Homeಮುಖಪುಟಉತ್ತರ ಪ್ರದೇಶದಲ್ಲಿ ಬಸ್‌ಗೆ ಟ್ರಕ್ ಡಿಕ್ಕಿ: ರಸ್ತೆಯಲ್ಲಿ ಮಲಗಿದ್ದ 18 ಕಾರ್ಮಿಕರ ದುರ್ಮರಣ

ಉತ್ತರ ಪ್ರದೇಶದಲ್ಲಿ ಬಸ್‌ಗೆ ಟ್ರಕ್ ಡಿಕ್ಕಿ: ರಸ್ತೆಯಲ್ಲಿ ಮಲಗಿದ್ದ 18 ಕಾರ್ಮಿಕರ ದುರ್ಮರಣ

- Advertisement -
- Advertisement -

ಲಖನೌದಿಂದ 28 ಕಿ.ಮೀ ದೂರದಲ್ಲಿರುವ ಉತ್ತರ ಪ್ರದೇಶದ ಬರಾಬಂಕಿ ಜಿಲ್ಲೆಯಲ್ಲಿ ವೇಗವಾಗಿ ಚಲಿಸುತ್ತಿದ್ದ ಟ್ರಕ್‌ವೊಂದು ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿ ಮಲಗಿದ್ದ 18 ಮಂದಿ ಕಾರ್ಮಿಕರು ಸ್ಥಳದಲ್ಲೇ ಚಿರನಿದ್ರೆಗೆ ಜಾರಿರುವ ದುರಂತ ಘಟನೆ ನಡೆದಿದೆ.

ಬಿಹಾರ ಮೂಲದ ಕಾರ್ಮಿಕರು ಹರಿಯಾಣ ಮತ್ತು ಪಂಜಾಬ್‌ನಿಂದ ತಮ್ಮ ಊರಿಗೆ ಹಿಂದಿರುಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್‌ನ ಆಕ್ಸಲ್ ಬ್ಲೇಡ್ ಕಟ್ ಆಗಿದೆ. ಹೀಗಾಗಿ ಕಾರ್ಮಿಕರು ಬಸ್ ಮುಂದೆ ರಸ್ತೆಯಲ್ಲಿಯೇ ಮಲಗಿದ್ದರು ಎನ್ನಲಾಗಿದೆ.

ನಿಂತಿದ್ದ ಬಸ್‌ಗೆ ವೇಗವಾಗಿ ಚಲಿಸುತ್ತಿದ್ದ ಟ್ರಕ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಇದರಿಂದ ಬಸ್ ಮುಂದೆ ಸಾಗಿ, ಮಲಗಿದ್ದ ಕಾರ್ಮಿಕರ ಮೇಲೆ ಹರಿದಿದ್ದು, ದುರಂತ ಸಂಭವಿಸಿದೆ. ಘಟನೆಯಲ್ಲಿ 25 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ನವಜೋತ್ ಸಿಧು ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 3 ಸಾವು, 60 ಮಂದಿ ಗಾಯಾಳು

“ಘಟನೆಯಲ್ಲಿ ಗಾಯಗೊಂಡಿರುವ ಕಾರ್ಮಿಕರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬಸ್‌ನ ಕೆಳಗೆ ಸಿಲುಕಿರುವ ಕಾರ್ಮಿಕರ ಮೃತದೇಹಗಳನ್ನು ವಶಪಡಿಸಿಕೊಳ್ಳಲು ಕಾರ್ಯಾಚರಣೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಸತ್ಯ ನಾರಾಯಣ್ ಸಬತ್ ತಿಳಿಸಿದ್ದಾರೆ.

“ನಾವು ಹರಿಯಾಣದ ಅಂಬಾಲಾ ಬಸ್ ನಿಲ್ದಾಣದಿಂದ ಬಿಹಾರಕ್ಕೆ ಸುಮಾರು 130 ಜನರಿದ್ದೆವು. ರಾತ್ರಿ 8 ರ ಸುಮಾರಿಗೆ ಬಸ್ ಆಕ್ಸಲ್ ಬ್ಲೇಡ್ ಕಟ್ ಆಯಿತು. ದುರಸ್ತಿ ಕಾರ್ಯಕ್ಕೆ ಸಮಯವಾಗುತ್ತದೆ ಎಂದು ಚಾಲಕ ಮಾಹಿತಿ ನೀಡಿದರು. ನಮ್ಮಲ್ಲಿ ಹಲವರು ಬಸ್‌ನಿಂದ ಹೊರಬಂದು ವಿಶ್ರಾಂತಿ ಪಡೆಯುತ್ತಿದ್ದರು. ಕೆಲವರು ರಸ್ತೆಯಲ್ಲಿ ಮಲಗಿದ್ದರು, ಕೆಲವರು ಊಟ ಮಾಡುತ್ತಿದ್ದರು. ರಾತ್ರಿ 11 ರ ಸುಮಾರಿಗೆ, ನಿಲುಗಡೆ ಮಾಡಿದ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದಿದ್ದು, ಅನೇಕ ಸಾವುನೋವು ಸಂಭವಿಸಿದೆ” ಎಂದು ಬಸ್‌ನಲ್ಲಿದ್ದ ಭರತ್ ಮಾಹಿತಿ ನೀಡಿದಾರೆ.

ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

 


ಇದನ್ನೂ ಓದಿ: ನರಗುಂದ ಹೋರಾಟ ಮುಗಿಸಿ ತೆರಳುತ್ತಿದ್ದಾಗ ಅಪಘಾತ: ಹಿರಿಯ ರೈತ ಮುಖಂಡರಾದ ಜಿ.ಟಿ ರಾಮಸ್ವಾಮಿ, ರಾಮಣ್ಣ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...