊಳಗಾಗಿ 15 ವರ್ಷದ ದಲಿತ ಬಾಲಕ ಮೃತಪಟ್ಟಿದ್ದು ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ಸೋಮವಾರ ವರದಿಯಾಗಿತ್ತು. ಥಳಿತಕ್ಕೊಳಗಾದ ಬಾಲಕನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಅವರ ಸಾವಿನ ನಂತರ ಜಿಲ್ಲೆಯಲ್ಲಿ ಹಿಂಸಾತ್ಮಕ ಪ್ರತಿಭಟನೆ ಭುಗಿಲೆದ್ದಿದ್ದು, ಎರಡು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.

ಪೊಲೀಸ್‌ ವಾಹನಕ್ಕೆ ಬೆಂಕಿ ಹಚ್ಚಿದ್ದು ಮಾತ್ರವಲ್ಲದೆ, ಇತರ ಎರಡು ವಾಹನಗಳಿಗೂ ಹಾನಿ ಮಾಡಲಾಗಿದೆ. ಉದ್ರಿಕ್ತ ಪ್ರತಿಭಟನಾಕಾರರು ಪೊಲೀಸ್ ಅಧಿಕಾರಿಗಳ ಮೇಲೆ ಕಲ್ಲು ತೂರಾಟ ಕೂಡಾ ನಡೆಸಿದ್ದಾರೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಕ್ಷಕ ಅಶ್ವಿನಿ ಸಿಂಗ್ ತನ್ನ ಮಗನ ಮೇಲೆ ದೊಣ್ಣೆ, ರಾಡ್‌ಗಳಿಂದ ಹಲ್ಲೆ ನಡೆಸಿ ಪ್ರಜ್ಞೆ ತಪ್ಪುವವರೆಗೂ ಒದ್ದಿದ್ದಾನೆ ಎಂದು ಬಾಲಕನ ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. “ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಅವನಿಗೆ ಪ್ರಜ್ಞೆ ಬಂದಿತ್ತು, ಆದರೆ ಉಸಿರಾಡಲು ಕಷ್ಟವಾಗುತ್ತಿತ್ತು. ಬಾಲಕನಿಗೆ ಆಂತರಿಕ ಗಾಯಗಳಾಗಿವೆ ಎಂದು ವೈದ್ಯರು ಹೇಳಿದ್ದಾರೆ” ಎಂದು ಅವರು ಹೇಳಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಬಾಲಕನನ್ನು ಹೊಡೆದು ಕೊಂದ ಸವರ್ಣೀಯ ಶಿಕ್ಷಕ

ಈ ನಡುವೆ ಬಾಲಕನಿಗೆ ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತಾದರೂ, ಚೇತರಿಸಿಕೊಂಡಿರಲಿಲ್ಲ. ಅವರನ್ನು ಸೋಮವಾರ ಸೈಫೈಗೆ ಕರೆದೊಯ್ಯುವಾ ಆಂಬ್ಯುಲೆನ್ಸ್‌ನಲ್ಲಿ ಸಾವನ್ನಪ್ಪಿದ್ದರು.

ಸೆಪ್ಟೆಂಬರ್ 7 ರಂದು ಹಲ್ಲೆ ನಡೆಸಿದ್ದ ಅಶ್ವಿನಿ ಸಿಂಗ್ ಬಾಲಕನ ವೈದ್ಯಕೀಯ ಚಿಕಿತ್ಸೆಗೆ ಹಣ ನೀಡುವುದಾಗಿ ಭರವಸೆ ನೀಡಿದ್ದನು. ಒಟ್ಟು ಎರಡು ಕಂತುಗಳಲ್ಲಿ ಕೇವಲ 40,000 ರೂ.ಗಳನ್ನು ನೀಡಿದ್ದನು. ಹೆಚ್ಚಿನ ಹಣ ಬೇಡಿಕೆ ಇಟ್ಟಾಗ ಬೆದರಿಕೆ ಹಾಕಿದ್ದಾಗಿ ಬಾಲಕನ ತಂದೆ ಹೇಳಿದ್ದಾರೆ.

“ನಮ್ಮ ಮಾತುಕತೆಯ ಸಮಯದಲ್ಲಿ ಶಿಕ್ಷಕ ಅಸಭ್ಯವಾಗಿ ಕೂಡಾ ವರ್ತಿಸಿದ್ದು, ಮಾತ್ರವಲ್ಲದೆ ಜಾತಿ ನಿಂದನೆ ಕೂಡಾ ಮಾಡಿದ್ದಾನೆ. ಹೀಗಾಗಿ ನಾವು ನಂತರ ಪೊಲೀಸ್ ಠಾಣೆಗೆ ಹೋಗಿ ಆತನ ವಿರುದ್ಧ ಸೆಪ್ಟೆಂಬರ್ 24 ರಂದು ದೂರು ಸಲ್ಲಿಸಿದ್ದೇವೆ” ಎಂದು ಬಾಲಕನ ತಂದೆ ಆರೋಪಿಸಿದ್ದಾರೆ.

ಇದನ್ನೂ ಓದಿ: ಯುಪಿ: ದಲಿತ ಬಾಲಕಿಗೆ ಶಿಕ್ಷಣ ನೀಡಲು ನಿರಾಕರಿಸಿದ ಶಿಕ್ಷಕಿ

ಶಿಕ್ಷಕ ಅಶ್ವಿನಿ ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 308, 323, 504 ಮತ್ತು ಪರಿಶಿಷ್ಟ ಜಾತಿಗಳ ಕೆಲವು ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಶಿಕ್ಷಕನನ್ನು ಬಂಧಿಸಲು ಅಧಿಕಾರಿಗಳು ಶಾಲೆಗೆ ಹೋದಾಗ ಅವರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಚಾರು ನಿಗಮ್ ಹೇಳಿದ್ದಾರೆ. ಅವರನ್ನು ಬಂಧಿಸಲು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಕಾಂಗ್ರೆಸ್ ಪ್ರಣಾಳಿಕೆ ಕುರಿತು ಬಿಜೆಪಿ ಹಾಕಿರುವ ಪೋಸ್ಟ್ ಸುಳ್ಳು

0
"ಕಾಂಗ್ರೆಸ್ ಪ್ರಾಣಾಳಿಕೆಯಾ ಅಥವಾ ಮುಸ್ಲಿಂ ಲೀಗ್ ಪ್ರಣಾಳಿಕೆಯಾ?" "ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಜಾರಿ, ಮುಸ್ಲಿಮರಿಗೆ ಸಂಪತ್ತಿನ ಹಂಚಿಕೆ, ಮುಸ್ಲಿಮರಿಗೆ ವಿಶೇಷ ಮೀಸಲಾತಿ, ವೈಯಕ್ತಿಕ ಕಾನೂನುಗಳನ್ನು ಅಭ್ಯಾಸ ಮಾಡುವ ಸ್ವಾತಂತ್ರ್ಯ, ಮುಸ್ಲಿಮರನ್ನು ನೇರವಾಗಿ ನ್ಯಾಯಾಧೀಶರಾಗಿ ನೇಮಿಸಬೇಕು,...